ಬಳ್ಳಾರಿ: ಬಿಜಿಪಿ ಜಿಲ್ಲಾಧ್ಯಕ್ಷರಾಗಿ ಅನಿಲ್ ಮೋಕ ಅವರು ನೇಮಕಗೊಂಡಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು, ಮಕರ ಸಂಕ್ರಾಂತಿ ಹಬ್ಬದ ದಿನದಂದು, ಅನಿಲ ನಾಯ್ಡು ಮೊಕ ಅವರನ್ನು ನೇಮಕ ಮಾಡಿದ್ದಾರೆ.
ಎಂ ಎ ಎಲ್ ಎಲ್ ಬಿ ಪದವಿಧರರಾದ ಇವರು, ಕಳೆದ 2006 ರಲ್ಲಿ ಎಬಿವಿಪಿ ಯ ಪೂರ್ಣ ಅವಧಿ ಕಾರ್ಯಕರ್ತರಾಗಿದ್ದಾರೆ. ಹಂಪಿ ಉಳಿಸಿ ಆಂದೋಲನ ಸಮಿತಿಯ ಸಂಚಾಲಕರಾಗಿ, ಹಿಂದೂ ಜಾಗರಣ ವೇದಿಕೆಯ ಉತ್ತರ ಪ್ರಾಂತ ಕಾರ್ಯದರ್ಶಿ, 7 ವರ್ಷಗಳ ಕಾಲ ಬಿಜೆಪಿ ಜಿಲ್ಲಾ ಹಾಗೂ ವಿಭಾಗ ಸಂಘಟನಾ ಕಾರ್ಯದರ್ಶಿಯಾಗಿ ಕೆಲಸ ನಿರ್ವಹಿಸಿದ್ದಾರೆ.
ಕಳೆದ 4ವರ್ಷದಿಂದ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಕೆಲಸ ನಿರ್ವಹಿಸುತ್ತಿದ್ದರು. ಮಾಜಿ ಶಾಸಕರಾದ ಜಿ.ಸೋಮಶೇಖರ್ ರೆಡ್ಡಿ ಹಾಗೂ ಎಮ್ಮೆಲ್ಸಿ ವೈ. ಎಂ. ಸತೀಶ್ ಅವರ ಹೆಸರು ಕೇಳಿ ಬಂದಿತ್ತು.