Thursday, 19th September 2024

Bangalore Hit and Run Case: ಭೀಕರ ಅಪಘಾತ; ಹಿಟ್‌ ಆ್ಯಂಡ್‌ ರನ್‌ಗೆ ಮೂವರು ವಿದ್ಯಾರ್ಥಿಗಳು ಬಲಿ

Bangalore Hit and Run Case

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ನಡೆದ ಭೀಕರ ಹಿಟ್‌ ಆ್ಯಂಡ್‌ ರನ್‌ಗೆ ಮೂವರು ವಿದ್ಯಾರ್ಥಿಗಳು ಬಲಿಯಾಗಿದ್ದಾರೆ. ಬೆಂಗಳೂರು ನಗರದ ಚಿಕ್ಕಜಾಲ ಬಳಿ ಬುಧವಾರ ತಡರಾತ್ರಿ ಅಪರಿಚಿತ ವಾಹನ ಡಿಕ್ಕಿಯಾಗಿ ವಿದ್ಯಾರ್ಥಿಗಳು ಸ್ಥಳದಲ್ಲೇ ಅಸುನೀಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ವಾಹನ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ (Bangalore Hit and Run Case).

ಮೃತ ವಿದ್ಯಾರ್ಥಿಗಳನ್ನು ರೋಹಿತ್‌ (22), ಸುಚಿತ್‌ (22) ಮತ್ತು ಹರ್ಷ (22) ಎಂದು ಗುರುತಿಸಲಾಗಿದೆ. ಇವರ ಬಗ್ಗೆ ಹೆಚ್ಚಿನ ಮಾಹಿತಿ ಕಲೆ ಹಾಕಲಾಗುತ್ತಿದೆ.

ಘಟನೆ ಹೇಗಾಯ್ತು?

ಮೂವರು ವಿದ್ಯಾರ್ಥಿಗಳು ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ವೇಗವಾಗಿ ಬಂದ ಅಪರಿಚಿತ ವಾಹನ ಮೂವರು ವಿದ್ಯಾರ್ಥಿಗಳಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸ್‌ ಆಗಮಿಸಿದ್ದು, ತನಿಖೆ ಕೈಗೆತ್ತಿಕೊಂಡಿದ್ದಾರೆ.

ಗಣೇಶೋತ್ಸವದಲ್ಲಿ ಡ್ಯಾನ್ಸ್ ಮಾಡಬೇಡ ಎಂದು ಅಣ್ಣ ಹೇಳಿದ್ದಕ್ಕೆ ಯುವಕ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಗಣೇಶೋತ್ಸವದಲ್ಲಿ ಡ್ಯಾನ್ಸ್ ಮಾಡುತ್ತಿದ್ದಾಗ ಸಹೋದರ ಬುದ್ಧಿವಾದ ಹೇಳಿದ್ದಕ್ಕೆ ಯುವಕನೊಬ್ಬ ಆತ್ಮಹತ್ಯೆ (Self Harming) ಮಾಡಿಕೊಂಡಿರುವ ಘಟನೆ ತಾಲೂಕಿನ ಚಿಕ್ಕಪ್ಯಾಯಲಗುರ್ಕಿ ಗ್ರಾಮದಲ್ಲಿ ನಡೆದಿದೆ. ಗಿರೀಶ್ (21) ಆತ್ಮಹತ್ಯೆ ಮಾಡಿಕೊಂಡ ಯುವಕ.

ಗಿರೀಶ್ ಗಣೇಶ ಮೂರ್ತಿ ಪ್ರತಿಷ್ಠಾಪಿಸಿದ ಜಾಗದಲ್ಲಿ ಹಾಡು ಹಾಕಿ ಡ್ಯಾನ್ಸ್ ಮಾಡುತ್ತಿದ್ದ. ಮಧ್ಯರಾತ್ರಿಯಾದರೂ ಮನೆಗೆ ಬಾರದ ಹಿನ್ನೆಲೆಯಲ್ಲಿ ಯುವಕನ ತಾಯಿ ಹಾಗೂ ಸಹೋದರ ಬೈದು ಬುದ್ಧಿ ಹೇಳಿದ್ದಾರೆ. ಡ್ಯಾನ್ಸ್ ಮಾಡಿದ್ದು ಸಾಕು ಮನೆಗೆ ಬಾ ಎಂದು ಕರೆದಿದ್ದಾರೆ. ಇದರಿಂದ ಮನನೊಂದ ಯುವಕ ಗ್ರಾಮದ ಹೊರವಲಯದ ಮುತ್ತುರಾಯಸ್ವಾಮಿ ದೇವಾಲಯದ ಬಳಿ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಬೆಳಗ್ಗೆ ಹೊಲದ ಕೆಲಸಕ್ಕೆ ಹೋಗುತ್ತಿದ್ದ ಗ್ರಾಮಸ್ಥರು ಮರದಲ್ಲಿ ನೇತಾಡುತ್ತಿದ್ದ ಯುವಕನ ಶವ ಕಂಡು ಮನೆಯವರಿಗೆ ತಿಳಿಸಿದ್ದಾರೆ. ಪೇರೆಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನೂ ಓದಿ: Insulting Hindu Gods: ಹಿಂದು ದೇವರುಗಳಿಗೆ ಅಪಮಾನ; ‘Fact Vid’ ಫೇಸ್‌ಬುಕ್ ಪೇಜ್‌ ವಿರುದ್ಧ ಎಫ್‌ಐಆರ್‌