ಸಿಂಧನೂರು: ಮೇಕೆದಾಟು ಯೋಜನೆಗೆ ಅವಕಾಶ ನೀಡುವುದಿಲ್ಲ ಎಂದು ಹೇಳಿರುವ ತಮಿಳುನಾಡು ಬಿಜೆಪಿ ಪಕ್ಷದ ರಾಜ್ಯ ಅಧ್ಯಕ್ಷ ಹಾಗೂ ನಿವೃತ್ತ ಐಪಿಎಸ್ ಅಧಿಕಾರಿ ಅಣ್ಣಾಮಲೈ ಹೇಳಿಕೆಗೆ ಜೈ ಕರ್ನಾಟಕ ಸಂಘಟನೆಯ ತಾಲ್ಲೂಕು ಅಧ್ಯಕ್ಷ ಬಸವರಾಜ್ ಬಡಿಗೇರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಅವರು ಶುಕ್ರವಾರ ಪತ್ರಿಕೆ ಹೇಳಿಕೆ ನೀಡಿ ನೀರಿನ ವಿಚಾರದಲ್ಲಿ ರಾಜಕೀಯ ಮಾಡಿ ಕರ್ನಾಟಕ ಹಾಗೂ ತಮಿಳುನಾಡು ಜನರ ಮಧ್ಯೆ ಜಗಳ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಇದು ಸರಿಯಲ್ಲ. ಕೂಡಲೇ ಅಣ್ಣಾಮಲೈ ಅವರು ಕನ್ನಡಿಗರಿಗೆ ಕ್ಷಮೆಯಾಚಿಸಬೇಕು ಇಲ್ಲವಾದರೆ ಮುಂದಿನ ದಿನಮಾನದಲ್ಲಿ ಉಗ್ರವಾದ ಹೋರಾಟ ಹಮ್ಮಿಕೊಳ್ಳಲಾಗುತ್ತದೆ ಎಂದು ಎಚ್ಚರಿಸಿದರು.
ಕರ್ನಾಟಕದಲ್ಲಿ ಸೇವೆ ಸಲ್ಲಿಸಿ ಇತರ ಕನ್ನಡಿಗರ ವಿರುದ್ಧ ನೀರಿನ ವಿಚಾರದಲ್ಲಿ ಅವಹೇಳನ ಹೇಳಿಕೆ ನೀಡುವುದು ಸರಿಯಲ್ಲ ಎಂದರು.