Saturday, 21st September 2024

B S Yediyurappa: ಬಿ.ಎಸ್‌.ಯಡಿಯೂರಪ್ಪಗೆ ಮತ್ತೊಂದು ಸಂಕಷ್ಟ; ಅಕ್ರಮ ಡಿನೋಟಿಫೈ ಕೇಸ್‌ನಲ್ಲಿ ಲೋಕಾಯುಕ್ತ ಸಮನ್ಸ್‌

B S Yediyurappa

ಬೆಂಗಳೂರು: ಪೋಕ್ಸೊ ಪ್ರಕರಣದ ಬಳಿಕ ಇದೀಗ ಮತ್ತೊಂದು ಪ್ರಕರಣದಲ್ಲಿ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಸಂಕಷ್ಟ ಎದುರಾಗಿದೆ. ಅಕ್ರಮ ಡಿನೋಟಿಫಿಕೇಶನ್ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆಗೆ ಹಾಜರಾಗುವಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ (B S Yediyurappa) ಅವರಿಗೆ ಲೋಕಾಯುಕ್ತ ಸಮನ್ಸ್‌ ಜಾರಿ ಮಾಡಿದೆ.

ಬೆಂಗಳೂರಿನ ಗಂಗೇನಹಳ್ಳಿಯಲ್ಲಿ 1 ಎಕರೆ 14 ಗುಂಟೆ ಭೂಮಿಯನ್ನು ಸತ್ತವರ ಹೆಸರಲ್ಲಿ ಎಚ್‌.ಡಿ. ಕುಮಾರಸ್ವಾಮಿ ಹಾಗೂ ಬಿ.ಎಸ್. ಯಡಿಯೂರಪ್ಪ ಅವರು ಅಕ್ರಮವಾಗಿ ಡಿನೋಟಿಫಿಕೇಷನ್​ ಮಾಡಿಸಿದ್ದರು ಎಂಬ ಆರೋಪವಿದೆ. 2007ರಲ್ಲಿ ಕುಮಾರಸ್ವಾಮಿ ಸಿಎಂ ಆಗಿದ್ದಾಗ, ಅವರ ಪ್ರಧಾನ ಕಾರ್ಯದರ್ಶಿಯಾಗಿದ್ದ ನಿವೃತ್ತ ಐಎಎಸ್‌​​ ಅಧಿಕಾರಿ ರಾಕೇಶ್ ಸಿಂಗ್ ಅವರಿಂದ ನಿಯಮ 164ರಡಿ ಲೋಕಾಯುಕ್ತ ಅಧಿಕಾರಿಗಳು ಮಾಜಿಸ್ಟ್ರೇಟ್​​​​​​ ಮುಂದೆ ಇತ್ತೀಚೆಗೆ ಹೇಳಿಕೆ ಪಡೆದುಕೊಂಡಿದ್ದರು. ಇದೀ ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಬಿಎಸ್​​​ ಯಡಿಯೂರಪ್ಪ ಈ ಇಬ್ಬರೂ ನಾಯಕರು ಜಂಟಿಯಾಗಿ ಡಿನೋಟಿಫಿಕೇಷನ್​ ಹಗರಣದಲ್ಲಿ ಭಾಗಿಯಾಗಿದ್ದಾರೆಂಬ ಆರೋಪವಿದೆ. ಪ್ರಕರಣದಲ್ಲಿ ಯಡಿಯೂರಪ್ಪ ಅವರನ್ನು ಎ1 ಆರೋಪಿಯನ್ನಾಗಿ ಮಾಡಲಾಗಿದೆ.

ಈ ಸುದ್ದಿಯನ್ನೂ ಓದಿ | Tumkur News: ಹಿಂದೂ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾದ ಪೊಲೀಸರ ನಡೆ

ಶಾಸಕ ಮುನಿರತ್ನ ಮತ್ತೆ ಜೈಲುಪಾಲು; ಅತ್ಯಾಚಾರ ಪ್ರಕರಣದಲ್ಲಿ 14 ದಿನ ನ್ಯಾಯಾಂಗ ಬಂಧನ

MLA Munirathna

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಬಂಧನವಾಗಿರುವ ಬಿಜೆಪಿ ಶಾಸಕ ಮುನಿರತ್ನಗೆ (MLA Munirathna) 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಹೀಗಾಗಿ ಅವರು ಮತ್ತೆ ಜೈಲು ಸೇರಿದ್ದಾರೆ. ಜಾತಿ ನಿಂದನೆ ಪ್ರಕರಣದಲ್ಲಿ ಜಾಮೀನು ಪಡೆದು ಬಿಡುಗಡೆಯಾದ ಬೆನ್ನಲ್ಲೇ ಕಗ್ಗಲೀಪುರ ಪೊಲೀಸರು, ಶಾಸಕ ಮುನಿರತ್ನರನ್ನು ಬಂಧಿಸಿದ್ದರು. ಇದೀಗ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶಿಸಿದೆ.

ಗುತ್ತಿಗೆದಾರನಿಗೆ ಜೀವ ಬೆದರಿಕೆ ಮತ್ತು ಜಾತಿ ನಿಂದನೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಅವರು ಗುರುವಾರವಷ್ಟೇ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಇದರ ಬೆನ್ನಲ್ಲೇ ಅತ್ಯಾಚಾರ ಪ್ರಕರಣ ಅವರಿಗೆ ಸುತ್ತಿಕೊಂಡಿತ್ತು. ಹೀಗಾಗಿ ಪೊಲೀಸರು ಶನಿವಾರ ಕೋರ್ಟ್​ಗೆ ಹಾಜರುಪಡಿಸಿದ್ದು, ಅಕ್ಟೋಬರ್ 5ರ ವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

2020 ರಿಂದ 2022ರವರೆಗೆ ಶಾಸಕ ಮುನಿರತ್ನ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಮತ್ತು ಬ್ಲ್ಯಾಕ್​ಮೇಲ್​ ಮಾಡಿದ್ದಾರೆ ಎಂದು ರಾಜರಾಜೇಶ್ವರಿ ನಗರದ 40 ವರ್ಷದ ಮಹಿಳೆಯೊಬ್ಬರು ದೂರು ದಾಖಲಿಸಿದ್ದರು. ಸಂತ್ರಸ್ತೆ ದೂರಿನ ಆಧಾರದ ಮೇಲೆ ರಾಮನಗರ ಜಿಲ್ಲೆಯ ಕಗ್ಗಲೀಪುರ ಠಾಣೆ ಪೊಲೀಸರು ಶಾಸಕ ಮುನಿರತ್ನ ವಿರುದ್ಧ ಎಫ್‌ಐಆರ್​ ದಾಖಲಿಸಿದ್ದರು. ಈ ಪ್ರಕರಣ ಸಂಬಂಧ ಶಾಸಕ ಮುನಿರತ್ನ ಅವರನ್ನು ಬಂಧಿಸಲಾಗಿತ್ತು.

ಘಟನೆ ಸಂಬಂಧ ಶಾಸಕ ಮುನಿರತ್ನ ಸೇರಿ 7 ಜನರ ವಿರುದ್ಧ FIR ದಾಖಲಾಗಿತ್ತು. ಆರ್​.ಆರ್​.ನಗರ ಬಿಜೆಪಿ ಶಾಸಕ ಮುನಿರತ್ನ, ವಿಜಯ್​ ಕುಮಾರ್​, ಕಿರಣ್​​, ಲೋಹಿತ್​​, ಮಂಜುನಾಥ್​, ಲೋಕಿ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಖಾಸಗಿ ರೆಸಾರ್ಟ್​ನಲ್ಲಿ ಅತ್ಯಾಚಾರ ಮಾಡಿರುವುದಾಗಿ DySP ದಿನಕರ್ ಶೆಟ್ಟಿ ಸಮ್ಮುಖದಲ್ಲಿ ಮಹಿಳೆ ಆರೋಪ ಮಾಡಿ ಹೇಳಿಕೆ ನೀಡಿದ್ದರು.