Saturday, 14th December 2024

1425 ಮಂದಿಗೆ ಕೋವಿಡ್ ಪಾಸಿಟಿವ್ ದೃಢ

ಬೆಂಗಳೂರು: ರಾಜ್ಯದಲ್ಲಿ ಕರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದೆ.

ಕಳೆದ 24 ಗಂಟೆಯಲ್ಲಿ 1425 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,98,142ಕ್ಕೆ ಏರಿಕೆಯಾಗಿದೆ. ಇನ್ನೂ ರಾಜ್ಯದಲ್ಲಿ ಕರೋನಾದಿಂದ ಒಬ್ಬರು ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 40092ಕ್ಕೆ ಏರಿಕೆಯಾಗಿದೆ.

 

ಬೆಂಗಳೂರಿನಲ್ಲಿ ಮಂಗಳವಾರ 11983 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 18,29,306 ಕ್ಕೆ ಏರಿಕೆಯಾಗಿದೆ. ಇಂದು ಯಾವುದೇ ಸಾವು ವರದಿಯಾಗಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

ರಾಜ್ಯದಲ್ಲಿ 1459 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,49,147ಕ್ಕೆ ಏರಿಕೆಯಾಗಿದೆ.