Wednesday, 11th December 2024

ಲಾರಿ ಹಾಗೂ ಸಾರಿಗೆ ಬಸ್ ಅಪಘಾತ

ಕೊಲ್ಹಾರ: ಪಟ್ಟಣದ ಸಮೀಪ ರಾಷ್ಟ್ರೀಯ ಹೆದ್ದಾರಿ 218 ಹಳ್ಳದ ಗೇಣ್ಣೂರು ಕ್ರಾಸ್ ಹತ್ತಿರ ಲಾರಿ ಹಾಗೂ ಈಶಾನ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ ನಡುವೆ ಮುಖಾಮು ಡಿಕ್ಕಿಯಾಗಿ ಲಾರಿ ಮತ್ತು ಬಸ್ ಚಾಲಕರಿಗೆ ಗಂಭೀರ ಸ್ವರೂಪದ ಗಾಯಗೊಂಡಿದ್ದಾರೆ.

ಹುಬ್ಬಳ್ಳಿ ಕಡೆಯಿಂದ ವಿಜಯಪುರಕ್ಕೆ ಹೊರಟ ಬಸ್  ಹಾಗೂ ವಿಜಯಪುರ ದಿಂದ ಹುಬ್ಬಳ್ಳಿ ಕಡೆಗೆ ಹೊರಟಿರುವ ಹರಿಯಾಣ ಮೂಲದ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಬಸ್ ನಲ್ಲಿರುವ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಚಾಲಕರಿಬ್ಬರನ್ನು ವಿಜಯಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗಾಯಾಳುಗಳನ್ನು ಚಿಕಿತ್ಸೆಗೆ ಕಳುಹಿಸಿಕೊಡಲಾಗಿದೆ.

ಕೊಲ್ಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.