Wednesday, 25th September 2024

Bengaluru Power Cut: ನಾಳೆ ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ

Bengaluru power cut

ಬೆಂಗಳೂರು: ಬೆಂಗಳೂರು ನಗರದ ‘66/11 ಕೆ.ವಿ ಯೆಲ್ಲಾರ್ ಬಂಡೆ’ ಸ್ಟೇಷನ್‌ನಲ್ಲಿ ತುರ್ತುನಿರ್ವಹಣಾ ಕಾರ್ಯ ಕೈಗೊಳ್ಳುವ ಹಿನ್ನೆಲೆಯಲ್ಲಿ ಸೆ.26 ರಂದು ಗುರುವಾರ ಬೆಳಗ್ಗೆ 10.30 ಗಂಟೆಯಿಂದ ಮಧ್ಯಾಹ್ನ 4 ಗಂಟೆಯವರೆಗೆ ನಗರದ ಹಲವೆಡೆ ವಿದ್ಯುತ್ ವ್ಯತ್ಯಯ (Bengaluru Power Cut) ಉಂಟಾಗಲಿದೆ.

ವಿದ್ಯುತ್‌ ವ್ಯತ್ಯಯವಾಗುವ ಸ್ಥಳಗಳು

ನಗರದ ಎ.ಕೆ. ಆಶ್ರಮ ರಸ್ತೆ, ದೇವೇಗೌಡ ರಸ್ತೆ, ಆರ್.ಟಿ. ನಗರ 1ನೇ ಬ್ಲಾಕ್, ತಿಮ್ಮಯ್ಯ ಗಾರ್ಡನ್, ಮೋದಿ ಗಾರ್ಡನ್, ಮಿಲಿಟರಿ ಏರಿಯ, ವೀರಣ್ಣಪಾಳ್ಯ, ಲುಂಬಿನಿ ಗಾರ್ಡನ್, ಬಿ.ಡಬ್ಲ್ಯೂ.ಎಸ್.ಎಸ್.ಬಿ ಸೆವೇಜ್ ಪ್ಲಾಟ್, ಮರಿಯಣ್ಣಪಾಳ್ಯ, ಕಾಫೀ ಬೋರ್ಡ್ ಲೇಔಟ್ ಕೆಂಪಾಪುರ, ದಾಸರಹಳ್ಳಿ, ಮಾರುತಿ ಲೇಔಟ್, ಭುವನೇಶ್ವರಿ ನಗರ, ಬಿ.ಇ.ಎಲ್. ಕಾರ್ಪೊರೇಟ್ ಆಫೀಸ್, ಚಾಣಕ್ಯ ಲೇಔಟ್, ನಾಗವಾರ, ಎಂ.ಎಸ್. ರಾಮಯ್ಯ ಉತ್ತರ ಸಿಟಿ, ತನಿಸಂದ್ರ ಮುಖ್ಯ ರಸ್ತೆ, ಆಶಿರ್ವಾದ್ ನಗರ, ಅಮರಜ್ಯೋತಿ ಲೇಔಟ್, ರಾಚೇನಹಳ್ಳಿ ಮುಖ್ಯ ರಸ್ತೆ, ಮೇಸ್ತ್ರಿ ಪಾಳ್ಯ, ರಾಯಲ್ ಎನ್‌ಕ್ಲೇವ್, ಶ್ರೀರಾಂಪುರ ವಿಲೇಜ್, ವಿ.ಎಚ್.ಬಿ.ಸಿ.ಎಸ್ ಲೇಔಟ್, ವೀರಣ್ಣಪಾಳ್ಯ, ಜೋಜಪ್ಪ ಲೇಔಟ್, 17 ನೇ ಕ್ರಾಸ್, ಗೋವಿಂದಪುರ, ವೀರಣ್ಣಪಾಳ್ಯ ಮುಖ್ಯ ರಸ್ತೆ, ಬೈರಪ್ಪ ಲೇಔಟ್ ಮತ್ತು ಸುತ್ತಲಿನ ಪ್ರದೇಶಗಳು.

ಈ ಸುದ್ದಿಯನ್ನೂ ಓದಿ | Bengaluru News: ಗಮನಿಸಿ, ವಿವಿಧ ಯೋಜನೆಯಡಿ ಸಹಾಯಧನ, ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ರಾಜನಕುಂಟೆ ಸ್ಟೇಷನ್‌ ವ್ಯಾಪ್ತಿಯ ವಿವಿಧೆಡೆ ವ್ಯತ್ಯಯ

ಬೆಂಗಳೂರು ನಗರದ 66/11ಕೆವಿ ರಾಜನಕುಂಟೆ ಸ್ಟೇಷನ್‌ ಕೆಪಿಟಿಸಿಎಲ್‌ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಹೆಬ್ಬಾಳ ವಿಭಾಗದ ಸಿ7 ಉಪ ವಿಭಾಗದ ಹಲವೆಡೆ ಸೆ.26 ರಂದು ಗುರುವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ನಗರದ ಹೊನ್ನೇನಹಳ್ಳಿ, ಸಿಂಗನಾಯಕನಹಳ್ಳಿ, ರಾಜನಕುಂಟೆ, ಆದಿವಿಶ್ವನಾಥಪುರ, ಮಾರಸಂದ್ರ, ಶ್ರೀರಾಮನಹಳ್ಳಿ, ನೆಲಕುಂಟೆ, ಹನಿಯೂರು, ಚೆಲ್ಲಹಳ್ಳಿ, ಕರ್ಲಾಪುರ, ಕೆಎಂಎಫ್, ಇಟಗಲ್‌ಪುರ, ಅರ್ಕೇರಿ, ಬೈರಾಪುರ, ಬೂದಮನಹಳ್ಳಿ, ದಿಬ್ಬೂರು, ಕಾಕೋಳು, ಸೊಣ್ಣೆನಹಳ್ಳಿ, ಸೆಂಚುರಿ ಲೇಔಟ್, ಪಿಜಿಎಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು.

ಈ ಸುದ್ದಿಯನ್ನೂ ಓದಿ | Prize Money: ಸಮಾಜ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿಗಳ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

ಎಲ್.ಆರ್. ಬಂಡೆ ಸ್ಟೇಷನ್‌ ವ್ಯಾಪ್ತಿಯಲ್ಲಿ ವ್ಯತ್ಯಯ

ಬೆಂಗಳೂರು ನಗರದ 66/11ಕೆವಿ ಎಲ್.ಆರ್. ಬಂಡೆ ಸ್ಟೇಷನ್‌ ಕೆಪಿಟಿಸಿಎಲ್‌ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಹೆಬ್ಬಾಳ ವಿಭಾಗದ ಸಿ5 ಉಪ ವಿಭಾಗದ ಹಲವೆಡೆ ಸೆ.26 ರಂದು ಗುರುವಾರ ಬೆಳಗ್ಗೆ 10.30 ಗಂಟೆಯಿಂದ ಮಧ್ಯಾಹ್ನ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ನಗರದ ಕಾವಲಬೈರಸಂದ್ರ, ಎಲ್.ಆರ್.ಬಂಡೆ ಮುಖ್ಯರಸ್ತೆ, ಗಾಂಧಿನಗರ, ಚಿನ್ನಣ್ಣ ಲೇಔಟ್, ಅಂಬೇಡ್ಕರ್ ಲೇಔಟ್, ಅನ್ವರ್ ಲೇಔಟ್, ಕಾವೇರಿ ನಗರ, ಅಂಬೇಡ್ಕರ್ ವೈದ್ಯಕೀಯ ಕಾಲೇಜು, ಸುಲ್ತಾನ್ ಪಾಳ್ಯ, ರಂಕಾನಗರ, ಕನಕನಗರ, ಕೆ.ಎಚ್.ಬಿ ಮುಖ್ಯರಸ್ತೆ, ಭುವನೇಶ್ವರಿ ನಗರ, ಡಿ.ಜಿ.ಎ ಹಳ್ಳಿ, ಕೆ.ಜೆ.ಹಳ್ಳಿ, ಕೆ.ಜೆ. ಕಾಲೋನಿ, ಆದರ್ಶ ನಗರ, ವಿ. ನಾಗೇನಹಳ್ಳಿ, ಪೆರಿಯಾರ್ ನಗರ, ಪೆರಿಯಾರ್ ಸರ್ಕಲ್, ಶಾಂಪುರ, ಕುಶಾಲ ನಗರ, ಮೋದಿ ರಸ್ತೆ, ಮೋದಿ ಗಾರ್ಡನ್, ದೊಡ್ಡಣ್ಣ ನಗರ, ಮುನಿವೀರಪ್ಪ ಲೇಔಟ್, ಸುಗರ್ ಮಂಡಿ, ಸಾಲ್ಟ್ ಮಂಡಿ, ಮುನೇಶ್ವರ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳು.

ಈ ಸುದ್ದಿಯನ್ನೂ ಓದಿ | Kannada New Movie: ’45’ ಸಿನಿಮಾ ಸೆಟ್‌ಗೆ ಭೇಟಿ ನೀಡಿ ಆಶೀರ್ವದಿಸಿದ ಶ್ರೀ ಬಾಲ್ಕಾನಂದ ಗಿರಿಜಿ ಮಹಾರಾಜ್

ವಿದ್ಯುತ್ ಸಂಬಂಧಿತ ದೂರುಗಳಿಗಾಗಿ ಬೆ.ವಿ.ಕಂ ಸಹಾಯವಾಣಿ ಸಂಖ್ಯೆ ‘1912’ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.