Sunday, 15th December 2024

ಬಸವಶ್ರೀ ಪ್ರಶಸ್ತಿ ಸ್ವೀಕರಿಸಿದ ಅಶ್ವಿನಿ ಪುನೀತ್​ರಾಜ್​ಕುಮಾರ್​

ಚಿತ್ರದುರ್ಗ: ಮುರುಘಾ ಮಠದ 2021ನೇ ಸಾಲಿನ ಪ್ರತಿಷ್ಠಿತ ಬಸವಶ್ರೀ ಪ್ರಶಸ್ತಿಯನ್ನು ಮರಣೋತ್ತರವಾಗಿ ಸ್ಯಾಂಡಲ್​ವುಡ್​ನ ಡಾ.ಪುನೀತ್‌ ರಾಜ್‌ಕುಮಾರ್ ಅವರಿಗೆ ನೀಡಲಾಗಿದ್ದು, ಅಶ್ವಿನಿ ಪುನೀತ್​ರಾಜ್​ಕುಮಾರ್​ ಅವರು ಪ್ರಶಸ್ತಿ ಸ್ವೀಕರಿಸಿದರು.

ಬಸವ ಜಯಂತಿ ದಿನವಾದ ಮಂಗಳವಾರ ಚಿತ್ರದುರ್ಗ ಮುರುಘಾ ಮಠದ ಅನುಭವ ಮಂಟಪದಲ್ಲಿ ಆಯೋಜಿಸಿದ್ದ ಕಾರ್ಯಕ್ರದಲ್ಲಿ ಬಸವಶ್ರೀ ಪ್ರಶಸ್ತಿಯನ್ನು ಡಾ. ಶಿವಮೂರ್ತಿ ಮುರುಘಾ ಶರಣರು ಪ್ರದಾನ ಮಾಡಿ ದರು.

ಡಾ.ಶಿವಮೂರ್ತಿ ಮುರುಘ ಶರಣು ಮಾತನಾಡಿ, ಡಾ.ರಾಜ್​ಕುಮಾರ್ ಅವರ ಮುದ್ದಿನ ಮಗ ಪುನೀತ್‌. ಅಭಿನಯ, ಹಾಡುಗಾರಿಕೆಯಲ್ಲಿ ಪುನೀತರು, ಪ್ರಣೀತರು. ತಂದೆಯ ಮಾರ್ಗದರ್ಶನ ಆಂತರ್ಯದಲ್ಲಿಟ್ಟು ಕೊಂಡು ಆಕಾಶದ ಎತ್ತರಕ್ಕೆ ಬೆಳೆದರು. ಪುನೀತ್​ರಂತಹ ಪ್ರತಿಭೆಯನ್ನು ಕಂಡ ನಾವುಗಳೇ ಧನ್ಯರು ಎಂದರು.

ಸಚಿವ ಬಿ.ಸಿ. ಪಾಟೀಲ್, ಶಾಸಕ ತಿಪ್ಪಾರೆಡ್ಡಿ, ಜಿಲ್ಲಾಧಿಕಾರಿ ಕವಿತಾ ಮನ್ನಿಕೆರಿ, ಸಿಇಒ ನಂದಿನಿ ದೇವೆ, ಪೊಲೀಸ್ ವರಿಷ್ಠಾಧಿಕಾರಿ ಪರುಶುರಾಮ್ ಉಪಸ್ಥಿತರಿದ್ದರು.