Sunday, 15th December 2024

ಸಾರಿಗೆ ಇಲಾಖೆಯಲ್ಲಿ 50 ವರ್ಷ ಮೇಲ್ಪಟ್ಟ ನೌಕರರಿಗೆ ರಜೆ

ವಿಶ್ವವಾಣಿ ಸುದ್ದಿಮನೆ

ಬೆಂಗಳೂರು

ಕರೋನಾ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆೆಲೆಯಲ್ಲಿ 50ವರ್ಷ ಮೇಲ್ಪಟ್ಟ 10 ಸಾವಿರ ಸಾರಿಗೆ ನೌಕರರಿಗೆ ಕಡ್ಡಾಾಯ ರಜೆ ನೀಡಲಾಗಿದೆ.

ಪೊಲೀಸ್ ಇಲಾಖೆಯಲ್ಲಿ 50 ವರ್ಷ ಮೇಲ್ಪಟ್ಟ ಸಿಬ್ಬಂದಿಗಳಿಗೆ ಕಡ್ಡಾಯ ರಜೆ ನೀಡಿದಂತೆ ಸಾರಿಗೆ ಇಲಾಖೆಯ 4 ವಿಭಾಗಗಳಲ್ಲೂ 10 ಸಾವಿರ ನೌಕರರಿಗೆ ರಜೆ ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ. ಅಧಿಕಾರಿಗಳಿಂದ ಹಿಡಿದು ಕೆಳಹಂತದವರೆಗೂ 4 ವಿಭಾಗಗಳಾದ ಬಿಎಂಟಿಸಿ, ಕೆಎಸ್‌ಆರ್‌ಟಿಸಿ, ವಾಯುವ್ಯ ಹಾಗೂ ಈಶಾನ್ಯ ಸಾರಿಗೆ ಸಂಸ್ಥೆೆಯ ನೌಕರರಿಗೆ ರಜೆಯಲ್ಲಿರುವಂತೆ ಸೂಚನೆ ನೀಡಲಾಗಿದೆ.

50ವರ್ಷ ಮೇಲ್ಪಟ್ಟವರಲ್ಲಿ ಕರೋನಾ ಸೋಂಕು ದೃಢಪಟ್ಟರೆ ಅಂಥವರು ಚೇರರಿಸಿಕೊಳ್ಳುವುದು ಕಷ್ಟವಾಗುತ್ತದೆ. ಹೀಗಾಗಿ ಇರುವ ಸಿಬ್ಬಂದಿಯೇ ಸಂಸ್ಥೆೆಯನ್ನು ಮುನ್ನೆೆಡೆಸಿಕೊಂಡು ಹೋಗುವಂತೆ ಸೂಚನೆ ನೀಡಲಾಗಿದೆ. ಜತೆಗೆ ಲಾಕ್‌ಡೌನ್ ಸಡಿಲಿಕೆಯಾದ ನಂತರ ಸಾರಿಗೆ ಸಂಚಾರವನು ಆರಂಭಿಸಿದರೂ ಪ್ರಯಾಣಿಕರಿಂದ ಹೇಳಿಕೊಳ್ಳುವಂತಹ ಪ್ರತಿಕ್ರಿಯೆ ಬರುತ್ತಿಲ್ಲ. ಬಸ್‌ನಲ್ಲಿ ಸಂಚರಿಸಿದರೆ ಸೋಂಕು ಹಬ್ಬಬಹುದೆಂಬ ಭೀತಿಯಿಂದಾಗಿ ಜನರು ಬಸ್‌ನಲ್ಲಿ ಪ್ರಯಾಣಿಸಲು ಹಿಂದೇಟು ಹಾಕುತ್ತಿದ್ದಾರೆ.

ಪ್ರಾಾರಂಭದ ಮೊದಲೆರಡು ವಾರದಲ್ಲಿ ಒಂದಿಷ್ಟು ಉತ್ತಮ ಪ್ರತಿಕ್ರಿಯೆ ಕಂಡುಬಂದಿತ್ತು. ಆದರೆ ಯಾವಾಗ ರಾಜಧಾನಿ ಬೆಂಗಳೂರು ಸೇರಿದಂತೆ ಮತ್ತಿತರ ಜಿಲ್ಲೆಗಳಲ್ಲಿ ಸೋಂಕಿನ ಪ್ರಕರಣ ಶರವೇಗದಲ್ಲಿ ಏರಿಕೆಯಾಯಿತೊ ಪ್ರಯಾಣಿಕರು ಬಸ್ ಹತ್ತುವುದಕ್ಕೆೆ ಹೆದರುತ್ತಿದ್ದಾರೆ. ಹೀಗಾಗಿ ಬಸ್‌ಗಳ ಮೇಲೆ ಅವಲಂಬಿತರಾಗಿದ್ದ ಪ್ರಯಾಣಿಕರು ಇದೀಗ ತಮ್ಮ ಸ್ವಂತ ವಾಹನಗಳ ಮೇಲೆ ಅವಲಂಬಿತರಾಗಿದ್ದಾರೆ. ಸಂಸ್ಥೆೆಗೆ ಆದಾಯ ಇಲ್ಲದೆ ಸಿಬ್ಬಂದಿಗಳಿಗೆ ವೇತನ ನೀಡಲು ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿರುವುದರಿಂದ ಸಿಬ್ಬಂದಿಯನ್ನು ಕಡಿತಗೊಳಿಸಲು ತೀರ್ಮಾನಿಸಲಾಗಿತ್ತು.ಇದೀಗ 50 ವರ್ಷ ಮೇಲ್ಪಟ್ಟವರಿಗೆ ಕಡ್ಡಾಯ ರಜೆ ನೀಡುತ್ತಿರುವುದಕ್ಕೆ ಇದು ಕೂಡ ಕಾರಣವಿರಬಹುದು ಎನ್ನಲಾಗುತ್ತಿದೆ.

ಕೆಆರ್‌ಟಿಸಿ ಮತ್ತು ಬಿಎಂಟಿಸಿಯಿಂದ ಸಂಸ್ಥೆೆಗೆ ನಿರೀಕ್ಷಿತ ಪ್ರಮಾಣದ ಲಾಭ ಸಿಗುತ್ತಿಲ್ಲ. ಸ್ವತಃ ಸಾರಿಗೆ  ಸಚಿವರೇ ತಡೆ ಹಿಡಿದಿದ್ದ 200 ಕೋಟಿಗೂ ಹೆಚ್ಚು ಹಣವನ್ನು ಬಿಡುಗಡೆ ಮಾಡಬೇಕೆಂದು ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಹಣಕಾಸು ಇಲಾಖೆ ಅಧಿಕಾರಿಗಳಿಗೆ ಹಲವಾರು ಬಾರಿ ಮನವಿ ಮಾಡಿದ್ದರು. ಒಂದು ಹಂತದಲ್ಲಿ ಸಿಬ್ಬಂದಿಗಳಿಗೆ ವೇತನವನ್ನೇ ಕೊಟ್ಟಿರಲಿಲ್ಲ. ಇದೀಗ ಕರೋನಾ ಸೋಂಕು ಇಳಿಮುಖವಾಗುವ ಯಾವ ಲಕ್ಷಣವೂ ಕಾಣುತ್ತಿಲ್ಲ. ದಿನದಿಂದ ದಿನಕ್ಕೆ ಸೋಂಕು ಹೆಚ್ಚುತ್ತಲೇ ಇರುವುದರಿಂದ ಕೆಲವು ಸಿಬ್ಬಂದಿಗೆ ಕಡ್ಡಾಯ ರಜೆ ತೆಗೆದುಕೊಳ್ಳಲು ಸೂಚಿಸಲಾಗಿದೆ ಎಂದು ಇಲಾಖೆ ತಿಳಿಸಿದೆ.