Thursday, 3rd October 2024

MB Patil: ಎಂಇಐ ಟ್ರಾನ್ಸ್‌ಫಾರ್ಮರ್‌ ದುರಸ್ತಿ ಕೇಂದ್ರಗಳಿಗೆ ಜಮೀನು ಒದಗಿಸಲು ಕ್ರಮ: ಎಂ.ಬಿ. ಪಾಟೀಲ್‌

MB Patil

ಬೆಂಗಳೂರು: ಸರ್ಕಾರಿ ಸ್ವಾಮ್ಯದ ಮೈಸೂರು ಎಲೆಕ್ಟ್ರಿಕಲ್‌ ಇಂಡಸ್ಟ್ರೀಸ್‌ ಲಿಮಿಟೆಡ್‌ (ಎಂಇಐ) ಸಂಸ್ಥೆಯು (MEI) ರಾಜ್ಯದ ಹಲವು ಭಾಗಗಳಲ್ಲಿ ವಿದ್ಯುತ್‌ ಟ್ರಾನ್ಸ್‌ಫಾರ್ಮರ್‌ (Transformer) ದುರಸ್ತಿ ಕೇಂದ್ರಗಳನ್ನು ತೆರೆಯಲು ತಲಾ ಒಂದು ಎಕರೆ ಜಮೀನು ಒದಗಿಸುವಂತೆ ಕೋರಿದ್ದು, ಅದನ್ನು ಈಡೇರಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ (MB Patil) ತಿಳಿಸಿದ್ದಾರೆ.

ಎಂಇಐ ಅಧ್ಯಕ್ಷ ಎಸ್‌.ಮನೋಹರ್‌ ಅವರು ನೀಡಿದ ಮನವಿ ಸ್ವೀಕರಿಸಿ ಮಾತನಾಡಿದ ಸಚಿವರು, ʻವಿಜಯಪುರ, ಮೈಸೂರು, ಚಿತ್ರದುರ್ಗ, ಮಂಗಳೂರು, ರಾಯಚೂರು, ಬಳ್ಳಾರಿ ಮತ್ತು ಇತರ ಮುಖ್ಯ ಸ್ಥಳಗಳಲ್ಲಿ ಇರುವ ಕೈಗಾರಿಕಾ ಪ್ರದೇಶಗಳಲ್ಲಿ ಲಭ್ಯತೆ ನೋಡಿಕೊಂಡು ಜಮೀನು ನೀಡಲಾಗುವುದು. ಇದರಿಂದ ಅಡೆತಡೆ ಇಲ್ಲದ ಮತ್ತು ಗುಣಮಟ್ಟದ ವಿದ್ಯುತ್‌ ವಿತರಣೆಗೆ ಸಹಾಯವಾಗಲಿದೆ ಎಂದು ತಿಳಿಸಿದರು.

ಈ ಸುದ್ದಿಯನ್ನೂ ಓದಿ | CM Siddaramaiah: ಪತ್ರಕರ್ತರ ಸಹಕಾರ ಸಂಘಕ್ಕೆ ಆರ್ಥಿಕ ನೆರವಿನ ಭರವಸೆ ನೀಡಿದ ಸಿದ್ದರಾಮಯ್ಯ

ಸರ್ಕಾರಿ ಸ್ವಾಮ್ಯದ ಕರ್ನಾಟಕ ವಿದ್ಯುತ್‌ ಕಾರ್ಖಾನೆ ಈಗಾಗಲೇ ಗುಣಮಟ್ಟದ ಟ್ರಾನ್ಸ್‌ಫಾರ್ಮರ್‌ಗಳನ್ನು ತಯಾರಿಸುತ್ತಿದೆ. ಹಾಗೆಯೇ, ಎಂಇಐ ಉತ್ಕೃಷ್ಟ ದರ್ಜೆಯ 11 ಕೆ.ವಿ. ಸ್ವಿಚ್‌ಗೇರುಗಳ ತಯಾರಿಕೆಗೆ ಹೆಸರುವಾಸಿಯಾಗಿದೆ. ಆದರೆ, ನಮ್ಮಲ್ಲಿ ಟ್ರಾನ್ಸ್‌ಫಾರ್ಮರ್‌ಗಳ ದುರಸ್ತಿಗೆ ವ್ಯವಸ್ಥಿತವಾದ ಜಾಲವಿಲ್ಲ. ಸರ್ಕಾರವು ತನ್ನ ಅಧೀನದ ಉದ್ಯಮ ಸಂಸ್ಥೆಗಳನ್ನು ಉತ್ತೇಜಿಸುವ ಗುರಿ ಹೊಂದಿದೆ. ಇದರಂತೆ ಎಂಇಐಗೆ ಅಗತ್ಯ ಸೌಕರ್ಯ ಒದಗಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಈ ಸುದ್ದಿಯನ್ನೂ ಓದಿ | Priyank Kharge: ಅಮೆರಿಕ-ಕರ್ನಾಟಕ ನಡುವೆ ಸಿಸ್ಟರ್ ಸಿಟಿ ಪ್ರಸ್ತಾಪ; ಯು.ಎಸ್ ರಾಯಭಾರಿ ಜತೆ ಪ್ರಿಯಾಂಕ್ ಖರ್ಗೆ ಚರ್ಚೆ

ಈ ಸಂದರ್ಭದಲ್ಲಿ ಎಂಇಐ ವ್ಯವಸ್ಥಾಪಕ ನಿರ್ದೇಶಕ ಶ್ರೀಧರ ಇದ್ದರು.