ವಿಶ್ವವಾಣಿ ಸುದ್ದಿಮನೆ
ಬೆಂಗಳೂರು
ಕರೋನಾ ಸೋಂಕಿನ ಭೀತಿ ನಡುವೆಯೂ ನಡೆದಿದ್ದಂತಹ ರಾಜ್ಯದ ಎಸ್.ಎಸ್.ಎಸ್.ಎಲ್.ಸಿ ಪರೀಕ್ಷೆಯ ಫಲಿತಾಂಶ ಆ.10ರಂದು ರಾಜ್ಯದಲ್ಲಿ ಪ್ರಕಟಗೊಳ್ಳಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ತಿಳಿಸಿದ್ದಾರೆ.
ಈ ಕುರಿತಂತೆ ಮಾಹಿತಿ ನೀಡಿರುವ ಅವರು, ಆ.10ರಂದು ಮಧ್ಯಾಹ್ನ 3 ಗಂಟೆಗೆ ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಳ್ಳಲಿದೆ. ್ಟ್ಟkarresults.nic.in ವೆಬ್ ಸೈಟ್ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಅಲ್ಲದೇ ವಿದ್ಯಾರ್ಥಿಗಳಿಗೆ ಎಸ್ಎಂಎಸ್ ಮೂಲಕವೂ ಪರೀಕ್ಷೆಯ ಫಲಿತಾಂಶ ದೊರೆಯಲಿದೆ ಎಂಬುದಾಗಿ ತಿಳಿಸಿದ್ದಾರೆ.
ಆಗೆಯೇ ಕರೋನಾ ಸೋಂಕಿನ ಭೀತಿಯ ನಡುವೆಯೂ 8.5 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಲಾಕ್ಡೌನ್ ಮುಗಿದ ಬಳಿಕ ಇಂಗ್ಲೀಷ್ ಪರೀಕ್ಷೆಯನ್ನು ನಡೆಸಲಾಗಿತು. ಕಳೆದ ತಿಂಗಳು ದ್ವಿತೀಯ ಪಿಯುಸಿ ಫಲಿತಾಂಶವನ್ನು ಪ್ರಕಟಿಸಲಾಗಿತ್ತು. ಜು.3 ರಂದು ಎಸ್ಎಸ್ಎಲ್ಸಿ ಪರೀಕ್ಷೆ ಮುಗಿದಿದ್ದು, ಈಗಾಗಲೇ ಮೌಲ್ಯಮಾಪನ ಮುಕ್ತಾಯವಾಗಿದೆ. ಹೀಗಾಗಿ ಈ ವಾರದಲ್ಲೇ ಪರೀಕ್ಷೆ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಹೆಚ್ಚಾಗಿದೆ ಎನ್ನಲಾಗಿತ್ತು.
ಆದರೆ, ಕರ್ನಾಟಕ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಶುಕ್ರವಾರದಂದು ಫೇಸ್ ಬುಕ್ನಲ್ಲಿ ಮಾಹಿತಿ ನೀಡಿದ್ದು, ಸೋಮವಾರದಂದು ಮಧ್ಯಾಹ್ನ 3 ಗಂಟೆಗೆ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.