ಬೆಂಗಳೂರು : ನಗರದಲ್ಲಿ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆಯವರು, ಸಿಂದಗಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಅಶೋಕ್ ಮನಗೊಳಿಯವರನ್ನು ಘೋಷಣೆ ಮಾಡಿದ್ದಾರೆ.
ಸಿಂದಗಿ ಹಾಗೂ ಹಾನಗಲ್ ವಿಧಾನಸಭಾ ಕ್ಷೇತ್ರಗಳಿಗೆ ಅಕ್ಟೋಬರ‍್ 30ರಂದು ಚುನಾವಣೆ ನಡೆಯಲಿದೆ. ಇಂತಹ ಸಿಂದಗಿ ವಿಧಾನ ಸಭಾ ಉಪ ಚುನಾವಣೆಗೆ ಕಾಂಗ್ರೆಸ್ ನಿಂದ ಅಭ್ಯರ್ಥಿ ಘೋಷಣೆ ಮಾಡಲಾಗಿದೆ. ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣಾ ಆಯೋಗ ಉಪ ಚುನಾವಣೆ ಘೋಷಣೆ ಮಾಡಿದೆ.
ಇನ್ನೂ ಮುಂದುವರೆದು ಮಾತನಾಡಿದ ಅವರು ಹಾನಗಲ್ ವಿಧಾನಸಭಾ ಉಪ ಚುನಾವಣೆಗೆ ಅಭ್ಯರ್ಥಿ ಫೈನಲ್ ಆಗಿಲ್ಲ. ಈ ಕ್ಷೇತ್ರದಲ್ಲಿ ಮನೋಹರ್ ತಹಸೀ ಲ್ದಾರ್, ಶ್ರೀನಿವಾಸ್ ಮಾನೆ ಆಕಾಂಕ್ಷಿಗಳಾಗಿದ್ದಾರೆ. ವರಿಷ್ಠರು ಅಭ್ಯರ್ಥಿಯನ್ನು ಘೋಷಣೆ ಮಾಡಲಿದ್ದಾರೆ. ಸಿಂದಗಿ ಹಾಗೂ ಹಾನಗಲ್ ಉಪ ಚುನಾವಣೆ ಯಲ್ಲಿ ಕಾಂಗ್ರೆಸ್ ಗೆಲವು ಸಾಧಿಸಲಿದೆ ಎಂದರು.