Monday, 20th May 2024

ವಿಜಯಪುರ ಜಿಲ್ಲೆಯಲ್ಲಿ 133 ಕಪ್ಪು ಶಿಲೀಂಧ್ರ ಪ್ರಕರಣ ಪತ್ತೆ

ವಿಜಯಪುರ: ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಪ್ರಕರಣಗಳು ಏರಿಕೆ ಕಾಣುತ್ತಿದ್ದು, ಇದೀಗ ವಿಜಯಪುರ ಜಿಲ್ಲೆಯಲ್ಲಿಯೂ 133 ಕಪ್ಪು ಶಿಲೀಂಧ್ರ ರೋಗದ ಪ್ರಕರಣಗಳು ಪತ್ತೆಯಾಗಿವೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್​​ ಕುಮಾರ್​ ಮಾಹಿತಿ ನೀಡಿದರು.

ಈವರೆಗೆ 27 ಜನ ಬ್ಲ್ಯಾಕ್ ಫಂಗಸ್​ಗೆ ಚಿಕಿತ್ಸೆ ಪಡೆದು ಗುಣಮಖರಾಗಿದ್ದು, 84 ಜನರು ವಿಜಯಪುರದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 84 ಜನರಲ್ಲಿ 7 ಜನರಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಬ್ಲ್ಯಾಕ್ ಫಂಗಸ್ ಮಾರಣಾಂತಿಕ ಕಾಯಿಲೆ, ಹೆಚ್ಚು ಸಮಯ ಕರೋನಾ ಚಿಕಿತ್ಸೆ ಪಡೆಯುವವರು ಮತ್ತು ಮಧುಮೇಹ ಮೊದಲಾದ ಸಮಸ್ಯೆ ಇರುವವರಲ್ಲಿ ಈ ಸೋಂಕು ಕಾಣಿಸಿಕೊಂಡಿದೆ.

Leave a Reply

Your email address will not be published. Required fields are marked *

error: Content is protected !!