Saturday, 14th December 2024

ಬೆಂಗಳೂರು

ಸಿಎಂ ಗೃಹ ಕಚೇರಿ ಮತ್ತು ಖಾಸಗಿ ನಿವಾಸ ಧವಳಗಿರಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ ಮತ್ತು ವಾಹನ ಚಾಲಕರಿಗೆ ಕರೋನಾ ದೃಢಪಟ್ಟ ಹಿನ್ನೆಲೆಯಲ್ಲಿ ಸಿಎಂ ಹೋಂ ಕ್ವಾರಂಟೈನ್ ಆಗಲು ನಿರ್ಧರಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಗೃಹ ಕಚೇರಿ ಕೃಷ್ಣಾದಲ್ಲಿ ಕೆಲ ಸಿಬ್ಬಂದಿಗೆ ಕೋವಿಡ್ ಪಾಸಿಟಿವ್ ಬಂದಿರುವ ಕಾರಣ ಇಂದಿನಿಂದ ಕೆಲ ದಿನಗಳ ಕಾಲ ಮನೆಯಿಂದಲೇ ನನ್ನ ಕರ್ತವ್ಯಗಳನ್ನು ನಿರ್ವಹಿಸಲಿದ್ದೇನೆ ವೀಡಿಯೋ ಕಾನ್ಫರೆನ್ಸ್ ‌ಮುಖಾಂತರ ಅಗತ್ಯ ಸಲಹೆ ಸೂಚನೆಗಳನ್ನು ನೀಡಲಿದ್ದೇನೆ ಎಂದು ತಿಳಿಸಿದ್ದಾರೆ.

ಯಾರೂ ಆತಂಕ ಪಡುವ ಅಗತ್ಯವಿಲ್ಲ ಆರೋಗ್ಯವಾಗಿದ್ದೇನೆ. ಎಲ್ಲರೂ ಮುನ್ನೆಚ್ಚರಿಕೆಯ ಕ್ರಮಗಳು ಹಾಗೂ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಿ. ಸಾಮಾಜಿಕ ಅಂತರ ಹಾಗು ಕಡ್ಡಾಯವಾಗಿ ಮಾಸ್ಕ್ ಧರಿಸಿ ಕೋವಿ ಡ್ ನಿಯಂತ್ರಣಕ್ಕೆ ಸಹಕರಿಸಿ ಎಂದು ಮನವಿ ಮಾಡಿದ್ದಾರೆ.