Wednesday, 18th December 2024

Bengaluru Drugs: ಬೆಂಗಳೂರಿನಲ್ಲಿ ನ್ಯೂ ಇಯರ್‌ಗೆ ಸರಬರಾಜಾಗುತ್ತಿದ್ದ 24 ಕೋಟಿ ಮೌಲ್ಯದ ಮಾದಕವಸ್ತು ಜಪ್ತಿ

bengaluru crime news drugs

ಬೆಂಗಳೂರು: ಬೆಂಗಳೂರಿನಲ್ಲಿ (Bngaluru crime news) ಹೊಸ ವರ್ಷದ ಆಚರಣೆ (New year celebration) ಆರಂಭಕ್ಕೂ ಮುನ್ನ ಸಪ್ಲೈ ಆಗುತ್ತಿದ್ದ ಸುಮಾರು 24 ಕೋಟಿ ಮೌಲ್ಯದ ಮಾದಕವಸ್ತುಗಳನ್ನು (Bengaluru drugs) ಪೊಲೀಸರು ಜಪ್ತಿ ಮಾಡಿದ್ದಾರೆ. ಜೊತೆಗೆ ನೈಜೀರಿಯಾ ಮೂಲದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ.

ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಮಾದಕ ದ್ರವ್ಯ ನಿಗ್ರಹ ದಳ ಹಾಗೂ ಕೆಆರ್ ಪುರ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ 24 ಕೋಟಿ ಮೌಲ್ಯದ ಮಾದಕವಸ್ತುಗಳನ್ನು ಜಪ್ತಿ ಮಾಡಲಾಗಿದೆ. 12 ಕೆಜಿ ನಿಷೇಧಿತ ಶುದ್ಧ ಎಂಡಿಎಂಎ ಕ್ರಿಸ್ಟಲ್ ವಶಪಡಿಸಿಕೊಳ್ಳಲಾಗಿದ್ದು, ಇದು ರಾಜ್ಯದಲ್ಲಿ ಇದುವರೆಗಿನ ಅತಿ ಹೆಚ್ಚು ಮಾದಕ ವಸ್ತು ವಶವಾಗಿರುವ ಪ್ರಕರಣ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ 40 ವರ್ಷದ ನೈಜೀರಿಯಾ ಮೂಲದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಟಿಸಿ ಪಾಳ್ಯದಲ್ಲಿ ತಂಗಿದ್ದ ಈ ಮಹಿಳೆಯನ್ನು ಪೊಲೀಸರು ಖಚಿತ ಮಾಹಿತಿ ಮೇರೆಗೆ ಅರೆಸ್ಟ್ ಮಾಡಿದ್ದಾರೆ. ಈ ಮಹಿಳೆ ಬಳಿ ಅತೀ ಹೆಚ್ಚು ಮೌಲ್ಯದ ಮಾದಕವಸ್ತುಗಳು ಪತ್ತೆಯಾಗಿದ್ದು, ಇದು ನಗರದಲ್ಲಿ ಹಿಂದೆಂದೂ ಪತ್ತೆಯಾಗದ ಪ್ರಮಾಣದ ಮಾದಕವಸ್ತು ಎಂದು ಪೊಲೀಸರು ತಿಳಿಸಿದ್ದಾರೆ. ಇದೇ ವೇಳೆ ಮತ್ತೋರ್ವ ವಿದೇಶಿ ಮಹಿಳೆ ತಲೆಮರೆಸಿಕೊಂಡಿದ್ದು ಆಕೆಯ ಪತ್ತೆಗೆ ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸ್ ಕಮಿಷನರ್ ಬಿ. ದಯಾನಂದ ಮಾಹಿತಿ ನೀಡಿದ್ದಾರೆ.

ವಿಚಾರಣೆ ವೇಳೆ ಶಂಕಿತ ಮಹಿಳೆ ವಿದೇಶಿ ಪ್ರಜೆಗಳು, ಕಾಲೇಜು ವಿದ್ಯಾರ್ಥಿಗಳು ಮತ್ತು ಖಾಸಗಿ ಉದ್ಯೋಗಿಗಳಿಗೆ ಮಾದಕ ದ್ರವ್ಯಗಳನ್ನು ಸರಬರಾಜು ಮಾಡಿರುವುದಾಗಿ ಒಪ್ಪಿಕೊಂಡಿದ್ದಾಳೆ. ಈ ನಿಷೇಧಿತ ವಸ್ತುವನ್ನು ಇನ್ನೊಬ್ಬ ವಿದೇಶಿ ಮಹಿಳೆ ಮುಂಬೈ ನಗರಕ್ಕೆ ಕಳ್ಳಸಾಗಣೆ ಮಾಡುತ್ತಿರುವುದು ಕೂಡ ವಿಚಾರಣೆಯಿಂದ ತಿಳಿದು ಬಂದಿದೆ. ಆ ಮಹಿಳೆಗಾಗಿ ಸದ್ಯ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಇದನ್ನೂ ಓದಿ: ಮಾದಕವಸ್ತು ಕಳ್ಳಸಾಗಣೆ: ಇಬ್ಬರು ಗುಂಡಿಗೆ ಬಲಿ