ವಿಶ್ವವಾಣಿ ಸುದ್ದಿಮನೆ
ಬೆಂಗಳೂರು
ಹುಳಿಮಾವು ಸಂಚಾರ ಪೊಲೀಸ್ ಠಾಣೆಯನ್ನು ಸ್ಥಳಾಂತರಿಸಲಾಗುತ್ತಿದೆ. ಸೋಮೇಶ್ವರ ದೇವಸ್ಥಾನದ ಸಮುದಾಯ ಭವನವು ರಸ್ತೆ ಆಗಲೀಕರಣಕ್ಕೆ ಒಳಪಡುವುದರಿಂದ, ಸೋಮೇಶ್ವರ ದೇವಸ್ಥಾನದ ಸಮುದಾಯ ಭವನದಿಂದ ಹುಳಿಮಾವು ಸಂಚಾರ ಪೊಲೀಸ್ ಠಾಣೆಯನ್ನು ಬನ್ನೇರುಘಟ್ಟ ರಸ್ತೆ, ಉತ್ತರಹಳ್ಳಿ ಹೋಬಳಿ, ಗೊಟ್ಟಿಗೆರೆ ಗ್ರಾಮದ ಸರ್ವೆ ನಂ.91ರಲ್ಲಿರುವ ಬಿಬಿಎಂಪಿ ಕಚೇರಿ ಕಟ್ಟಡಕ್ಕೆ ಸ್ಥಳಾಂತರಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 080-22942884, 9480801553 ಸಂಪರ್ಕಿಸಬಹುದಾಗಿದೆ. ಹುಳಿಮಾವು ಸಂಚಾರ ಪೊಲೀಸ್ ಠಾಣೆಯಲ್ಲಿ ವಾರಸುದಾರರಿಲ್ಲದ ವಾಹನಗಳನ್ನು ಬಹಿರಂಗ ಹರಾಜು ಮಾಡಲಾಗುವುದು. ಆಸಕ್ತರು ಈ ಬಹಿರಂಗ ಹರಾಜಿನಲ್ಲಿ ಭಾಗವಹಿಸಬಹುದು. ಹುಳಿಮಾವು ಸಂಚಾರ ಪೊಲೀಸ್ ಠಾಣೆಯಲ್ಲಿ ಅಮಾನತ್ತುಪಡಿಸಿಕೊಂಡಿರುವ 12 ದ್ವಿಚಕ್ರ ವಾಹನದ ವಾರಸುದಾರರು ಪತ್ತೆಯಾಗಿಲ್ಲ. ಹೀಗಾಗಿ 6ನೇ ಸಂಚಾರಿ ನ್ಯಾಯಾಲಯದ ಆದೇಶದಂತೆ ವಾಹನವನ್ನು ಆ.20 ರಂದು ಬೆಳಿಗ್ಗೆ 11 ಗಂಟೆಗೆ ಜಕ್ಕರಾಯನ ಕೆರೆ ಆವರಣದಲ್ಲಿ ಬಹಿರಂಗ ಹರಾಜು ಮಾಡಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
|
|