Friday, 25th October 2024

Adichunchanagiri University: ಆದಿಚುಂಚನಗಿರಿ ವಿವಿಯಲ್ಲಿ ವಿದ್ಯಾರ್ಥಿಗಳೊಂದಿಗೆ ಧನಕರ್, ದೇವೇಗೌಡರ ಸಂವಾದ

Adichunchanagiri University

ಮಂಡ್ಯ/ಬೆಂಗಳೂರು: ಉಪ ರಾಷ್ಟ್ರಪತಿ ಜಗದೀಪ್ ಧನಕರ್ (Jagdeep Dhankhar) ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ (HD Deve Gowda) ಅವರು ಶ್ರೀ ಆದಿಚುಂಚನಗಿರಿ ಕ್ಷೇತ್ರದ ವಿಶ್ವವಿದ್ಯಾಲಯದಲ್ಲಿ (Adichunchanagiri University) ನಡೆದ ವಿದ್ಯಾರ್ಥಿಗಳೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಈ ವೇಳೆ ಭಾರತದ ಸಮಗ್ರ ಅಭಿವೃದ್ಧಿ, ಮುನ್ನಡೆಯ ಕುರಿತು ವಿದ್ಯಾರ್ಥಿಗಳ ಜತೆ ಪ್ರಮುಖರಿಬ್ಬರೂ ವಿಸ್ತೃತವಾಗಿ ಚರ್ಚೆ ನಡೆಸಿದರು ಹಾಗೂ ರಾಷ್ಟ್ರದ ಮುನ್ನಡೆಯ ಬಗ್ಗೆ ತಮ್ಮ ಕನಸುಗಳನ್ನು ಹಂಚಿಕೊಂಡರು.

ಜಾಗತಿಕ ನೆಲೆಗಟ್ಟಿನಲ್ಲಿ ಕಳೆದ ಹತ್ತು ವರ್ಷಗಳಲ್ಲಿ ಭಾರತ ಸಾಧಿಸುತ್ತಿರುವ ಅಭಿವೃದ್ಧಿಯ ಮೇಲೆ ಬೆಳಕು ಚೆಲ್ಲಿದ ಗಣ್ಯರಿಬ್ಬರು, ಬಹುಮುಖ್ಯವಾಗಿ ಮೇಕ್ ಇನ್ ಇಂಡಿಯಾ, ಆತ್ಮನಿರ್ಭರ್ ಭಾರತ್ ಸೇರಿದಂತೆ ಅನುಷ್ಠಾನಕ್ಕೆ ಬಂದಿರುವ ಅನೇಕ ಪ್ರಗತಿಪರ ಕಾರ್ಯಕ್ರಮಗಳ ಬಗ್ಗೆ ಮಾತನಾಡಿದರು.

ಒಂದೇ ಹೆಲಿಕಾಪ್ಟರ್‌ನಲ್ಲಿ ಬೆಂಗಳೂರಿಗೆ ಪ್ರಯಾಣ

ಕಾರ್ಯಕ್ರಮದ ನಂತರ ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಹಾಗೂ ಮಾಜಿ ಪ್ರಧಾನಿ ದೇವೇಗೌಡ ಅವರು ಒಂದೇ ಹೆಲಿಕಾಪ್ಟರ್‌ನಲ್ಲಿ ಬೆಂಗಳೂರಿಗೆ ಪ್ರಯಾಣ ಬೆಳೆಸಿದರು.

ಈ ಸುದ್ದಿಯನ್ನೂ ಓದಿ | Job Guide: ಉದ್ಯೋಗಾಕಾಂಕ್ಷಿಗಳಿಗೆ ಗುಡ್‌ನ್ಯೂಸ್‌; ನ್ಯಾಷನಲ್‌ ಇನ್ಶೂರೆನ್ಸ್‌ ಕಂಪೆನಿಯ 500 ಹುದ್ದೆಗಳಿಗೆ ಅರ್ಜಿ ಆಹ್ವಾನ

ನಾಳೆ ದೇವೇಗೌಡರ ನಿವಾಸಕ್ಕೆ ಉಪ ರಾಷ್ಟ್ರಪತಿ ಭೇಟಿ

ಕರ್ನಾಟಕ ಪ್ರವಾಸದಲ್ಲಿರುವ ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಅವರು ನಾಳೆ (ಶನಿವಾರ) ಬೆಳಗ್ಗೆ 9 ಗಂಟೆಗೆ ಪದ್ಮನಾಭ ನಗರದಲ್ಲಿರುವ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಅವರ ನಿವಾಸಕ್ಕೆ ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಉಪ ರಾಷ್ಟ್ರಪತಿಗಳು, ಚನ್ನಮ್ಮ ದೇವೇಗೌಡ ಅವರ ಆರೋಗ್ಯ ವಿಚಾರಿಸಲಿದ್ದಾರೆ. ಈ ಸಂದರ್ಭದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಸೇರಿದಂತೆ ಅನೇಕರು ಉಪಸ್ಥಿತರಿರಲಿದ್ದಾರೆ.