Saturday, 14th December 2024

ಬಸ್-ಕಾರು ಢಿಕ್ಕಿ: ನಾಲ್ವರು ವಿದ್ಯಾರ್ಥಿಗಳ ಸಾವು

ಬೇಲೂರು: ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಸಂಕೇನಹಳ್ಳಿ ಸಮೀಪ ಕೆಎಸ್​ಆರ್​ಟಿಸಿ ಬಸ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ, ಸ್ಥಳದಲ್ಲೇ ನಾಲ್ವರು ವಿದ್ಯಾರ್ಥಿಗಳು ಮೃತಪಟ್ಟು, ಓರ್ವನ‌ ಸ್ಥಿತಿ ಗಂಭೀರವಾಗಿದೆ.

ಮೃತರು ಬೇಲೂರಿನ‌ ವಿದ್ಯಾವಿಕಾಸ್ ಶಾಲೆಯ ವಿದ್ಯಾರ್ಥಿಗಳು. ಮಂಗಳವಾರ ದುರಂತ ಸಂಭವಿಸಿದ್ದು, ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಮೃತದೇಹಗಳನ್ನು ಹೊರ ತೆಗೆಯಲು ಪೊಲೀಸರು ಮತ್ತು ಸಾರ್ವಜನಿಕರು ಹರಸಾಹಸಪಟ್ಟರು.