Friday, 22nd November 2024

ರಕ್ತದಾನ ಮಾಡಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಹುಬ್ಬಳ್ಳಿ: ರಾಷ್ಟ್ರೋತ್ಥಾನ ರಕ್ತನಿಧಿಯಲ್ಲಿ ನಡೆದ ರಕ್ತದಾನ ಶಿಬಿರದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ರಕ್ತದಾನ ಮಾಡಿದರು. ಕೇಂದ್ರ ಸಚಿವರಿಗೆ ಮಾಜಿ ಸಿಎಂ ಜಗದೀಶ ಶೆಟ್ಟರ್ ಹಾಗೂ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಸಾಥ್ ನೀಡಿದರು.

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ 72 ನೇ ಜನ್ಮ ದಿನಾಚರಣೆಯನ್ನು ಹುಬ್ಬಳ್ಳಿ ಯಲ್ಲಿ ರಕ್ತದಾನ ಮಾಡುವ ಮೂಲಕ ಮಾದರಿಯಾಗಿ ಆಚರಿಸಲಾಯಿತು. ಹುಬ್ಬಳ್ಳಿ- ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ವಿವಿಧ ಸೇವಾ ಕಾರ್ಯಕ್ರಮಗಳನ್ನ ಹಮ್ಮಿಕೊಳ್ಳ ಲಾಗಿದೆ.

ಸೇವಾ ಪಾಕ್ಷಿಕದ ಹೆಸರಲ್ಲಿ ಬೃಹತ್ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದ್ದು, ಗಿನ್ನಿಸ್ ದಾಖಲೆ ಬರೆಯುವ ಗುರಿ ಹೊಂದಲಾಗಿದೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಹಲವು ಸೇವಾ ಕಾರ್ಯ ಗಳನ್ನು ಹಮ್ಮಿಕೊಳ್ಳಲಾಗಿದೆ. ಹುಬ್ಬಳ್ಳಿ ಧಾರವಾಡದಲ್ಲಿ ಹಲವು ಕಡೆ ಸ್ವಯಂ ಪ್ರೇರಿತ ವಾಗಿ ರಕ್ತದಾನ ಸೇರಿ ವಿವಿದ ಕಾರ್ಯಗಳನ್ನು ಹಮ್ಮಿಕೊಳ್ಳಲಾಗಿದೆ. ಯುವಕರು ಸಾಕಷ್ಠು ಸಂಖ್ಯೆಯಲ್ಲಿ ಆಗಮಿಸಿ ರಕ್ತದಾನ ಮಾಡುತ್ತಿದ್ದಾರೆ. ದಾಖಲೆಯ ಮಟ್ಟದಲ್ಲಿ ರಕ್ತದಾನ ನಡೆಯಲಿದೆ ಎಂದು ಪ್ರಲ್ಹಾದ್ ಜೋಶಿ ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ದೇಶದ ವ್ಯವಸ್ಥೆಯಲ್ಲಿ ಅಮೂಲಾಗ್ರ ಬದಲಾವಣೆ ತಂದಿದ್ದಾರೆ. ಮೋದಿಯವರು ಸ್ವಚ್ಛ, ಸುಸ್ಥಿರ ಸಮರ್ಥ ಆಡಳಿತ ಕೊಟ್ಟವರು. ಏಕಕಾಲಕ್ಕೆ‌ ಕಠೋರ ನಿರ್ಣಯಗಳನ್ನು ತೆಗೆದುಕೊಂಡವರು. ರಾಜಕೀಯವಾಗಿ ನಮ್ಮ ಹಿತಕ್ಕೆ ಇಲ್ಲದಾಗಲೂ ದಿಟ್ಟ ನಿರ್ಧಾರ ಕೈಗೊಂಡಿದ್ದಾರೆ. ಜನನಾಯಕನನ್ನ ಜನರು ಹೇಗೆ ಸ್ವೀಕಾರ ಮಾಡುತ್ತಾರೆ ಎಂಬುವುದಕ್ಕೆ ಇದು ಉದಾಹರಣೆಯಾಗಿದೆ. ಅವರು ನೂರು ವರ್ಷಕ್ಕೂ ಹೆಚ್ಚು ಕಾಲ ಮೋದಿಯವರು ಬಾಳಲಿ ಎಂದು ಹಾರೈಸುತ್ತೇನೆ ಎಂದು ಶುಭಕೋರಿದರು.

ಉಮೇಶ ಕತ್ತಿ ಅವರ‌ದು ಅಕಾಲಿಕ‌ ನಿಧನ. ಜೀವನ ಇದು, ಅವರ‌ ಜಾಗಕ್ಕೆ ಒಳ್ಳೆ ಕಾರ್ಯಕರ್ತರನ್ನ ಹುಡುಕುತ್ತೇವೆ. ಕತ್ತಿಯವರು ಅಭಿವೃದ್ಧಿ ವಿಷಯದಲ್ಲಿ ಒಳ್ಳೆ ಕೆಲಸ ಮಾಡಿದ್ದಾರೆ. ಅಂಥದ್ದೇ ವ್ಯಕ್ತಿಯನ್ನು ಹುಡುಕುತ್ತೇವೆ. ಈ ವೇಳೆ ಟಿಕೆಟ್‌ ಕೊಡುವ ವಿಚಾರಕ್ಕೆ ಇಷ್ಟು ಬೇಗ ಮಾತನಾಡುವದು ಸರಿಯಲ್ಲ ಎಂದು ಜೋಶಿ ಹೇಳಿದರು.