ಬೆಂಗಳೂರು : ವಿಧಾನಸೌಧದಲ್ಲಿ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಚೊಚ್ಚಲ ಬಜೆಟ್ ಮಂಡನೆಗೆ ಅನುಮೋದನೆ ನೀಡಲಾಗಿದೆ. ರೈತರ ಶಕ್ತಿಗೆ ಹೊಸ ಯೋಜನೆ ಘೋಷಣೆ ಮಾಡಲಾಗಿದೆ.
ರಾಜ್ಯದ ಕೆರೆಗಳ ಅಭಿವೃದ್ಧಿಗೆ 500 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲಾಗಿದೆ. ಪ್ರವಾಹದಿಂದ ಹಾನಿಯಾದ ಕೆರೆಗಳಿಗೆ 200 ಕೋಟಿ ಅನುದಾನ ನೀಡಲಾಗಿದೆ.
ಸಮಗ್ರ ಆರ್ಥಿಕ ಅಭಿವೃದ್ಧಿಗೆ, ಶಿಕ್ಷಣ, ಉದ್ಯೋಗ, ಆರೋಗ್ಯ ಸಬಲೀಕರಣದ ನಿಟ್ಟಿನಲ್ಲಿ, ಈ ಬಜೆಟ್ ಮಂಡಿಸ ಲಾಗುತ್ತಿದೆ. ನವ ಭಾರತ ನಿರ್ಮಾಣಕ್ಕಾಗಿ ಈ ಬಾರಿಯ ಬಜೆಟ್ ನಲ್ಲಿ ಮಹತ್ವದ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
2022-23ನೇ ಸಾಲಿ ರಾಜ್ಯ ಬಜೆಟ್ ಮೊತ್ತವು 2,53, 165 ಕೋಟಿಯಷ್ಟು ಆಗಿದೆ. ಕಳೆದ ಬಾರಿಗೆ ಬಜೆಟ್ ಗಿಂತ ಈ ಬಾರಿಯ ಬಜೆಟ್ ಗಾತ್ರ ಶೇ..7.7ರಷ್ಟು ಹೆಚ್ಚಳವಾಗಿದೆ ಎಂದರು.
ಬೆಂಗಳೂರು ಅಭಿವೃದ್ಧಿಗಾಗಿ 8,409 ಕೋಟಿ ನೀಡಲಾಗುತ್ತಿದೆ. 2 ಸರ್ಕಾರಿ ಸ್ವಾಮ್ಯದ ಉದ್ದಿಮೆಗಳ ಬಂಡವಾಳವನ್ನು ಹಿಂತೆಗೆದುಕೊಳ್ಳಲಾಗುತ್ತಿದೆ ಎಂಬುದಾಗಿ ಹೇಳಿದರು.