Thursday, 12th December 2024

ಮಾಜಿ ಕೇಂದ್ರ ಸಚಿವ ಬಾಬಾಗೌಡ ಪಾಟೀಲ ನಿಧನ

ಬೆಳಗಾವಿ: ಮಾಜಿ ಕೇಂದ್ರ ಸಚಿವ, ಅಖಂಡ ಕರ್ನಾಟಕ ರೈತ ಸಂಘದ ಅಧ್ಯಕ್ಷ ಬಾಬಾಗೌಡ ಪಾಟೀಲ(88) ಅವರು ಶುಕ್ರವಾರ ನಿಧನರಾದರು.

ಬಾಬುಗೌಡ ಅವರಿಗೆ ಇತ್ತೀಚಿಗೆ ಕರೊನಾ ಸೋಂಕು ತಗುಲಿತ್ತು. ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು. ಬೆಳಗಾವಿ ಜಿಲ್ಲೆಯ ಚಿಕ್ಕಬಾಗೇವಾಡಿ ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಮೃತರಿಗೆ ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ.

ಅಟಲ್ ಬಿಹಾರಿ ವಾಜಪೇಯಿ ಅವರ ಸಂಪುಟದಲ್ಲಿ ಬಾಬಾಗೌಡ ಪಾಟೀಲ ಅವರು ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದರು. 1989ರ ವಿಧಾನಸಭಾ ಚುನಾವಣೆಯಲ್ಲಿ ರೈತ ಸಂಘದಿಂದ ಕಿತ್ತೂರು ಮತ್ತು ಧಾರವಾಡ ಮತ ಕ್ಷೇತ್ರದಿಂದ ಅಖಾಡಕ್ಕಿಳಿದಿದ್ದ ಅವರು ಎರಡೂ ಕಡೆಯೂ ಜಯಗಳಿಸಿದ್ದರು.