ಬೆಂಗಳೂರು: ನಗರದಲ್ಲಿ ಬಿಎಂಟಿಸಿ ಚಾಲಕ, ನಿರ್ವಾಹಕರ ಮೇಲೆ ಹಲ್ಲೆ ಪ್ರಕರಣಗಳು (Assault case) ದಿನದಿಂದ ದಿನಕ್ಕೆ ಏರಿಕೆಯಾಗುತ್ತಿವೆ. ಇತ್ತೀಚೆಗೆ ನಿರ್ವಾಹಕನಿಗೆ ಪ್ರಯಾಣಿಕನೊಬ್ಬ ಕಲ್ಲಿನಿಂದ ಹಲ್ಲೆ ಮಾಡಿದ ಬೆನ್ನಲ್ಲೇ ಇದೀಗ ಬೈಕ್ ಸವಾರನೊಬ್ಬ, ಬಿಎಂಟಿಸಿ ಬಸ್ ಡ್ರೈವರ್ ಮೇಲೆ ಹಲ್ಲೆ ನಡೆಸಿರುವುದು ಕಂಡುಬಂದಿದೆ. ಇದು ಕಳೆದ ಮೂರು ತಿಂಗಳಲ್ಲಿ ಬಿಎಂಟಿಸಿ ಸಿಬ್ಬಂದಿ ಮೇಲೆ ನಡೆದ 6ನೇ ಹಲ್ಲೆ ಪ್ರಕರಣವಾಗಿದೆ.
ಸೋಮವಾರ ರಾತ್ರಿ 8 ಗಂಟೆಗೆ ಘಟನೆ ನಡೆದಿದೆ. ಮೈಸೂರು ರಸ್ತೆಯ ಹಳೆಗುಡ್ಡದಹಳ್ಳಿ ಬಳಿ ಘಟನೆ ನಡೆದಿದ್ದು., ವಿಜಯನಗರದಿಂದ ಜಯನಗರ ಸಂಚಾರ ಮಾಡುತ್ತಿದ್ದ ಬಸ್ಗೆ ಬೈಕ್ ಸವಾರ ಹತ್ತಿ ಡ್ರೈವರ್ ಮುರ್ತುಜಾ ಸಾಬ್ ಎಂಬುವವರ ಮೇಲೆ ಹಲ್ಲೆ ನಡೆಸಿದ್ದಾನೆ.
ಚಾಲಕನನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲ್ಲೆ ಮಾಡಿದ ಬೈಕ್ ಸವಾರನ ಬೈಕ್ ಸಂಖ್ಯೆ- KA-02JS1916 ಆಗಿದ್ದು, ಚಾಲಕನ ದೂರಿನ ಮೇರೆಗೆ ಬ್ಯಾಟರಾಯನಪುರ ಪೋಲಿಸರು ಕೇಸ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಈ ಸುದ್ದಿಯನ್ನೂ ಓದಿ | Murder Case: ಸಂಶಯಪಿಶಾಚಿ ಗಂಡನ ಮೇಲೆ ಸಿಟ್ಟಿಗೆದ್ದು ಮಗುವನ್ನೇ ಇರಿದು ಕೊಂದ ತಾಯಿ
ಬೀದಿ ನಾಯಿಯ ಮೇಲೇ ಅತ್ಯಾಚಾರ ಎಸಗಲು ಯತ್ನಿಸಿದ ವಿಕೃತ!
ಚಿಕ್ಕಮಗಳೂರು: ವಿಲಕ್ಷಣವಾಗಿ ವರ್ತಿಸುತ್ತಿದ್ದ ಯುವಕನೊಬ್ಬ ಬೀದಿ ನಾಯಿಯ (street dog) ಮೇಲೆ ಅತ್ಯಾಚಾರಕ್ಕೆ (Physical Abuse) ಯತ್ನಿಸಿದ್ದು ಬಯಲಾಗಿದೆ. ಈ ಘಟನೆ ಸಿಸಿಟಿವಿಯಲ್ಲಿ (Viral News) ಸೆರೆಯಾಗಿದ್ದು, ಈತನ ವಿರುದ್ಧ ಚಿಕ್ಕಮಗಳೂರಿನ (Chikkamagaluru news) ಕೊಪ್ಪದಲ್ಲಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಜಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಬೀದಿ ನಾಯಿಗಳ ಜೊತೆ ಯುವಕ ಅಸಭ್ಯವಾಗಿ ವರ್ತಿಸುತ್ತಿರುವುದು ಸಿಸಿ ಕ್ಯಾಮರಾ ದೃಶ್ಯದಲ್ಲಿ ಕಂಡುಬಂದಿದೆ. ಜಯಪುರ ಪಟ್ಟಣದ ಬಸ್ ನಿಲ್ದಾಣದಲ್ಲಿ ಘಟನೆ ನಡೆದಿದ್ದು, ಸ್ವಯಂಪ್ರೇರಿತವಾಗಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಯುವಕ ಬೀದಿ ನಾಯಿ ಜತೆ ಅಸಭ್ಯವಾಗಿ ವರ್ತಿಸಿ ಅತ್ಯಾಚಾರಕ್ಕೆ ಯತ್ನಿಸಿರುವ ವಿಡಿಯೋ ಜಯಪುರ, ಕೊಪ್ಪ ಭಾಗದಲ್ಲಿ ವೈರಲ್ ಆಗುತ್ತಿದೆ.
ಕರ್ತವ್ಯದಲ್ಲಿದ್ದ ಪೊಲೀಸ್ ಕಾನ್ಸ್ಟೇಬಲ್ ನೀಡಿದ ಮಾಹಿತಿಯ ಆಧಾರದಲ್ಲಿ ಪ್ರಕರಣ ದಾಖಲಿಸಲಾಗಿದೆ. ನವೆಂಬರ್ 9ರಂದು ಕೃತ್ಯದ ಬಗ್ಗೆ ವಿಡಿಯೋ ಬೆಳಕಿಗೆ ಬಂದಿದ್ದು, ಸಿಸಿಟಿವಿ ದೃಶ್ಯದ ಬಗ್ಗೆ ಪರಿಶೀಲನೆ ನಡೆಸಿದ ಪೊಲೀಸ್ ಕಾನ್ಸ್ಟೇಬಲ್ ದೂರು ನೀಡಿದ್ದಾರೆ ಎಂದು ಎಫ್ಐಆರ್ನಲ್ಲಿ ತಿಳಿಸಲಾಗಿದೆ.
ಜಯಪುರ ಪಟ್ಟಣದ ಬಸ್ ನಿಲ್ದಾಣದ ಬಳಿ ಗುಪ್ತ ವರದಿಗಾಗಿ ಕರ್ತವ್ಯದಲ್ಲಿರುವಾಗ ಬಾತ್ಮೀದಾರರುಗಳಿಂದ ತಿಳಿದು ಬಂದ ಮಾಹಿತಿಯ ಪ್ರಕಾರ, ವ್ಯಕ್ತಿಯೊಬ್ಬ ನಾಯಿಯನ್ನು ಹಿಡಿದುಕೊಂಡು ಅದರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದಾನೆ. ಬೀದಿ ನಾಯಿಗೆ ಉಪದ್ರವ ಮಾಡುವುದರ ಜೊತೆಗೆ ಪ್ರಾಣಿ ಹಿಂಸೆ ಮಾಡಿರುವುದು ನಿಲ್ದಾಣದಲ್ಲಿರುವ ಅಂಗಡಿಯಲ್ಲಿ ಅಳವಡಿಸಿರುವ ಸಿಸಿ ಕ್ಯಾಮರದಲ್ಲಿ ಸೆರೆಯಾಗಿದೆ. ಈ ಬಗ್ಗೆ ದೊರೆತ ಮಾಹಿತಿ ಮೇರೆಗೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಡಿಯೋವನ್ನು ಅಂಗಡಿ ಮಾಲೀಕರ ಮೊಬೈಲ್ನಿಂದ ಪಡೆದು ಪರಿಶೀಲಿಸಿದ್ದೇನೆ ಎಂದು ಪೊಲೀಸ್ ಕಾನ್ಸ್ಟೇಬಲ್ ತಿಳಿಸಿದ್ದಾರೆ.
ವಿಡಿಯೋ ಪರಿಶೀಲಿಸಿದಾಗ ಸೆಪ್ಟೆಂಬರ್ 18ರಂದು ಬೆಳಗಿನ ಜಾವ ಸುಮಾರು 4.00 ಗಂಟೆ ಸಮಯದಲ್ಲಿ ಕೃತ್ಯ ಎಸಗಿರುವುದು ಬೆಳಕಿಗೆ ಬಂದಿದೆ. ಅವೇಳೆಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಬೀದಿ ನಾಯಿಯನ್ನು ಹಿಡಿದುಕೊಂಡು ಆದರೊಂದಿಗೆ ಅಸಭ್ಯವಾಗಿ ವರ್ತಿಸಿ ಪ್ರಾಣಿಗೆ ಹಿಂಸೆ ಹಾಗೂ ಉಪದ್ರವ ನೀಡುತ್ತಿರುವುದು ಕಂಡು ಬಂದಿದೆ. ಅಸಭ್ಯವಾಗಿ ವರ್ತಿಸುತ್ತಿದ್ದ ವ್ಯಕ್ತಿಯ ವಿಳಾಸದ ಬಗ್ಗೆ ಪರಿಶೀಲನೆ ನಡೆಸಿದಾಗ ಆತ ಕಟ್ಟಿ ಮನೆ ವಾಸಿ ಶಿವರಾಜ ಎಂದು ದೃಢಪಟ್ಟಿರುತ್ತದೆ ಎಂದು ಪೊಲೀಸ್ ಕಾನ್ಸ್ಟೇಬಲ್ ತಿಳಿಸಿಹೇಳಿದ್ದಾರೆ.
ಇದನ್ನೂ ಓದಿ: Viral Video: ಭಾಷಣಕ್ಕೆ ಬಿಜೆಪಿ ಪ್ರಾಂಪ್ಟರ್! ಸಿಎಂ ಏಕನಾಥ್ ಶಿಂಧೆ ವಿಡಿಯೋ ವೈರಲ್