Thursday, 21st November 2024

9 ಭ್ರಷ್ಟ ಬಿಡಿಎ ಅಧಿಕಾರಿ, ಮಧ್ಯವರ್ತಿಗಳಿಗೆ ಎಸಿಬಿ ಶಾಕ್

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಭ್ರಷ್ಟ ಅಧಿಕಾರಿಗಳ ಮೇಲೆ ಸಮರ ಸಾರಿರುವ ಎಸಿಬಿ, ಮಂಗಳವಾರ ಬೆಳಗ್ಗೆ ಭ್ರಷ್ಟರ ಬೇಟೆಯಾಡಿದೆ.

9 ಭ್ರಷ್ಟ ಬಿಡಿಎ ಮಧ್ಯವರ್ತಿಗಳ ಕಚೇರಿ, ನಿವಾಸಗಳ ಮೇಲೆ ಎಸಿಬಿ ದಾಳಿ ನಡೆಸಿದ್ದು, ಮಹತ್ವದ ದಾಖಲೆಗಳನ್ನು ವಶಪಡಿಸಿ ಕೊಂಡಿದ್ದಾರೆ.

ಎಸ್ಪಿ ಉಮಾ ಪ್ರಶಾಂತ್ ಅವರ ನೇತೃತ್ವದಲ್ಲಿ ಸುಮಾರು 100 ಅಧಿಕಾರಿಗಳು ಮತ್ತು ಸಿಬ್ಬಂದಿ ದಾಳಿ ನಡೆಸಿ, ಮಹತ್ವದ ದಾಖಲೆ ಗಳ ಪರಿಶೋಧನೆಯಲ್ಲಿ ತೊಡಗಿದ್ದಾರೆ. ಈ ಕೆಳಗಿನ ಭ್ರಷ್ಟ ಮಧ್ಯವರ್ತಿಗಳ ಮನೆ ಮೇಲೆ ದಾಳಿ ನಡೆದಿದೆ

1. ರಘು ಬಿ.ಎನ್, ಚಾಮರಾಜಪೇಟೆ

2. ಮೋಹನ್, ನೋರಾಯನಪಾಳ್ಯ. ಆರ್.ಟಿ. ನಗರ

3. ಮನೋಜ್, ದೊಮ್ಮಲೂರು

4. ಮುನಿರತ್ನ ಅಲಿಯಾಸ್ ರತ್ನವೇಲು, ಕೆನಗುಂಟೆ, ಮಲ್ಲತ್ತಹಳ್ಳಿ.

5. ತೇಜು ಅಲಿಯಾಸ್, ರಾಜರಾಜೇಶ್ವರಿನಗರ

6.ಅಶ್ವತ್#ಮುದ್ದಿನಪಾಳ್ಯ ಅಶ್ವತ್, ಕೆಜಿ ಸರ್ಕಲ್, ಮುದ್ದಿನಪಾಳ್ಯ

7. ರಾಮ, ಚಾಮುಂಡೇಶ್ವರಿನಗರ, ಬಿಡಿಎ ಬಡಾವಣೆ

8. ಲಕ್ಷ್ಮಣ, ಚಾಮುಂಡೇಶ್ವರಿ ನಗರ, ಬಿಡಿಎ ಲೇಔಟ್

9. ಚಿಕ್ಕಹನುಮ್ಮಯ್ಯ, ಮುದ್ದಿನಪಾಳ್ಯ, ಬೆಂಗಳೂರು

ಈ ಹಿಂದೆ ಸತತವಾಗಿ ಬಿಡಿಎ ಅಧಿಕಾರಿಗಳ ಮೇಲೆ ದಾಳಿ ಮಾಡಿದ್ದ ಎಸಿಬಿ ಅಧಿಕಾರಿಗಳು, ಇದೀಗ ಮಧ್ಯವರ್ತಿಗಳ ಮೇಲೆ ದಾಳಿ ಮಾಡಿದೆ.

ರೈತರಿಗೆ ಬದಲಿ ನಿವೇಶನ ನೀಡುವ ಹೆಸರಲ್ಲಿ ಮಧ್ಯವರ್ತಿಗಳಿಂದ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಗೋಮಾಳ ಭೂಮಿಯನ್ನು ರೈತರ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಕ್ಕೆ ಮೋಸ ಮಾಡಿ, ಗೋಮಾಳ ಜಾಗಕ್ಕೆ ಮಧ್ಯ ವರ್ತಿಗಳು ಪರಿಹಾರ ಪಡೆದಿದ್ದಾರೆ ಎನ್ನಲಾಗಿದೆ.

ಬೆಂಗಳೂರಿನ ಉಳ್ಳಾಲ ಆರ್‌ಟಿಒ ಕಚೇರಿ ಬಳಿಯಿರುವ ಬಿಡಿಎ ಮಧ್ಯವರ್ತಿ ಚಿಕ್ಕಹನುಮಯ್ಯನ ಎರಡು ಅಂತಸ್ತಿನ ಮನೆ ಮೇಲೆ ಮಂಗಳವಾರ ಬೆಳಗಿನ ಜಾವ 5 ಗಂಟೆಗೆ ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದು, ಇಬ್ಬರು ಅಧಿಕಾರಿಗಳು ಸೇರಿ 7 ಸಿಬ್ಬಂದಿಯಿಂದ ಶೋಧ ಕಾರ್ಯ ನಡೆದಿದೆ. ಡಿವೈಎಸ್‌ಪಿ ಪ್ರಕಾಶ್ ರೆಡ್ಡಿ, ಇನ್ಸ್‌ಪೆಕ್ಟರ್ ಮಂಜುನಾಥ್ ಸೇರಿ ಒಟ್ಟು 9 ಜನ ಅಧಿಕಾರಿಗಳ ತಂಡದಿಂದ ಪ್ರತಿ ದಾಖಲೆಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ.

ಬ್ರೋಕರ್ ಮುನಿರತ್ನ ಅಲಿಯಾಸ್ ರತ್ನವೇಲುಗೆ ಎಸಿಬಿ ಅಧಿಕಾರಿಗಳು ಶಾಕ್ ನೀಡಿದ್ದು, ಬೆಂಗಳೂರಿನ ಮಲ್ಲತ್ತ ಹಳ್ಳಿಯಲ್ಲಿರುವ ಮುನಿರತ್ನ ನಿವಾಸದ ಮೇಲೆ ದಾಳಿ ಮಾಡಿದ್ದಾರೆ.

ಮುನಿರತ್ನನ ಐಷಾರಾಮಿ ಮನೆ ಕಂಡು ಅಧಿಕಾರಿಗಳು ಶಾಕ್​ ಆಗಿದ್ದು, ಮನೆಯಲ್ಲಿ ಈಜುಕೊಳ, ಜಿಮ್ ಕೂಡ ಇದೆ. ದೊಮ್ಮಲೂರಿನ ಬ್ರೋಕರ್ ಮನೋಜ್ ಮನೆಯಲ್ಲಿ ಬೆಲೆ ಬಾಳುವ ವಸ್ತುಗಳು ಪತ್ತೆಯಾಗಿವೆ. ದೇಶ ಹಾಗೂ ವಿದೇಶಗಳ ಪ್ರತಿಷ್ಠಿತ ಬ್ರಾಂಡ್​ನ 19 ಸನ್ ಗ್ಲಾಸಸ್ ಹಾಗೂ 22 ಕೈ ಗಡಿಯಾರಗಳು ಪತ್ತೆಯಾಗಿವೆ.