Monday, 11th November 2024

Actor Darshan: ಇಂದಿನಿಂದಲೇ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಟ ದರ್ಶನ್‌ಗೆ ಚಿಕಿತ್ಸೆ ಆರಂಭ

darshan

ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ (Renuka Swamy Murder Case) ಪ್ರಕರಣದಲ್ಲಿ ಜೈಲು ಪಾಲಾಗಿದ್ದ ನಟ ದರ್ಶನ್ (Actor Darshan) ಅವರು ನಿನ್ನೆ ಸಂಜೆಯಷ್ಟೇ ಜಾಮೀನಿನ (bail) ಮೇಲೆ ಬಿಡುಗಡೆಯಾಗಿದ್ದು, ಇಂದು ಮಧ್ಯಾಹ್ನ 2 ಗಂಟೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಲಿದ್ದಾರೆ.

ತೀವ್ರ ಬೆನ್ನು ನೋವಿನಿಂದ ಬಳಲುತ್ತಿರುವ ನಟ ದರ್ಶನ್ ಇಂದು ಮಧ್ಯಾಹ್ನ 2 ಗಂಟೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಲಿದ್ದಾರೆ ಎಂದು ತಿಳಿದುಬಂದಿದೆ. ಈಗಾಗಲೇ ದರ್ಶನ್‌ ಕುಟುಂಬದವರು ಹಾಗೂ ಮಿತ್ರರು ಆಸ್ಪತ್ರೆಯ ಆಡಳಿತಾಧಿಕಾರಿಗಳು ಹಾಗೂ ವೈದ್ಯರನ್ನು ಕನ್‌ಸಲ್ಟ್‌ ಮಾಡಿದ್ದಾರೆ. ಅಭಿಮಾನಿಗಳ ಕಾಟ ತಪ್ಪಿಸಲು ಆಸ್ಪತ್ರೆಗೆ ಬಿಗಿ ಭದ್ರತೆಯನ್ನು ಒದಗಿಸಲಾಗುತ್ತಿದೆ.

ಚಿಕಿತ್ಸೆ ಪಡೆದ 6 ವಾರಗಳ ಬಳಿಕ ಅವರು ಮತ್ತೆ ವಿಚಾರಣಾ ಕೋರ್ಟ್‌ಗೆ ಸರೆಂಡರ್ ಆಗಬೇಕಿದೆ. ಈ ಹಿನ್ನೆಲೆಯಲ್ಲಿ ಅವರು ಇಂದೇ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪ್ರಕ್ರಿಯೆ ಆರಂಭಿಸಲಿದ್ದಾರೆ. ನಿನ್ನೆ ಬಳ್ಳಾರಿ ಜೈಲಿನಿಂದ ಬಂಧಮುಕ್ತರಾಗಿ ಬೆಂಗಳೂರಿಗೆ ರಸ್ತೆ ಮಾರ್ಗವಾಗಿ ಆಗಮಿಸಿದ್ದ ದರ್ಶನ್‌, ನಿನ್ನೆ ರಾತ್ರಿ ಮಗ ವಿನೇಶ್‌ನ ಬರ್ತ್‌ಡೇ ಪಾರ್ಟಿಯಲ್ಲಿ ಪಾಲ್ಗೊಂಡಿದ್ದರು.

ಬಳ್ಳಾರಿ ಜೈಲಿನಲ್ಲಿದ್ದ ಕೊಲೆ ಆರೋಪಿ ದರ್ಶನ್ ಬೆನ್ನುನೋವಿನಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ಜಾಮೀನು ನೀಡುವಂತೆ ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನಟ ದರ್ಶನ್ ಗೆ 6 ವಾರಗಳ ಕಾಲ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಇದನ್ನೂ ಓದಿ: Actor Darshan: ರಿಲೀಸ್‌ ಆದ ದರ್ಶನ್‌ ಸೀದಾ ಬೆಂಗಳೂರಿಗೆ; ಪತ್ನಿ ಮನೆಯಲ್ಲಿ ಮಗನ ಬರ್ತ್‌ಡೇ ಪಾರ್ಟಿ