Thursday, 31st October 2024

ಸಾಲಿಗ್ರಾಮ ಪಟ್ಟಣ ಪಂಚಾಯಿತಿಯಲ್ಲಿ ಬಿಜೆಪಿಯದ್ದೇ ಪಾರಮ್ಯ

ಕೋಟ: ಸಾಲಿಗ್ರಾಮ ಪಟ್ಟಣ ಪಂಚಾಯಿತಿ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ದೊಡ್ಮನೆ ಬೆಟ್ಟು ವಾರ್ಡ್ ಸದಸ್ಯೆ ಸುಲತಾ ಹೆಗ್ಡೆ ಅವರು ಅವಿರೋಧವಾಗಿ ಹಾಗೂ ಉಪಾಧ್ಯಕ್ಷರಾಗಿ ವಿಷ್ಣುಮೂರ್ತಿ ವಾರ್ಡ್ ಸದಸ್ಯೆ ಅನುಸೂಯ ಹೇರ್ಳೆ ಆಯ್ಕೆಯಾಗಿದ್ದಾರೆ. ಇಬ್ಬರು ಬಿಜೆಪಿ ಪಕ್ಷದವರೇ.

ಅಧ್ಯಕ್ಷ ಸ್ಥಾನಕ್ಕೆ ಏಕೈಕ ನಾಮಪತ್ರ ಸಲ್ಲಿಕೆಯಾದ ಕಾರಣ ಅವಿರೋಧ ಆಯ್ಕೆ ನಡೆದಿದೆ. ದ್ದು, ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್‌ನ ಝಹಿರಾ ಸ್ಪರ್ಧೆ ನಡೆಸಿದ್ದು ಅನುಸೂಯ ಹೇರ್ಳೆ ಪರವಾಗಿ ಸಂಸದರು, ಶಾಸಕರು ಸೇರಿದಂತೆ ಪಕ್ಷದ 12ಮತಗಳು, ಝಹಿರಾ ಪರ ವಾಗಿ ಕಾಂಗ್ರೆಸ್‌ನ 5 ಮತಗಳು ಚಲಾವಣೆಗೊಂಡಿದೆ.

ಸಂಸದೆ ಶೋಭಾ ಕರಂದ್ಲಾಜೆ, ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಮತ್ತು ಪಕ್ಷದ ಮುಖಂಡರು ಉಪಸ್ಥಿತರಿದ್ದರು. ಬ್ರಹ್ಮಾವರ ತಹಶೀಲ್ದಾರ್ ಕಿರಣ್ ಗೌರಯ್ಯ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು.