Friday, 22nd November 2024

ಪಿಯು ಕಾಲೇಜುಗಳಲ್ಲಿ ದಾಖಲಾತಿ ಅವಧಿ ವಿಸ್ತರಣೆ

Apprentice Training

ಬೆಂಗಳೂರು: ಪದವಿ ಪೂರ್ವ ಶಿಕ್ಷಣ ಇಲಾಖೆಯು ಪ್ರಥಮ ಹಾಗೂ ದ್ವಿತೀಯ ಪಿಯು ಕಾಲೇಜುಗಳಲ್ಲಿ ದಾಖಲಾತಿ ಅವಧಿಯನ್ನು ವಿಸ್ತರಿಸಿ ಆದೇಶ ಹೊರಡಿಸಿದೆ.

ಪ್ರಥಮ ಪಿಯು ದಾಖಲಾತಿಗೆ ಸೆ.1 ರವರೆಗೆ ಹಾಗೂ ದ್ವಿತೀಯ ಪಿಯುಗೆ ಆಗಸ್ಟ್ 30 ರವರೆಗೆ ಅವಕಾಶ ನೀಡಲಾ ಗಿತ್ತು. ಇದೀಗ ಪ್ರಥಮ ಮತ್ತು ದ್ವಿತೀಯ ಪಿಯುಸಿ ಕೋರ್ಸ್‌ಗಳಿಗೆ ಸೆ.11 ರವರೆಗೆ ದಂಡ ಶುಲ್ಕವಿಲ್ಲದೆ ಪ್ರವೇಶ ಪಡೆಯಬಹುದಾಗಿದೆ.

ಅದೇ ರೀತಿ 670 ರೂ. ದಂಡ ಶುಲ್ಕದೊಂದಿಗೆ ಪ್ರವೇಶ ಪಡೆಯಲು ಸೆ.13 ರಿಂದ 25 ರವರೆಗೆ, 2890 ರೂ. ವಿಶೇಷ ದಂಡ ಶುಲ್ಕದೊಂದಿಗೆ ಸೆ.27 ರಿಂದ ಅಕ್ಟೋಬರ್‌ 5 ರವರೆಗೆ ಪ್ರಥಮ ಹಾಗೂ ದ್ವಿತೀಯ ಪಿಯುಸಿ ದಾಖಲಾತಿ ಪಡೆಯಬಹುದು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.

2021- 22ನೇ ಸಾಲಿನ ಪ್ರಥಮ ಪಿಯು ಪ್ರವೇಶದಲ್ಲಿ ಹೆಚ್ಚುವರಿಯಾಗಿ 20 ವಿದ್ಯಾರ್ಥಿಗಳನ್ನು ದಾಖಲಿಸಿಕೊಳ್ಳಲು ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರತಿ ಕಾಲೇಜುಗಳಿಗೆ ಅನುಮತಿ ನೀಡಿದೆ.

ವಾರದ ಮೊದಲ 3 ದಿನ ಶೇ.50ರಷ್ಟು ವಿದ್ಯಾರ್ಥಿಗಳಿಗೆ ಕ್ಲಾಸ್ ಮಾಡಬೇಕು. ಶೇ.50ರಷ್ಟು ವಿದ್ಯಾರ್ಥಿಗಳು ಭೌತಿಕ ತರಗತಿಗಳಿಗೆ ಹಾಜರಾಗಬೇಕು.