Saturday, 14th December 2024

ಅರಭಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಬಾಲಚಂದ್ರ ಜಾರಕಿಹೊಳಿ ನಾಮಪತ್ರ ಸಲ್ಲಿಕೆ

ಮೂಡಲಗಿ : ಅರಭಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಇಂದು ಚುನಾವಣಾ ಧಿಕಾರಿಗಳಿಗೆ ತಮ್ಮ ನಾಮಪತ್ರ ಸಲ್ಲಿಸಿದರು.

ಬುಧವಾರ ಇಲ್ಲಿನ ತಹಶೀಲ್ದಾರ ಕಛೇರಿಗೆ ತೆರಳಿದ ಬಾಲಚಂದ್ರ ಜಾರಕಿಹೊಳಿ ಅವರು ಚುನಾವಣಾಧಿಕಾರಿಯಾಗಿರುವ ಉಪವಿಭಾಗಾಧಿಕಾರಿ ಪ್ರಭಾವತಿ ಫಕೀರಪೂರ ಅವರಿಗೆ ಬಿಜೆಪಿ ಅಧಿಕೃತ ಅಭ್ಯರ್ಥಿಯಾಗಿ ಉಮೇದುವಾರಿಕೆ ಸಲ್ಲಿಸಿದರು.

ಮುಂಜಾನೆ ೧೧ ಗಂಟೆಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅತ್ಯಂತ ಸರಳವಾಗಿ ತಮ್ಮ ನಾಲ್ವರು ಸೂಚಕರೊಂದಿಗೆ ಒಂದು ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಪ್ರಭಾಶುಗರ ನಿರ್ದೇಶಕರಾದ ಬಸಗೌಡ ಪಾಟೀಲ, ಕೆಂಚನಗೌಡ ಪಾಟೀಲ, ಜಿಪಂ ಮಾಜಿ ಸದಸ್ಯರಾದ ಡಾ.ರಾಜೇಂದ್ರ ಸಣ್ಣಕ್ಕಿ, ಶಂಕರ ಬಿಲಕುಂದಿ ಅವರು ಉಪಸ್ಥಿತರಿದ್ದರು.