ಬೆಳಗಾವಿ: ಬೆಳಗಾವಿ ಅಧಿವೇಶನದಲ್ಲೇ ಮತಾಂತರ ನಿಷೇಧ ಕಾಯ್ದೆಯನ್ನು ಮಂಡಿಸಲು ಸರ್ಕಾರ ತೀರ್ಮಾ ನಿಸಿದ್ದು, ಸಚಿವ ಸಂಪುಟ ಸಭೆಯಲ್ಲಿ ಕಾಯ್ದೆಯನ್ನು ಸದನದಲ್ಲಿ ಮಂಡಿಸಲು ಒಪ್ಪಿಗೆ ದೊರೆತಿದೆ.
ಮಧ್ಯಾಹ್ನ ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ ಅವರ ನೇತೃತ್ವದಲ್ಲಿ ಬೆಳಗಾವಿಯ ಸುವರ್ಣಸೌಧದಲ್ಲಿ ಸಚಿವ ಸಂಪುಟ ಸಭೆ ನಡೆದಿದ್ದು, ಈ ಸಭೆಯಲ್ಲಿ ಪ್ರಮುಖವಾಗಿ ಮತಾಂತರ ನಿಷೇಧ ವಿಧೇಯಕವನ್ನು ಮಂಡಿಸಲು ಒಪ್ಪಿಗೆ ದೊರೆತಿದೆ.
ಡಿ.21ರಂದು ವಿಧಾನಸಭೆಯಲ್ಲಿ ಮಂಡಿಸಿ ಅಂಗೀಕಾರ ಪಡೆಯಲು ಸರ್ಕಾರ ತಯಾರಿ ನಡೆಸಿದೆ. ವಿಧೇಯಕ ಮಂಡನೆಗೆ ಕಾಂಗ್ರೆಸ್ ಪಕ್ಷ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ ಬಿಜೆಪಿ ಮಾತ್ರ ಶತಾಯ ಗತಾಯ ವಿಧೇಯಕ ಮಂಡನೆಗೆ ಮುಂದಾಗಿದೆ.
ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ ಸೇರಿದಂತೆ ಎಲ್ಲ ಸಚಿವರುಗಳು ಸಹ ವಿಧೇಯಕ ಮಂಡನೆಗೆ ಒಲವು ತೋರಿದ್ದು, ಈ ಸಂಬಂಧ ಈಗಾಗಲೇ ಹೇಳಿಕೆಗಳನ್ನು ನೀಡಿದ್ದು, ಇದೇ ಅಧಿವೇಶನದಲ್ಲಿ ವಿರೋಧ ಪಕ್ಷದ ವಿರೋಧಗಳ ನಡುವೆಯೂ ಮತಾಂತರ ನಿಷೇಧ ಕಾಯ್ದೆ ಮಂಡನೆಯಾಗುವುದು ನಿಶ್ಚಿತ.