Thursday, 19th September 2024

ಪರಿಷತ್ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಶೀಘ್ರ ಪ್ರಕಟ

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ಎರಡು ಜಿಲ್ಲೆಗಳನ್ನು ಹೊರತುಪಡಿಸಿ ಅಭ್ಯರ್ಥಿಗಳ ಪಟ್ಟಿ ಗುರುವಾರ ಸಂಜೆ ಅಥವಾ ಶುಕ್ರವಾರ ಪ್ರಕಟವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಚಹೇಳಿದರು.

ಎರಡು ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಜಿಲ್ಲೆಗಳ ಅಭ್ಯರ್ಥಿಗಳ ಪಟ್ಟಿಯನ್ನು ವರಿಷ್ಠರ ಅನುಮೋದನೆಗೆ ಕಳುಹಿಸಿದ್ದೇವೆ. ಅನುಮೋದನೆ ಸಿಗುವ ವಿಶ್ವಾಸವಿದೆ. ವರಿಷ್ಠರು ಪರಿಶೀಲಿಸಿ ಯಾವುದೇ ಸಂದರ್ಭದಲ್ಲೂ ಬಿಡುಗಡೆ ಮಾಡುವ ಸಂಭವವಿದೆ ಎಂದರು.

ಇಂದಿನಿಂದ ರಾಜ್ಯದಲ್ಲಿ ಪಕ್ಷದ ವತಿಯಿಂದ ಜನ ಸ್ವರಾಜ್ ಸಮಾವೇಶವನ್ನು ನಡೆಸು ತ್ತಿದ್ದೇವೆ. ಇಂದು ಕೊಪ್ಪಳದಲ್ಲಿ ಪಕ್ಷದ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟಿಲ್ ಸೇರಿದಂತೆ ಮತ್ತಿತರರು ಭಾಗಿಯಾಗಲಿದ್ದೇವೆ ಎಂದು ತಿಳಿಸಿದರು.

ನಮ್ಮ ನಾಯಕರಾದ ಬಿ.ಎಸ್.ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಕೆ.ಎಸ್.ಈಶ್ವರಪ್ಪ ನೇತೃತ್ವದಲ್ಲಿ ಒಟ್ಟು ನಾಲ್ಕು ತಂಡಗಳನ್ನು ರಚನೆ ಮಾಡಲಾಗಿದೆ. ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಿಗೆ ಭೇಟಿ ನೀಡಲಿದ್ದಾರೆ.

ಒಟ್ಟು ನಾಲ್ಕು ತಂಡಗಳು ರಾಜ್ಯಾದ್ಯಂತ ಪ್ರವಾಸ ನಡೆಸಲಿದ್ದಾರೆ. ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಲು ಮನವಿ ಮಾಡುವರು. ನಾನು 22ರಂದು ಮಡಿಕೇರಿಯಲ್ಲಿ ನಡೆಯಲಿರುವ ಸಮಾವೇಶದಲ್ಲಿ ಭಾಗಿಯಾಗುವುದಾಗಿ ಹೇಳಿದರು.

Leave a Reply

Your email address will not be published. Required fields are marked *