ಬಳ್ಳಾರಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ (Renuka Swamy Murder Case) ಪ್ರಕರಣದಲ್ಲಿ ಬಳ್ಳಾರಿ ಜೈಲು (Bellary Jail) ಪಾಲಾಗಿರುವ ನಟ ದರ್ಶನ್ (Actor Darshan) ತೀವ್ರ ಬೆನ್ನು ನೋವಿನ (Back Ache) ಸಮಸ್ಯೆ ಹಿನ್ನೆಲೆಯಲ್ಲಿ ಬಳ್ಳಾರಿಯ ವಿಮ್ಸ್ (VIMS hospital) ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಬೆನ್ನು ನೋವಿನಿಂದ ಬಳಲುತ್ತಿರುವ ನಟ ದರ್ಶನ್‌ಗೆ ವಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ವೈದ್ಯರು ಸೂಚನೆ ಕೊಟ್ಟಿದ್ದರು. ವೈದ್ಯರ ಸಲಹೆಯಂತೆ ಬಳ್ಳಾರಿಯಲ್ಲಿ ನಟ ದರ್ಶನ್ ಎಂಆರ್ ಐ ಸ್ಕ್ಯಾನಿಂಗ್ ಮಾಡಿಸಲು ಒಪ್ಪಿಕೊಂಡಿದ್ದಾನೆ. ನಟ ದರ್ಶನ್ ಬೆನ್ನು ನೋವಿನಿಂದ ಸರಿಯಾಗಿ ನಿದ್ದೆ ಮಾಡದೆ ಸೊರಗಿ ಹೋಗಿದ್ದಾನೆ ಎಂದು ಮೂಲಗಳು ತಿಳಿಸಿವೆ.
ಬೆಂಗಳೂರು ಜೈಲಿನಲ್ಲಿದ್ದಾಗಲೇ ನಟ ದರ್ಶನ್ ಗೆ ಬೆನ್ನು ನೋವಿನ ಸಮಸ್ಯೆ ಕಂಡು ಬಂದಿತ್ತು. ಅದರಂತೆ ವಿಮ್ಸ್ ಆಸ್ಪತ್ರೆಯ ವೈದ್ಯರು ಜೈಲಿಗೆ ಭೇಟಿ ನೀಡಿ ನಟ ದರ್ಶನ್ ಆರೋಗ್ಯವನ್ನು ತಪಾಸಣೆ ಮಾಡಿದ್ದರು. ಈ ವೇಳೆ ಆಸ್ಪತ್ರೆಗೆ ದಾಖಲಾಗಿ ಸ್ಕ್ಯಾನಿಂಗ್ ಮಾಡಿಸಿಕೊಳ್ಳುವಂತೆ ಸಲಹೆ ನೀಡಿದ್ದರು. ಹೀಗಾಗಿ ದರ್ಶನ್ ಆಸ್ಪತ್ರೆಯಲ್ಲಿ ಸ್ಕ್ಯಾನಿಂಗ್ ಮಾಡಿಸಿಕೊಂಡಿದ್ದಾನೆ.
ದರ್ಶನ್ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಅಕ್ಟೋಬರ್ 28ಕ್ಕೆ ಮುಂದೂಡಿದೆ. ಜೈಲಾಧಿಕಾರಿಗಳಿಂದ ದರ್ಶನ್ ಬೆನ್ನು ನೋವಿನ ಬಗ್ಗೆ ವೈದ್ಯರು ನೀಡಿರುವ ವರದಿ ನೀಡುವಂತೆ ಹೈಕೋರ್ಟ್ ಕೇಳಿದ್ದು, ಅರ್ಜಿ ವಿಚಾರಣೆಯನ್ನು ಅಕ್ಟೋಬರ್ 28ಕ್ಕೆ ಮುಂದೂಡಿಕೆ ಮಾಡಿ ಹೈಕೋರ್ಟ್ ಆದೇಶ ಹೊರಡಿಸಿದೆ.
ದರ್ಶನ್ ಪರ ವಾದ ಮಂಡಿಸಿದ ಹಿರಿಯ ವಕೀಲ ನಾಗೇಶ್, ತೀವ್ರವಾದ ಬೆನ್ನು ನೋವಿನಿಂದ ಬಳಲುತ್ತಿರುವ ದರ್ಶನ್‌ಗೆ ಅದಷ್ಟು ಬೇಗ ಸರ್ಜಿಕಲ್ ಅಪರೇಶನ್ ಅವಶ್ಯಕತೆ ಇರುವದರಿಂದ ಜಾಮೀನನ್ನು ಶೀಘ್ರವಾಗಿ ನೀಡಬೇಕು ಎಂದು ಮನವಿ ಮಾಡಿದ್ದಾರೆ. ನ್ಯಾಯಾಧೀಶರು, ಕೂಡಲೇ ವೈದ್ಯಕೀಯ ವರದಿಗಳ ಸಲ್ಲಿಕೆ ಮಾಡುವಂತೆ ಸೂಚಿಸಿ ಮುಂದಿನ ವಿಚಾರಣೆಯನ್ನು ಅಕ್ಟೋಬರ್ 28 ಕ್ಕೆ ಮುಂದೂಡಿದ್ದಾರೆ.
ಅಕ್ಟೋಬರ್ 28ರ ಒಳಗೆ ಬಳ್ಳಾರಿ ಜೈಲು ಅಧಿಕಾರಿಗಳು ದರ್ಶನ್ರ ಆರೋಗ್ಯ ಸ್ಥಿತಿಯ ಬಗ್ಗೆ ವರದಿಯನ್ನು ಹೈಕೋರ್ಟ್ಗೆ ನೀಡಬೇಕಿದ್ದು, ವರದಿ ಆಧರಿಸಿ ದರ್ಶನ್‌ಗೆ ಜಾಮೀನು ನೀಡಬೇಕೊ ಇಲ್ಲವೋ ಅಥವಾ ಜೈಲಿನಲ್ಲಿಯೇ ಚಿಕಿತ್ಸೆ ಮುಂದುವರೆಸಬೇಕೋ ಎಂಬ ಬಗ್ಗೆ ಕೋರ್ಟ್ ತೀರ್ಮಾನ ತೆಗೆದುಕೊಳ್ಳಲಿದೆ.
ಇದನ್ನೂ ಓದಿ: Actor Darshan: ದರ್ಶನ್‌ಗೆ ತಡೆಯಲಾಗದ ಬೆನ್ನುನೋವು; ಬಳ್ಳಾರಿಯಲ್ಲೇ ಸ್ಕ್ಯಾನಿಂಗ್