ಬೆಂಗಳೂರು: ಬೆಂಗಳೂರಿನ (Bengaluru News) ಹುಳಿಮಾವು ನಲ್ಲಿರುವ ತೋಟಗಾರಿಕೆ ಇಲಾಖೆಯ ಜೈವಿಕ ಕೇಂದ್ರದಲ್ಲಿ ಅಕ್ಟೋಬರ್ 05 ರಂದು ನಗರವಾಸಿಗಳಿಗೆ, ರೈತರಿಗೆ, ಸಾರ್ವಜನಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಒಂದು ದಿನದ “ಅಣಬೆ ಬೇಸಾಯ” (Production Technology of Mushroom) ಬಗ್ಗೆ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಈ ಸುದ್ದಿಯನ್ನೂ ಓದಿ | Small Savings Schemes : ಸಣ್ಣ ಉಳಿತಾಯದ ಬಡ್ಡಿ; ಸರ್ಕಾರದ ಹೊಸ ನಿರ್ಧಾರವೇನು?
ತರಬೇತಿಯಲ್ಲಿ ಭಾಗವಹಿಸಲು ಆಸಕ್ತಿಯುಳ್ಳವರು ರೂ. 250/- ಗಳನ್ನು ಜೈವಿಕ ಕೇಂದ್ರ, ಹುಳಿಮಾವು, ಬೆಂಗಳೂರು ರವರ ಕಚೇರಿಯಲ್ಲಿ ತರಬೇತಿಯ ದಿನ ಪಾವತಿಸಿ ನೊಂದಣಿಯನ್ನು ಮಾಡಿಕೊಳ್ಳಬಹುದು.
ಈ ಸುದ್ದಿಯನ್ನೂ ಓದಿ | Madhyantara Short Movie: ಮನಕ್ಕೆ ಮುದನೀಡುವ ರಾಷ್ಟ್ರಪ್ರಶಸ್ತಿ ಪುರಸ್ಕೃತ ಕಿರುಚಿತ್ರ ‘ಮಧ್ಯಂತರ’
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 9449833153, 9066764248, 7892618755 ಅಥವಾ ಇ-ಮೇಲ್ sadh.co23@gmail.com, jaivikakendra.hulimavu@gmail.com ಮೂಲಕ ಸಂಪರ್ಕಿಸಬಹುದು ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.