ವಿಜಯಪುರ: ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಪ್ರಕರಣಗಳು ಏರಿಕೆ ಕಾಣುತ್ತಿದ್ದು, ಇದೀಗ ವಿಜಯಪುರ ಜಿಲ್ಲೆಯಲ್ಲಿಯೂ 133 ಕಪ್ಪು ಶಿಲೀಂಧ್ರ ರೋಗದ ಪ್ರಕರಣಗಳು ಪತ್ತೆಯಾಗಿವೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ಮಾಹಿತಿ ನೀಡಿದರು.
ಈವರೆಗೆ 27 ಜನ ಬ್ಲ್ಯಾಕ್ ಫಂಗಸ್ಗೆ ಚಿಕಿತ್ಸೆ ಪಡೆದು ಗುಣಮಖರಾಗಿದ್ದು, 84 ಜನರು ವಿಜಯಪುರದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 84 ಜನರಲ್ಲಿ 7 ಜನರಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಬ್ಲ್ಯಾಕ್ ಫಂಗಸ್ ಮಾರಣಾಂತಿಕ ಕಾಯಿಲೆ, ಹೆಚ್ಚು ಸಮಯ ಕರೋನಾ ಚಿಕಿತ್ಸೆ ಪಡೆಯುವವರು ಮತ್ತು ಮಧುಮೇಹ ಮೊದಲಾದ ಸಮಸ್ಯೆ ಇರುವವರಲ್ಲಿ ಈ ಸೋಂಕು ಕಾಣಿಸಿಕೊಂಡಿದೆ.