Saturday, 14th December 2024

Road Accident: ಬೈಕ್‌ಗಳ ಡಿಕ್ಕಿ, ಹಬ್ಬಕ್ಕೆ ಊರಿಗೆ ಬಂದ ಸಾಫ್ಟ್‌ವೇರ್ ಇಂಜಿನಿಯರ್ ಸೇರಿ ಮೂವರು ಸಾವು

bagalakote road accident

ಬಾಗಲಕೋಟೆ: ಬೈಕುಗಳು ಭೀಕರವಾಗಿ ಡಿಕ್ಕಿಯಾದ (Bagalakote Road Accident) ಪರಿಣಾಮ, ಗಣೇಶೋತ್ಸವದ ರಜೆಗೆಂದು ಊರಿಗೆ ಬಂದಿದ್ದ ಬೆಂಗಳೂರಿನ ಸಾಫ್ಟ್‌ವೇರ್ ಇಂಜಿನಿಯರ್ (Software Engineer) ಸೇರಿ ಮೂವರು ಮೃತಪಟ್ಟಿದ್ದಾರೆ. ಬಾಗಲಕೋಟೆ (bagalakote news) ನಗರದ ಹೆಲಿಪ್ಯಾಡ್ ರಸ್ತೆಯಲ್ಲಿ ದುರ್ಘಟನೆ ಸಂಭವಿಸಿದೆ.

ಮೃತಪಟ್ಟರನ್ನು ಬೆಂಗಳೂರಿನ ಸಾಪ್ಟವೇರ್ ಎಂಜಿನಿಯರ್ ರಜನಿ ಒಂದಕುದರಿ (34), ಬಾಗಲಕೋಟೆಯ ಬಿವಿವಿ ಸಂಘದ ದಂತ ವೈದ್ಯಕೀಯ ಕಾಲೇಜಿನ ಉಪನ್ಯಾಸಕಿ ಶೃತಿ ಒಂದಕುದರಿ (32) ಹಾಗೂ ಅಭಿಷೇಕ ದೋತ್ರೆ (20) ಎಂದು ಗುರುತಿಸಲಾಗಿದೆ. ಬೈಕ್‌ನಲ್ಲಿದ್ದ ಇನ್ನೊಬ್ಬ ಸವಾರ ತೀವ್ರವಾಗಿ ಗಾಯಕೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಇಬ್ಬರು ಮಹಿಳೆಯರು ಸ್ಕೂಟಿಯಲ್ಲಿ ಪ್ರಯಾಣಿಸುತ್ತಿದ್ದು, ಹೆಲಿಪ್ಯಾಡ್ ರಸ್ತೆಯ ಬಳಿ ರಸ್ತೆಯ ತಿರುವು ಬದಲಿಸಿಕೊಂಡು ಹೊರಟಿದ್ದರು. ಈ ವೇಳೆ ವೇಗವಾಗಿ ಬಂದ ಬೈಕ್‌ಗೆ ಮುಖಾಮುಖಿ ಡಿಕ್ಕಿಯಾಗಿವೆ. ಒಬ್ಬ ಮಹಿಳೆ ಸ್ಥಳದಲ್ಲಿಯೇ ಮೃತಪಟ್ಟರೆ, ಯುವಕ ಮತ್ತು ಇನ್ನೊಬ್ಬ ಮಹಿಳೆ ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಮೃತಪಟ್ಟಿದ್ದಾರೆ.

ಬೆಂಗಳೂರಿನಲ್ಲಿ ಸಾಪ್ಟವೇರ್ ಎಂಜಿನಿಯರ್ ಆಗಿರುವ ರಜನಿ, ರಜೆಗೆಂದು ಬಾಗಲಕೋಟೆಗೆ ಬಂದಿದ್ದರು. ತನ್ನ ದೂರದ ಸಂಬಂಧಿ ಶೃತಿ ಜತೆಗೆ ಹೊರಗಡೆ ಊಟ ಮಾಡಿ, ಮರಳಿ ಮನೆಗೆ ಹೊರಟಿದ್ದರು. ಈ ವೇಳೆ ದುರ್ಘಟನೆ ಸಂಭವಿಸಿದೆ. ಬಾಗಲಕೋಟೆ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿ ಓದಿ: Raichur Accident: ರಾಯಚೂರು ಅಪಘಾತ; ಗಾಯಾಳು ಮಕ್ಕಳಿಗೆ ಉಚಿತ ಚಿಕಿತ್ಸೆ, ಮೃತರಿಗೆ ಪರಿಹಾರದ ಭರವಸೆ ಕೊಟ್ಟ ಸಿಎಂ