ಆರೋಗ್ಯ ಸಚಿವರಿಗೆ ಕರೊನಾ ಪಾಸಿಟಿವ್
ಬೆಂಗಳೂರು:
ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪನವರಿಗೆ ಕರೋನಾ ಪಾಸಿಟಿವ್ ದೃಢಪಟ್ಟ ಬೆನ್ನಲ್ಲೇ ಇದೀಗ ಆರೋಗ್ಯ ಸಚಿವ ಬಿ. ಶ್ರೀರಾಮಲು ಅವರಿಗೆ ಕರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
ಇಂದು ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿಸಿದಾಗ ಕರೋನಾ ಪಾಸಿಟಿವ್ ದೃಢಪಟ್ಟಿದೆ. ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನನ್ನ ಇಲಾಖೆ ಸೇರಿದಂತೆ ಸರ್ಕಾರದ ಎಲ್ಲಾ ಇಲಾಖೆಗಳೂ ಜೀವದ ಹಂಗು ತೊರೆದು ಮಹಾಮಾರಿಯ ವಿರುದ್ಧ ಹಗಲಿರುಳೂ ಶ್ರಮಿಸುತ್ತಿವೆ. ಕೊರೊನಾ ಕಾಣಿಸಿಕೊಂಡ ಸಮಯದಿಂದಲೂ 30 ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಜನರಿಗೆ ಸೂಕ್ತ ಚಿಕಿತ್ಸೆ ಸಿಗುವಂತೆ ಮಾಡುವ ಸರ್ಕಾರದ ಆಶಯಕ್ಕೆ ತಕ್ಕಂತೆ ಕೆಲಸ ಮಾಲಾಗುತ್ತಿದೆ. ಈ ಸಂದರ್ಭದಲ್ಲಿ ನನಗೆ ಸತ್ವಪರೀಕ್ಷೆಯ ಸಮಯ ಎದುರಾಗಿದೆ. ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯಲಿದ್ದೇನೆ ಎಂದು ರಾಮುಲು ಟ್ವೀಟ್ ಮಾಡಿದ್ದಾರೆ.
ಆದಷ್ಟೂ ಬೇಗ ಗುಣಮುಖನಾಗಿ ಸಂಕಷ್ಟ ಸಮಯದಲ್ಲಿ ಇನ್ನಷ್ಟು ಜನಸೇವೆ ಮಾಡಲು ಶಕ್ತಿ ಕೊಡುವಂತೆ ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಇತ್ತೀಚಿಗೆ ನನ್ನ ಸಂಪರ್ಕದಲ್ಲಿದ್ದ ಎಲ್ಲರೂ ಮುನ್ನೆಚ್ಚರಿಕೆ ಕ್ರಮ ವಹಿಸಲು ಕೋರುತ್ತೇನೆ ಎಂದಿದ್ದಾರೆ.