ಬೆಂಗಳೂರು: ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ (Bengaluru International Film Festival), ಕರ್ನಾಟಕ ಸರ್ಕಾರದ ಮಹತ್ವದ ಸಾಂಸ್ಕೃತಿಕ ಹಬ್ಬ. ಕರ್ನಾಟಕ ಸರ್ಕಾರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕರ್ನಾಟಕ ಚಲನಚಿತ್ರ ಅಕಾಡೆಮಿಗಳ ಮೂಲಕ 2025 ರ ಮಾರ್ಚ್ 1 ರಿಂದ 8ರ ವರೆಗೆ ಹಮ್ಮಿಕೊಂಡಿರುವ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ʼಸರ್ವಜನಾಂಗದ ಶಾಂತಿಯ ತೋಟʼ ಎಂಬ ಘೋಷ ವಾಕ್ಯದಡಿ ಚಲನಚಿತ್ರೋತ್ಸವ ನಡೆಯಲಿದೆ.
ಎಂದಿನಂತೆ ಈ ಬಾರಿಯೂ ʼಕನ್ನಡ ಸಿನಿಮಾʼ ಸ್ಪರ್ಧೆ, ಭಾರತೀಯ ಚಿತ್ರಗಳನ್ನು ಪ್ರತಿನಿಧಿಸುವ ʼಚಿತ್ರಭಾರತಿʼ ಮತ್ತು ʼಏಷಿಯನ್ ಸಿನಿಮಾʼ ಸ್ಪರ್ಧಾ ವಿಭಾಗಗಳಿಗೆ ಆಯ್ಕೆಗಾಗಿ ಅರ್ಹ ಚಲನಚಿತ್ರಗಳನ್ನು ಆಹ್ವಾನಿಸಲಾಗಿದೆ.
ಈ ಸುದ್ದಿಯನ್ನೂ ಓದಿ | Bengaluru International Film Festival: ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ನಟ ಕಿಶೋರ್ ರಾಯಭಾರಿ
ʼಕನ್ನಡ ಸಿನಿಮಾ ಸ್ಪರ್ಧಾ ವಿಭಾಗʼ ದಲ್ಲಿಆಯ್ಕೆಗಾಗಿ ಸಲ್ಲಿಸಬೇಕಾದ ಕಥಾ ಚಿತ್ರಗಳು ಕನಿಷ್ಠ 70 ನಿಮಿಷದ ಅವಧಿಯಾಗಿದ್ದು, ಜನವರಿ 1, 2024 ರಿಂದ ಡಿಸೆಂಬರ್ 31, 2024 ರ ಒಳಗೆ (ಎರಡೂ ದಿನಗಳನ್ನು ಒಳಗೊಂಡಂತೆ) ನಿರ್ಮಾಣಗೊಂಡಿರಬೇಕು. ಕನ್ನಡ ಮತ್ತು ಕರ್ನಾಟಕ ರಾಜ್ಯದ ಯಾವುದೇ ಉಪಭಾಷೆಯಲ್ಲಿ ತಯಾರಾಗಿರುವ ಕಥಾ ಚಿತ್ರಗಳು, ಸ್ಪರ್ಧಾ ವಿಭಾಗದ ಆಯ್ಕೆಗೆ ಪ್ರವೇಶ ಪಡೆಯಲು ಅರ್ಹವಾಗುತ್ತವೆ.
ʼಚಿತ್ರಭಾರತಿʼ- ಭಾರತೀಯ ಚಲನಚಿತ್ರಗಳ ಸ್ಪರ್ಧಾ ವಿಭಾಗದಲ್ಲಿಆಯ್ಕೆಗಾಗಿ ಸಲ್ಲಿಸಲಿರುವ ಚಿತ್ರಗಳು ಜನವರಿ 1, 2024 ರಿಂದ ಡಿಸೆಂಬರ್ 31, 2024ರ ಒಳಗೆ (ಎರಡೂ ದಿನಗಳನ್ನು ಒಳಗೊಂಡಂತೆ) ನಿರ್ಮಾಣಗೊಂಡಿರಬೇಕು ಹಾಗೂ ಭಾರತದ ಯಾವುದೇ ಭಾಷೆಯ ಕಥಾ ಚಿತ್ರವಾಗಿದ್ದು, ಕನಿಷ್ಠ 70 ನಿಮಿಷಗಳ ಅವಧಿಯ ಚಿತ್ರಗಳು ಸ್ಪರ್ಧಾ ವಿಭಾಗದ ಆಯ್ಕೆಗೆ ಪ್ರವೇಶ ಪಡೆಯಲು ಅರ್ಹವಾಗುತ್ತದೆ.
ʼಏಷಿಯಾ ಸಿನಿಮಾ ಸ್ಪರ್ಧಾ ವಿಭಾಗʼ ಕ್ಕೆ, ಏಷಿಯಾದ ಯಾವುದೇ ದೇಶದಲ್ಲಿ, ಜನವರಿ 1, 2024 ರಿಂದ ಡಿಸೆಂಬರ್ 31, 2024ರ ಒಳಗೆ (ಎರಡೂ ದಿನಗಳನ್ನು ಒಳಗೊಂಡಂತೆ) ತಯಾರಾದ, ಕನಿಷ್ಠ 70 ನಿಮಿಷಗಳ ಅವಧಿಯ ಚಲನಚಿತ್ರಗಳು ಸ್ಪರ್ಧಾತ್ಮಕ ವಿಭಾಗದ ಆಯ್ಕೆಗೆ ಪ್ರವೇಶ ಪಡೆಯಲು ಅರ್ಹವಾಗುತ್ತವೆ.
ʼಕನ್ನಡ ಚಲನಚಿತ್ರʼ, ʼಚಿತ್ರಭಾರತಿ – ಭಾರತೀಯ ಚಲನಚಿತ್ರʼ ಮತ್ತು ʼಏಷಿಯನ್ ಚಲನಚಿತ್ರʼ ವಿಭಾಗಕ್ಕೆ ಪ್ರವೇಶ ಬಯಸುವ ಭಾರತೀಯ ಭಾಷಾ ಚಲನಚಿತ್ರಗಳಿಗೆ, ಕೇಂದ್ರೀಯ ಚಲನಚಿತ್ರ ಪ್ರಮಾಣೀಕೃತ ಮಂಡಳಿ ನೀಡುವ ಪ್ರಮಾಣ ಪತ್ರದಲ್ಲಿ ನಮೂದಾಗುವ ದಿನಾಂಕವೇ ನಿರ್ಮಾಣದ ಮಾನದಂಡವಾಗುತ್ತದೆ.
ಈ ಸುದ್ದಿಯನ್ನೂ ಓದಿ | Winter Fashion 2025: ಚಳಿಗಾಲದ ಟಾಪ್ ಲಿಸ್ಟ್‌ಗೆ ಸೇರಿದ ಬ್ರೈಟ್ ಬಣ್ಣದ ಫ್ಯಾಷನ್‌ವೇರ್ಸ್!
ಅರ್ಜಿ ಸಲ್ಲಿಕೆ ಹೇಗೆ?
16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಸ್ಪರ್ಧಾ ವಿಭಾಗಗಳಲ್ಲಿ ಆಯ್ಕೆಗಾಗಿ ಚಲನಚಿತ್ರಗಳನ್ನು ಸಲ್ಲಿಸುವ ಪ್ರಕ್ರಿಯೆ ಇದೇ ಜ.09, 2025 ರಿಂದ ಪ್ರಾರಂಭವಾಗಿದ್ದು, ಸ್ಪರ್ಧಾತ್ಮಕ ವಿಭಾಗಗಳಿಗೆ ಚಲನಚಿತ್ರಗಳ ಅರ್ಜಿ ಸಲ್ಲಿಸಲು www.biffes.org ಜಾಲತಾಣಕ್ಕೆ ಭೇಟಿ ನೀಡಿ. ಅರ್ಜಿಯೊಂದಿಗೆ ಸಿನಿಮಾಕ್ಕೆ ಸಂಬಂಧಿಸಿದ ಎಲ್ಲಾ ವಿವರಗಳನ್ನೂ ನೀಡಬೇಕು. ʼಕನ್ನಡ ಸಿನಿಮಾʼ ಮತ್ತು ʼಚಿತ್ರಭಾರತಿ – ಭಾರತೀಯ ಸಿನಿಮಾʼ ಸ್ಪರ್ಧಾ ವಿಭಾಗಕ್ಕೆ ಅರ್ಜಿ ಸಲ್ಲಿಸಲು ಪ್ರತಿ ಚಿತ್ರಕ್ಕೂ ರೂ. 3,000/- ಪ್ರವೇಶ ಶುಲ್ಕವಿರುತ್ತದೆ. ಇಂಗ್ಲಿಷ್ ಉಪಶೀರ್ಷಿಕೆಗಳನ್ನೊಳಗೊಂಡ ಚಲನಚಿತ್ರದ ಆನ್‌ಲೈನ್ ಸ್ಕ್ರೀನರ್‌ನೊಂದಿಗೆ, ಆನ್‌ಲೈನ್‌ನಲ್ಲಿ ಪ್ರವೇಶ ಶುಲ್ಕವನ್ನು ಪಾವತಿಸಿ, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಇದೇ ಜ.23, 2025 ಆಗಿರುತ್ತದೆ. ಹೆಚ್ಚಿನ ಮಾಹಿತಿಗೆ: +91 8904645529 ಅಥವಾ biffesblr@gmail.com & www.biffes.org ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.