Sunday, 13th October 2024

 ಎಸ್.ಎಸ್.ಎಲ್.ಸಿ ಫಲಿತಾಂಶ: ಶೇ.99.9ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ

ಬೆಂಗಳೂರು: ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ಈ ಬಾರಿ ಶೇ.99.9ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.

4,70,160 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಓರ್ವ ವಿದ್ಯಾರ್ಥಿ ಮಾತ್ರ ಪರೀಕ್ಷೆಗೆ ಗೈರಾಗಿದ್ದು, ಉಳಿದ ಎಲ್ಲಾ ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ ಎಂದು ಸಚಿವರು ತಿಳಿಸಿದರು.

2,50,317 ವಿದ್ಯಾರ್ಥಿಗಳು A ಗ್ರೇಡ್, 2,87,694 ವಿದ್ಯಾರ್ಥಿಗಳು B ಗ್ರೇಡ್ ಹಾಗೂ 1,1,610 ವಿದ್ಯಾರ್ಥಿಗಳು C ಗ್ರೇಡ್ ಪಡೆದುಕೊಂಡಿದ್ದಾರೆ ಎಂದು ವಿವರಿಸಿದರು. sslc.Karnataka.gov.in ನಲ್ಲಿ ಫಲಿತಾಂಶ ಲಭ್ಯವಿದೆ.