Friday, 13th December 2024

ವಿದ್ಯುತ್ ಕಂಬಕ್ಕೆ ಬಿಯರ್ ಸಾಗಿಸುತ್ತಿದ್ದ ಲಾರಿ ಡಿಕ್ಕಿ: ಚಾಲಕ ಸಾವು

ಶ್ರೀರಂಗಪಟ್ಟಣ: ವಿದ್ಯುತ್ ಕಂಬಕ್ಕೆ ಬಿಯರ್ ಸಾಗಿಸುತ್ತಿದ್ದ ಲಾರಿ ಡಿಕ್ಕಿಯಾಗಿ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಗೌರಿಪುರ ಬಳಿಯ ಮೈ- ಬೆಂ ಹೆದ್ದಾರಿ ಬಳಿ ನಡೆದಿದೆ.

ತಮಿಳುನಾಡು ಮೂಲದ ಎಳುಮಲೈ(60) ಮೃತ ಚಾಲಕ ಎಂದು ತಿಳಿದು ಬಂದಿದೆ. ಬೆಂಗಳೂರಿನಿಂದ ಮೈಸೂರಿಗೆ ಬಿಯರ್ ಗಳನ್ನು ಸಾಗಿಸುತ್ತಿದ್ದ ಸಂದರ್ಭ ಘಟನೆ ನಡೆದಿದ್ದು, ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಲಾರಿಯಲ್ಲಿ ಬಿಯರ್ ಇದ್ದದ್ದನ್ನು ಗಮನಿಸಿದ ಸ್ಥಳೀಯರು ಬಿಯರ್ ಬಾಟಲ್ ಗಳನ್ನು ಹೊತ್ತೊಯ್ದಿದ್ದಾರೆ.

ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.