ಬಳ್ಳಾರಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ (Renuka Swamy Murder Case) ಪ್ರಕರಣದ ಆರೋಪಿ ದರ್ಶನ್ (Actor Darshan) ಬೇಲ್ ಅರ್ಜಿ ಇಂದು ಹೈಕೋರ್ಟ್‌ನಲ್ಲಿ (Karnataka high court) ಮತ್ತೊಮ್ಮೆ ವಿಚಾರಣೆಗೆ ಬರಲಿದೆ. ಈ ನಡುವೆ, ನಟನಿಗೆ ಕಿಡ್ನಿ ಸಮಸ್ಯೆ (Kidney problem) ಕಾಡುತ್ತಿದೆ ಎಂಬ ವಿವರ ಮೆಡಿಕಲ್ ರಿಪೋರ್ಟ್‌ನಿಂದ ಲಭ್ಯವಾಗಿದೆ.
ಬೇಲ್ ಮನವಿಯನ್ನು ಸೆಷನ್ಸ್ ಕೋರ್ಟ್ ವಜಾಗೊಳಿಸಿತ್ತು. ಸೆಷನ್ಸ್ ಕೋರ್ಟ್ನಲ್ಲಿ ಜಾಮೀನು ಸಿಗದ ಹಿನ್ನೆಲೆಯಲ್ಲಿ ನಟ ದರ್ಶನ್ ಪರ ವಕೀಲರು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ನಿನ್ನೆ ಬೇಲ್ ಅರ್ಜಿ ವಿಚಾರಣೆಗೆ ಎತ್ತಿಕೊಳ್ಳಲಾಗಿದ್ದು, ಇಂದು ಅದು ಮುಂದುವರಿಯಲಿದೆ.
ವಿಚಾರಣೆ ಆರಂಭವಾಗುತ್ತಿದ್ದಂತೆ ವಕೀಲರು ದರ್ಶನ್ ಮೆಡಿಕಲ್ ರಿಪೋರ್ಟ್ ಅನ್ನು ನ್ಯಾಯಾಲಯಕ್ಕೆ ಸಲ್ಲಿಸಿದರು. ಮುಚ್ಚಿದ ಲಕೋಟೆಯಲ್ಲಿ ವೈದ್ಯಕೀಯ ವರದಿ ತಂದ ಜೈಲಾಧಿಕಾರಿಗಳು, ಜಾಮೀನು ಅರ್ಜಿ ವಿಚಾರಣೆ ವೇಳೆ ಕೋರ್ಟ್‌ಗೆ ನೀಡಿದರು. ವಾದ ಆರಂಭವಾದ ಕೆಲ ನಿಮಿಷಗಳ ಬಳಿಕ ಕೋರ್ಟ್ ಜಾಮೀನು ಅರ್ಜಿ ವಿಚಾರಣೆಯನ್ನು ಇಂದಿಗೆ (ಅ.29) ಮುಂದೂಡಿದೆ.
ದರ್ಶನ್ ಪರ ವಕೀಲ ಸಿ.ವಿ ನಾಗೇಶ್ ಕೆಲ ಕಾಲ ವಾದ ಮಾಡಿದರು. ದರ್ಶನ್ ಅವರಿಗೆ ಕಿಡ್ನಿ, ಪೂಟ್ ನಂಬ್ನೆಸ್, ಆರ್ಥೋಪೆಡಿಕ್, ನ್ಯೂರೋ ಪ್ರಾಬ್ಲಂ ಇದೆ ಎಂದು ಸಿ.ವಿ.ನಾಗೇಶ್ ವಾದ ಮಂಡಿಸಿದರು. ಈ ವಿಚಾರಗಳನ್ನು ದರ್ಶನ್ ತನ್ನ ಕುಟುಂಬಸ್ಥರ ಬಳಿ ಹೇಳಿಕೊಂಡಿದ್ದಾರೆ. ಹೀಗಾಗಿ ದರ್ಶನ್ ಅವರಿಗೆ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಅವಕಾಶ ನೀಡುವಂತೆ ನಾಗೇಶ್ ಮನವಿ ಮಾಡಿದ್ದಾರೆ.
ದರ್ಶನ್ ಅವರಿಗೆ ಎಂ ಆರ್ ಐ ಸ್ಕ್ಯಾನ್ ಹಾಗೂ ಸಿಟಿ ಸ್ಕ್ಯಾನ್ ಕೂಡ ಮಾಡಿಸಲಾಗಿದೆ. ವರದಿಯಲ್ಲಿ ನ್ಯೂರೋ ಸರ್ಜನ್ ಮೂರು ಅಂಶಗಳನ್ನ ಹೇಳಿದ್ದಾರೆ. ನಂಬ್‌ನೆಸ್ ಇದೆ, ರಕ್ತಪರಿಚಲನೆ ಆಗುತ್ತಿಲ್ಲ. ಸರಿಯಾದ ಚಿಕಿತ್ಸೆ ನೀಡದಿದ್ರೆ ಕಾಲಿಗೆ ಪಾರ್ಶ್ವವಾಯು ಆಗುವ ಸಾಧ್ಯತೆ ಇದೆ ಎಂದು ಹಿರಿಯ ವಕೀಲರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.
ದರ್ಶನ್ ಮೆಡಿಕಲ್ ರಿಪೋರ್ಟ್ನಲ್ಲಿ ಬೆನ್ನು ನೋವಿನಿಂದ ಬಳಲುತ್ತಿರುವ ದರ್ಶನ್ಗೆ ಸರ್ಜರಿ ಮಾಡ್ಬೇಕಿದೆ ಎಂದು ಉಲ್ಲೇಖ ಮಾಡಿದ್ದಾರೆ ಎನ್ನಲಾಗ್ತಿದೆ. ದರ್ಶನ್ ಪರ ವಕೀಲರ ವಾದದ ವೇಳೆ ಬೆಂಗಳೂರು ಅಥವಾ ಬಳ್ಳಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬಹುದು ಅಂತ ವರದಿಯಲ್ಲಿ ಇದೆ ಎಂದು ನ್ಯಾಯಾಧೀಶರು ಕೂಡ ಹೇಳಿದ್ದಾರೆ.
ಆಕ್ಷೇಪಣೆ ಸಲ್ಲಿಸಲು ಎಸ್ ಪಿಪಿ ಸಮಯಾವಕಾಶ ಕೋರಿದ ಹಿನ್ನೆಲೆ ವಿಚಾರಣೆ ಮುಂದೂಡಿಕೆ ಮಾಡಲಾಗಿದೆ. ದರ್ಶನ್ ಪರ ವಕೀಲರ ವಾದ ಆಲಿಸಿದ ನ್ಯಾಯಾಧೀಶರು ಇಂದು (ಅ.29) ಮಧ್ಯಾಹ್ನ 2.30ಕ್ಕೆ ದರ್ಶನ್ ಬೇಲ್ ಅರ್ಜಿ ವಿಚಾರಣೆಯನ್ನು ಮುಂದೂಡಿದ್ದಾರೆ. ನಾಳೆ ಎಸ್ಪಿಪಿ ಪ್ರತಿವಾದ ಮಾಡಲಿದ್ದಾರೆ.
ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ನಟ ದರ್ಶನ್ ಜೈಲುಪಾಲಾಗಿ 4 ತಿಂಗಳು ಕಳೆದಿದೆ. ಜಾಮೀನು ಪಡೆದು ಹೊರ ಬರುವ ದಿನಕ್ಕಾಗಿ ದರ್ಶನ್ ಕೂಡ ಕಾಯ್ತಿದ್ದಾರೆ. ಬಳ್ಳಾರಿ ಜೈಲು ಸೇರಿದ ಮೇಲೆ ಅವರಿಗೆ ಬೆನ್ನು ನೋವು ಹೆಚ್ಚಿದೆ.
ಇದನ್ನೂ ಓದಿ: Actor Darshan: ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ