Friday, 13th December 2024

Assault Case: ಪಾರ್ಕಿಂಗ್ ವಿಷಯ ವಿಕೋಪಕ್ಕೆ ಹೋಗಿ ವ್ಯಕ್ತಿಗೆ ಚಾಕು ಇರಿತ

stabbing case

ಬೆಂಗಳೂರು : ಬೆಂಗಳೂರಿನಲ್ಲಿ ವಾಹನ ಪಾರ್ಕಿಂಗ್‌ (Vehicle Parking) ವಿಚಾರಕ್ಕೆ ಉಂಟಾದ ಗಲಾಟೆ ವಿಕೋಪಕ್ಕೆ ತಿರುಗಿ ವ್ಯಕ್ತಿಗೆ ಚಾಕು ಇರಿದಿರುವ (Stabbing) ಘಟನೆ (Bengaluru Crime news) ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಠಾಣಾ ವ್ಯಾಪ್ತಿಯಲ್ಲಿ (Assault Case) ನಿನ್ನೆ ನಡೆದಿದೆ.

ನಾಗರಬಾವಿಯ ವಿನಾಯಕ ಲೇಔಟ್‌ನಲ್ಲಿ ಚಾಕು ಇರಿದಿರುವ ಘಟನೆ ನಡೆದಿದೆ. ವಕೀಲ ದಳಪತಿ (70) ಎನ್ನುವವರಿಗೆ ರಾಘವೇಂದ್ರ ಎನ್ನುವ ವ್ಯಕ್ತಿ ಚಾಕುವಿನಿಂದ ಇರಿದಿದ್ದಾನೆ. ದಳಪತಿ ಮನೆಯ ಬಳಿ ರಾಘವೇಂದ್ರ ಚಾಕುವಿನಿಂದ ಇರಿದಿದ್ದಾನೆ. ಪಾರ್ಕಿಂಗ್ ವಿಚಾರಕ್ಕೆ ಗಲಾಟೆ ನಡೆದಿದ್ದು, ಚಾಕುವಿನಿಂದ ಬೆನ್ನಿಗೆ ಚುಚ್ಚಿ ಆರೋಪಿ ರಾಘವೇಂದ್ರ ಕೊಲೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ.

ಸದ್ಯ ನಾಗರಬಾವಿಯ ಜಿಎಂ ಆಸ್ಪತ್ರೆಯಲ್ಲಿ ವಕೀಲ ದಳಪತಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಕುರಿತಂತೆ ಗಾಯಗೊಂಡವರ ಕುಟುಂಬಸ್ಥರು ದೂರು ನೀಡಿದ್ದಾರೆ. ಕೊಲೆ ಯತ್ನ ಕೇಸ್ ದಾಖಲಿಸಿ ಪೊಲೀಸರು ರಾಘವೇಂದ್ರನನ್ನು ಆರೆಸ್ಟ್ ಮಾಡಿದ್ದಾರೆ.

ಸಿಎಂ ವಿರುದ್ಧ ಅಪಪ್ರಚಾರ, ಸ್ನೇಹಮಯಿ ಕೃಷ್ಣ ಮೇಲೆ ಎಫ್‌ಐಆರ್

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah)ಅವರ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ಅಪಪ್ರಚಾರ ಮಾಡಿದ ಆರೋಪದ ಮೇರೆಗೆ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ (Snehamayi Krishna) ವಿರುದ್ಧ ಮೈಸೂರಿನ (Muysuru news) ದೇವರಾಜ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರು ನಿವೇಶನ ಖರೀದಿಸಿದ ಸಂದರ್ಭದಲ್ಲಿ ಅವರ ಬದಲಿಗೆ ಮುಡಾ ತಹಶೀಲ್ದಾರ್ ಮುದ್ರಾಂಕ ಶುಲ್ಕ ಪಾವತಿಸಿದ್ದಾರೆ ಎಂದು ಸ್ನೇಹಮಯಿ ಕೃಷ್ಣ ಅವರು ಸುಳ್ಳು ಆರೋಪ ಮಾಡಿದ್ದಾರೆ. ಖರೀದಿದಾರರು ಉಪ ನೋಂದಣಾಧಿಕಾರಿ ಕಚೇರಿಗೆ ಹಾಜರಾಗದೇ ವಿನಾಯಿತಿ ಪಡೆದ ಪ್ರಕರಣಗಳಲ್ಲಿ ಅಧಿಕಾರಿಗಳ ಹೆಸರು ಉಲ್ಲೇಖಿಸಲಾಗುತ್ತದೆ. ಆದರೆ ಖರೀದಿದಾರರೇ ಶುಲ್ಕ ಪಾವತಿಸಿದ್ದಾರೆ ಎಂದು ಸ್ನೇಹಮಯಿ ಕೃಷ್ಣ ಮಾಡಿರುವ ಆರೋಪ ನಿರಾಧಾರವಾಗಿದೆ. ಹೀಗಾಗಿ, ಅವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಕೋರಿ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಅವರು ದೂರು ನೀಡಿದ್ದಾರೆ.

ಎನ್.ಸಿ.ಆರ್. ದೂರು ದಾಖಲಿಸಿದ್ದ ಪೊಲೀಸರು ಕೋರ್ಟ್ ಅನುಮತಿ ಪಡೆದು ಪ್ರಕರಣ ದಾಖಲಿಸಿದ್ದು, ಬುಧವಾರ ಸಂಜೆ ಕಾಂಗ್ರೆಸ್ ಕಚೇರಿಯಲ್ಲಿ ಸ್ಥಳ ಮಹಜರು ನಡೆಸಿದ್ದಾರೆ.

ಇದನ್ನೂ ಓದಿ: ಬಾವಿಯಲ್ಲಿ ಸಿಲುಕಿದ್ದ ಬಾಲಕಿ ರಕ್ಷಣೆ: ಚಿಕಿತ್ಸೆ ಫಲಿಸದೆ ಸಾವು