ವಿಶ್ವವಾಣಿ ಸುದ್ದಿಮನೆ ಬೆಂಗಳೂರು:
ಮುಖ್ಯಮಂತ್ರಿ ಮತ್ತು ನಗರ ಪೊಲೀಸ್ ಆಯುಕ್ತರನ್ನು ನಿಂದಿಸಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ಹರಿಬಿಡುತ್ತಿದ್ದ ಮಾನಸಿಕ ಅಸ್ವಸ್ಥನನ್ನು ಮಹಾಲಕ್ಷ್ಮಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ.
ಮಹಾಲಕ್ಷ್ಮಿ ಲೇಔಟ್ ನ ಸುಧೀರ್(35) ಬಂಧಿತ ಆರೋಪಿ.
ಬಂಧಿತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಬಳಿಕ ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಡಿಸಿಪಿ ಶಶಿಕುಮಾರ್ ತಿಳಿಸಿದ್ದಾರೆ.
ಸುಧೀರ್ ಸಾಕಿದ್ದ ನಾಯಿ ಒಂಬತ್ತು ವರ್ಷದ ಹಿಂದೆ ಸತ್ತಿತ್ತು. ಇದರಿಂದ ಆತ ಮಾನಸಿಕ ಖಿನ್ನತೆಗೆ ಒಳಗಾಗಿದ್ದ. ಅಧಿಕಾರಿಗಳ ಹೆಸರು ಕೇಳಿದರೆ ಅವಾಚ್ಯವಾಗಿ ನಿಂದಿಸುತ್ತಿದ್ದ.
ಹೀಗಾಗಿ ಪೋಷಕರು ಆತನಿಗೆ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದರು ಗುಣಮುಖನಾಗಿರಲಿಲ್ಲ ಇತ್ತೀಚೆಗೆ ಸಿಎಂ ಮತ್ತು ನಗರ ಪೋಲಿಸ್ ಆಯುಕ್ತರ ಕುರಿತು ಫೇಸ್ ಬುಕ್ ಖಾತೆಯಲ್ಲಿ ಅವಹೇಳನಕಾರಿ ವೀಡಿಯೊಗಳನ್ನು ಹರಿಯಬಿಡುತ್ತಿದ್ದ ಎಂದು ಪೋಲಿಸರು ತಿಳಿಸಿದ್ದಾರೆ.