Wednesday, 30th October 2024

Actor Darshan: ದರ್ಶನ್‌ಗೆ ಜಾಮೀನು ಸಿಕ್ಕಿದ್ದು ಖುಷಿ ತಂದಿದೆ: ಸಚಿವ ಜಮೀರ್ ಅಹ್ಮದ್

Actor Darshan

ಹಾವೇರಿ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ (Actor Darshan) ಅವರಿಗೆ ಮಧ್ಯಂತರ ಜಾಮೀನು ದೊರೆತ ಹಿನ್ನೆಲೆಯಲ್ಲಿ ಸಚಿವ ಜಮೀರ್‌ ಅಹ್ಮದ್‌ (Zameer Ahmed) ಸಂತಸ ವ್ಯಕ್ತಪಡಿಸಿದ್ದಾರೆ. ದರ್ಶನ್‌ಗೆ ಜಾಮೀನು ಸಿಕ್ಕಿದೆ ಎಂಬ ಬಗ್ಗೆ ಗೊತ್ತಾಗಿದೆ. ಆಪ್ತರಾಗಿರುವ ಅವರಿಗೆ ಜಾಮೀನು ಸಿಕ್ಕಿರುವುದು ಖುಷಿ ತಂದಿದೆ ಎಂದು ಹೇಳಿದ್ದಾರೆ.

ಶಿಗ್ಗಾಂವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಮೀರ್ ಅಹ್ಮದ್ ಖಾನ್ ಅವರು, ಕೋರ್ಟ್‌ನಿಂದ ದರ್ಶನ್‌ಗೆ ಜಾಮೀನು ದೊರೆತಿದೆ. ಅವರು ಆತ್ಮೀಯರಾಗಿರುವ ಕಾರಣಕ್ಕೆ ನನಗೆ ಸಹಜವಾಗಿಯೇ ಖುಷಿಯಾಗಿದೆ. ಘಟನೆಗೆ ಮೊದಲು ನಾನು ಹಾಗೂ ದರ್ಶನ್ ತಿಂಗಳಿಗೊಮ್ಮೆ, ತಿಂಗಳಿಗೆ ಎರಡು ಸಲ ಭೇಟಿಯಾಗುತ್ತಿದ್ದವು. ಈಗ ಹೋಗಿ ಅವರ ಆರೋಗ್ಯವನ್ನು ವಿಚಾರಿಸುತ್ತೇನೆ ಎಂದು ತಿಳಿಸಿದ್ದಾರೆ.

ಇದೆ ವೇಳೆ ಉಪ ಚುನಾವಣೆ ಬಗ್ಗೆ ಮಾತನಾಡಿರುವ ಅವರು, ಸಿದ್ದರಾಮಯ್ಯನವರು ಇಡೀ ರಾಜ್ಯವನ್ನು ಅಭಿವೃದ್ಧಿ ಮಾಡಿದ್ದಾರೆ. ಆದರೆ ಬೊಮ್ಮಾಯಿ ರಾಜ್ಯ ಇರಲಿ, ತಮ್ಮ ಕ್ಷೇತ್ರವನ್ನೂ ಅಭಿವೃದ್ಧಿ ಮಾಡಿಲ್ಲ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ 8 ಸಾವಿರ ಮತಗಳ ಲೀಡ್ ಸಿಕ್ಕಿತ್ತು. ಆಗ ಬೊಮ್ಮಾಯಿ ಶೇಂಗಾ ಬೀಜ ತಿನ್ನುತ್ತಿದ್ದರಾ? ಎಂದು ಟೀಕಿಸಿದ್ದಾರೆ.

ಈ ಸುದ್ದಿಯನ್ನೂ ಓದಿ | Actor Darshan: ಬಳ್ಳಾರಿ ಜೈಲಿನಿಂದ ನಟ ದರ್ಶನ್ ರಿಲೀಸ್; ಮುಗಿಲು ಮುಟ್ಟಿದ ಅಭಿಮಾನಿಗಳ ಸಂಭ್ರಮ!

ದರ್ಶನ್​ಗೆ ಜಾಮೀನು: ರೇಣುಕಾ ಸ್ವಾಮಿ ಮನೆಯವರು ಏನಂದ್ರು?

ಚಿತ್ರದುರ್ಗ: ರೇಣುಕಾ ಸ್ವಾಮಿ ಕೊಲೆ (Renuka Swamy Murder Case) ಆರೋಪಿ ನಟ ದರ್ಶನ್​ಗೆ (Actor Darshan) ಆರು ವಾರಗಳ ಕಾಲದ ಮಧ್ಯಂತರ ಜಾಮೀನು (Interim bail) ದೊರೆತಿದೆ. ಈ ಕುರಿತು ರೇಣುಕಾ ಸ್ವಾಮಿಯ ತಂದೆ ಕಾಶೀನಾಥಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ದರ್ಶನ್​ಗೆ ಜಾಮೀನು ಸಿಕ್ಕಿರುವ ಕುರಿತು ಪ್ರತಿಕ್ರಿಯೆ ನೀಡಿರುವ ರೇಣುಕಾ ಸ್ವಾಮಿ ತಂದೆ ಕಾಶೀನಾಥಯ್ಯ, ‘ಮಧ್ಯಂತರ ಜಾಮೀನು ಸಿಕ್ಕಿದೆ, ಅದಕ್ಕೆ ನಮ್ಮದೇನೂ ಅಭ್ಯಂತರವಿಲ್ಲ. ಅದು ನ್ಯಾಯಾಲಯ ಕೊಟ್ಟಿರುವ ಆದೇಶ, ದರ್ಶನ್​ಗೆ ಜಾಮೀನು ಸಿಕ್ಕಿರುವುದು ಅದೊಂದು ಕಾನೂನು ಕ್ರಮ, ಅದಕ್ಕೆ ಗೌರವ ಕೊಡುತ್ತೇವೆ” ಎಂದಿದ್ದಾರೆ.

‘ನಮಗೆ, ನಮ್ಮ ಕುಟುಂಬಕ್ಕೆ ಅನ್ಯಾಯವಾಗಿದೆ, ನಾವು ಕಾನೂನು ಹೋರಾಟ ಮಾಡುತ್ತೇವೆ, ತಪ್ಪು ಮಾಡಿದವರಿಗೆ ಶಿಕ್ಷೆ ಆಗುವವರೆಗೆ ನಮ್ಮ ಕಾನೂನು ಹೋರಾಟ ಮುಂದುವರೆಯಲಿದೆ’ ಎಂದಿದ್ದಾರೆ. ಸೊಸೆ, ನವಜಾತ ಮೊಮ್ಮಗನ ಜೊತೆಗೆ ಹರಿಹರಕ್ಕೆ ಅವರು ತೆರಳಿದ್ದು, ಮಗುವಿನ ಅರೋಗ್ಯಕ್ಕಾಗಿ ದೇವರಿಗೆ ಪೂಜೆ ಸಲ್ಲಿಸಿದ್ದಾರೆ.
ಇತ್ತೀಚೆಗಷ್ಟೆ ರೇಣುಕಾ ಸ್ವಾಮಿ ಪತ್ನಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ರೇಣುಕಾ ಸ್ವಾಮಿಯ ಕೊಲೆಯಾದಾಗ ಅವರ ಪತ್ನಿ ಗರ್ಭಿಣಿ ಆಗಿದ್ದರು.

ರೇಣುಕಾ ಸ್ವಾಮಿಯನ್ನು ಕೊಲೆ ಮಾಡಿದ ಆರೋಪ ದರ್ಶನ್, ಪವಿತ್ರಾ ಗೌಡ ಹಾಗೂ ಇತರರ ಮೇಲಿದೆ. ಪ್ರಕರಣದಲ್ಲಿ ದರ್ಶನ್ ಆರೋಪಿ ನಂಬರ್ 2 ಆಗಿದ್ದಾರೆ. ಪವಿತ್ರಾ ಗೌಡ ಪ್ರಕರಣದ ಮೊದಲ ಆರೋಪಿಯಾಗಿದ್ದಾರೆ. ದರ್ಶನ್​ರ ಆರೋಗ್ಯ ಸಮಸ್ಯೆಯನ್ನು ಮನಸ್ಸಿನಲ್ಲಿಟ್ಟುಕೊಂಡು ಜಾಮೀನು ಮಂಜೂರು ಮಾಡಲಾಗಿದೆ. ವೈದ್ಯಕೀಯ ಚಿಕಿತ್ಸೆಗಾಗಿ ಈ ಜಾಮೀನು ನೀಡಲಾಗಿದ್ದು, ದರ್ಶನ್ ತಮ್ಮಿಚ್ಛೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬಹುದಾಗಿದೆ.

ಇದನ್ನೂ ಓದಿ: Darshan Thoogudeepa Bail : ದರ್ಶನ್‌ ಬೇಲ್‌ ಕುರಿತು ವಕೀಲ ಸುನೀಲ್‌ ಹೇಳಿದ್ದೇನು?