Sunday, 15th December 2024

ನ.19 ರಿಂದ 21 ರವರೆಗೆ ಬಿಜೆಪಿ ಜನಸ್ವರಾಜ್ ಸಮಾವೇಶ

ಬೆಂಗಳೂರು : ಬಿಜೆಪಿಯ ಜನಸ್ವರಾಜ್ ಸಮಾವೇಶವು ನವೆಂಬರ್ 19 ರಿಂದ 21 ರವರೆಗೆ ನಡೆಯಲಿದೆ ಎಂದು ಎಂಎಲ್ ಸಿ ಎನ್. ರವಿಕುಮಾರ್ ಹೇಳಿದ್ದಾರೆ.

ನವೆಂಬರ್ 19 ರಿಂದ 21 ರವರೆಗೆ ಜನಸ್ವರಾಜ್ ಸಮಾವೇಶ ನಡೆಯಲಿದ್ದು, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ಮೊದಲ ಹಂತದ ಯಾತ್ರೆ ನಡೆಯಲಿದೆ.

ಉತ್ತರ ಕನ್ನಡ, ಹಾವೇರಿ, ಧಾರವಾಡ, ಗದಗ, ಬಾಗಲಕೋಟೆ, ವಿಜಯಪುರ, ಚಿಕ್ಕೋಡಿ, ಬೆಳಗಾವಿ ವಿಭಾಗದಲ್ಲಿ ಯಾತ್ರೆ ನಡೆಯಲಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದ ತಂಡ ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ, ಕಲಬುರಗಿ, ಬೀದರ್ನಲ್ಲಿ ಜನಸ್ವರಾಜ್ ಸಮಾವೇಶ ನಡೆಯುತ್ತದೆ.

ಸಚಿವ ಕೆಎಸ್ ಈಶ್ವರಪ್ಪ ನೇತೃತ್ವದ ತಂಡ ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ, ಮಂಗಳೂರು, ಕೊಡಗು, ಮಂಡ್ಯ, ಚಾಮ ರಾಜನಗರ ಮತ್ತು ಹಾಸನದಲ್ಲಿ ಯಾತ್ರೆ ನಡೆಸಲಿದ್ದು, ಮಾಜಿ ಸಿಎಂ ಜಗದೀಶ್ ಶೆಟ್ಟರ್ ನೇತೃತ್ವದ ತಂಡ ದಾವಣಗೆರೆ, ತುಮಕೂರು, ಚಿತ್ರದುರ್ಗ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರದಲ್ಲಿ ಬಿಜೆಪಿ ಜನಸ್ವರಾಜ್ ಸಮಾವೇಶ ನಡೆಯಲಿದೆ.