Friday, 13th December 2024

Actor Darshan: ನಟ ದರ್ಶನ್‌ಗೆ ಸೆ.17ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ

Actor Darshan

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನವಾಗಿರುವ ನಟ ದರ್ಶನ್‌ ಮತ್ತು ಸಹಚರರಿಗೆ (Actor Darshan) ಸೆಪ್ಟೆಂಬರ್ 17ರವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ ನಗರದ 24ನೇ ಎಸಿಎಂಎಂ ಕೋರ್ಟ್‌ ಆದೇಶ ಹೊರಡಿಸಿದೆ.

ನ್ಯಾಯಾಂಗ ಬಂಧನದ ಅವಧಿ ಮುಗಿದ ಹಿನ್ನೆಲೆಯಲ್ಲಿ ಆರೋಪಿಗಳನ್ನು ಶುಕ್ರವಾರ ಕೋರ್ಟ್‌ ವಿಚಾರಣೆಗೆ ಆರೋಪಿಗಳನ್ನು ಹಾಜರುಪಡಿಸಲಾಗಿತ್ತು. ಬಳ್ಳಾರಿ ಜೈಲಿನಿಂದ ದರ್ಶನ್, ಪರಪ್ಪನ ಅಗ್ರಹಾರ ಜೈಲಿನಿಂದ ಪವಿತ್ರಾಗೌಡ, ದೀಪಕ್ ಹಾಗೂ ವಿವಿಧ ಜೈಲುಗಳಿಂದ ಇತರ ಆರೋಪಿಗಳನ್ನು ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಧೀಶರು ಆರೋಪಿಗಳಿಗೆ ಸೆ.17ರವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ ಆದೇಶ ಹೊರಡಿಸಿದ್ದಾರೆ.

ಆರೋಪಿಗಳ ಪರ ವಕೀಲರು ವಾದ ಮಂಡಿಸಿ, ಕೇಸ್‌ನಲ್ಲಿ ತನಿಖಾಧಿಕಾರಿಗಳು ಇನ್ನೂ ಪೂರ್ಣ ಪ್ರಮಾಣದ ಚಾರ್ಜ್‌ಶೀಟ್‌ ಸಲ್ಲಿಸಿಲ್ಲ. ಕೋರ್ಟ್‌ಗೂ ತಾಂತ್ರಿಕ ಸಾಕ್ಷ್ಯಾಧಾರ ಒದಗಿಸಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.
ಇದಕ್ಕೆ ಎಸ್‌ಪಿಪಿ ಪ್ರಸನ್ನ ಕುಮಾರ್‌ ಪ್ರತಿಕ್ರಿಯಿಸಿ, ಮುಂದಿನ ವಾರ ತಾಂತ್ರಿಕ ಸಾಕ್ಷ್ಯಾಧಾರಗಳನ್ನು ತನಿಖಾಧಿಕಾರಿಗಳು ಸಲ್ಲಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಈ ವೇಳೆ ತಾಂತ್ರಿಕ ಸಾಕ್ಷ್ಯಾಧಾರ ಸಲ್ಲಿಸಿದ ಬಳಿಕ ಸೆಷನ್ಸ್‌ ಕೋರ್ಟ್‌ಗೆ ಪ್ರಕರಣ ವರ್ಗಾವಣೆ ಮಾಡುವಂತೆ ಆರೋಪಿಗಳ ಪರ ವಕೀಲರು ಕೋರಿದರು. ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶರು ವಿಚಾರಣೆಯನ್ನು ಮುಂದೂಡಿದ್ದಾರೆ.

ನಾಗಮಂಗಲ ಪ್ರವೇಶಕ್ಕೆ ಪ್ರಮೋದ್ ಮುತಾಲಿಕ್‌ಗೆ ನಿರ್ಬಂಧ

ಮಂಡ್ಯ: ಗಣೇಶೋತ್ಸವ ಮೆರವಣಿಗೆ ವೇಳೆ ನಡೆದ ಗಲಭೆ ಹಿನ್ನೆಲೆಯಲ್ಲಿ ನಾಗಮಂಗಲ ಬೂದಿ ಮುಚ್ಚಿದ ಕೆಂಡದಂತಾಗಿದೆ. ಹೀಗಾಗಿ ಪಟ್ಟಣದಲ್ಲಿ (Mandya Violence) ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಸೆ.14ವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಈ ನಡುವೆ ಘಟನೆ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿ, ಸ್ಥಳಕ್ಕೆ ಭೇಟಿ ನೀಡುವುದಾಗಿ ಹೇಳಿದ್ದ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ (Pramod Muthalik) ಅವರಿಗೆ ನಾಗಮಂಗಲ ಪ್ರವೇಶಕ್ಕೆ ಪೊಲೀಸರು ನಿರ್ಬಂಧ ವಿಧಿಸಿದ್ದಾರೆ.

ಈ ಸುದ್ದಿಯನ್ನೂ ಓದಿ | Arvind Kejriwal : 6 ತಿಂಗಳ ಬಳಿಕ ಜೈಲಿನಿಂದ ಹೊರಬಂದ ಕೇಜ್ರಿವಾಲ್‌; ಅವರು ಹೇಳಿದ ಮೊದಲ ಮಾತೇನು?

ಬುಧವಾರ ರಾತ್ರಿ ಗಣೇಶ ಮೂರ್ತಿ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿ ಮಚ್ಚು, ಲಾಂಗ್ ಗಳನ್ನು ಪ್ರದರ್ಶಿಸಿ ಪೆಟ್ರೋಲ್ ಬಾಂಬ್ ಎಸೆದ ಘಟನೆಯಿಂದ ಪಟ್ಟಣದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಗಲಭೆ ವೇಳೆ 20ಕ್ಕೂ ಅಧಿಕ ಅಂಗಡಿಗಳನ್ನು ಧ್ವಂಸ ಮಾಡಿ, 6 ಅಂಗಡಿಗಳಿಗೆ ಬೆಂಕಿ ಹಚ್ಚಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 52 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.