Friday, 22nd November 2024

ವಿದ್ಯಾರ್ಥಿಗಳಿಗೆ ಅನ್ಯಾಯವಾಗದಂತೆ ಫಲಿತಾಂಶ: ಸುರೇಶ್ ಕುಮಾರ್

suresh kumar

ಬೆಂಗಳೂರು: ಕೋವಿಡ್ ಹಿನ್ನೆಲೆಯಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೆಯೇ ಪಾಸ್ ಮಾಡಲಾಗಿದ್ದು, ವಿದ್ಯಾರ್ಥಿಗಳಿಗೆ ಅನ್ಯಾಯವಾಗದಂತೆ ಫಲಿತಾಂಶ ಪ್ರಕಟಿಸಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಮೊದಲ ಬಾರಿಗೆ ದ್ವಿತೀಯ ಪಿಯು ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೇ ಪಾಸ್ ಮಾಡಲಾಗಿದ್ದು, ಎಸ್.ಎಸ್.ಎಲ್.ಸಿ. ಹಾಗೂ ಪ್ರಥಮ ಪಿಯು ಹಾಗೂ ಆಂತರಿಕ ಅಂಕಗಳನ್ನು ಮೌಲ್ಯಾಂಕನ ಮಾಡಿ ಫಲಿತಾಂಶ ನೀಡಲಾಗಿದೆ. ಈ ಫಲಿತಾಂಶದ ಬಗ್ಗೆ ವಿದ್ಯಾರ್ಥಿಗಳಿಗೆ ತೃಪ್ತಿ ಇಲ್ಲದಿದ್ದರೆ ಆಗಸ್ಟ್ ನಲ್ಲಿ ಪರೀಕ್ಷೆಗಳನ್ನು ಬರೆಯಬಹುದಾಗಿದೆ ಎಂದರು.

ಒಟ್ಟು 6,66,499ವಿದ್ಯಾರ್ಥಿಗಳು ಪಾಸ್ ಆಗಿದ್ದು, 4 ಲಕ್ಷದ 50 ಸಾವಿರ 706 ವಿದ್ಯಾರ್ಥಿಗಳು ಫಸ್ಟ್ ಕ್ಲಾಸ್ ನಲ್ಲಿ ತೇರ್ಗಡೆಯಾಗಿದ್ದಾರೆ 1,95,650 ವಿದ್ಯಾರ್ಥಿಗಳು ಫಸ್ಟ್ ಡಿಸ್ಟಿಂಕ್ಷನ್ ನಲ್ಲಿ ಪಾಸ್ ಆಗಿದ್ದಾರೆ. ಶಿಕ್ಷಣ ಇಲಾಖೆಯ ವೆಬ್ ಸೈಟ್ ನಲ್ಲಿ ಸಂಜೆ 5 ಗಂಟೆಗೆ ಫಲಿತಾಂಶ ಲಭ್ಯವಾಗಲಿದೆ ಎಂದು ವಿವರಿಸಿದರು.