ಹರಪನಹಳ್ಳಿ: ತಾಲೂಕಿನ ಕಂಚಿಕೇರಿ ಗ್ರಾಮದ ಬಿ.ಯರಿಸ್ವಾಮಿ ಬಳ್ಳಾರಿ ಗ್ರಾಮೀಣ ಮತ್ತು ವಿಜಯನಗರ ಜಿಲ್ಲಾ ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ.
ಕಾಂಗ್ರೆಸ್ ಪಕ್ಷದ ಕೆಲಸ ಕಾರ್ಯವನ್ನು ನಾನು ನಿಷ್ಠೆಯಿಂದ ಚಾಚುತಪ್ಪದೇ ಪಾಲಿಸುತ್ತೇನೆ ಎಲ್ಲಾ ಯುವ ಕಾಂಗ್ರೆಸ್‌ನ ಕಾರ್ಯ ಕರ್ತರನ್ನು ಒಗ್ಗೂಡಿಸಿ ತಾಲೂಕಿನಲ್ಲಿ ಹಾಗೂ ಜಿಲ್ಲೆಯಲ್ಲಿ ಹಿರಿಯ ಕಾಂಗ್ರೆಸ್ ಮುಖಂಡರ ನೇತೃತ್ವದಲ್ಲಿ ಪಕ್ಷ ಸಂಘಟನೆಗೆ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುತ್ತೇನೆ. ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಜಿಲ್ಲಾಯುವ ಕಾಂಗ್ರೆಸ್ ಅಧ್ಯಕ್ಷರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಪತ್ರಿಕಾ ಪ್ರಕಟಣೆಗೆ ತಿಳಿಸಿದ್ದಾರೆ.