Friday, 22nd November 2024

ಫೆ.26-28ರವರೆಗೆ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ

ಬೆಂಗಳೂರು: ಹಾವೇರಿಯಲ್ಲಿ ಮುಂದಿನ ವರ್ಷ ಫೆ.26ರಿಂದ ಫೆ.28ರವರೆಗೆ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಕನ್ನಡ ಸಾಹಿತ್ಯ ಪರಿಷತ್ತು ನಿರ್ಧರಿಸಿದೆ.

ಪರಿಷತ್ತಿನ ಅಧ್ಯಕ್ಷ ಮನು ಬಳಿಗಾರ್ ನೇತೃತ್ವದಲ್ಲಿ ನಡೆದ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳ ಲಾಗಿದೆ.

‘ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಮುಖ ಕಾಣುತ್ತಿದೆ. ಹೀಗಾಗಿ ಮಾರ್ಗಸೂಚಿಗಳನ್ನು ಸಡಿಲಗೊಳಿಸಿ, ಅಕ್ಷರ ಜಾತ್ರೆ ನಡೆಸಲು ಅನುವು ಮಾಡಿಕೊಡಬೇಕೆಂದು ಸರ್ಕಾರಕ್ಕೆ ಮನವಿ ಸಲ್ಲಿಸಬೇಕು’ ಎಂಬ ಅಭಿಪ್ರಾಯ ವ್ಯಕ್ತವಾಯಿತು. ಕಾರ್ಯಕಾರಿ ಸಮಿತಿ ಸಭೆ ಸರ್ವಾನುಮತದಿಂದ ಒಪ್ಪಿಗೆ ಸೂಚಿಸಿತು.

ದಿನಾಂಕ ನಿಗದಿ ಸಂಬಂಧ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕೃಷಿ ಸಚಿವ ಬಿ.ಸಿ. ಪಾಟೀಲ ಹಾಗೂ ಹಾವೇರಿ ಶಾಸಕ ನೆಹರೂ ಓಲೇಕಾರ್ ಅವರೊಂದಿಗೆ ಚರ್ಚಿಸಲಾಯಿತು ಎಂದು ಪರಿಷತ್ತಿನ ಅಧ್ಯಕ್ಷ ಮನು ಬಳಿಗಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.