ಬೆಂಗಳೂರು: ರಾಜದಾನಿಯ (Bangalore news) ರೇಸ್ ಕೋರ್ಸ್ ರಸ್ತೆಯಲ್ಲಿರುವ ತಾಜ್ ವೆಸ್ಟ್ ಎಂಡ್ ಹೋಟೆಲ್ಗೆ ಬಾಂಬ್ ಬೆದರಿಕೆ (Bomb Hoax) ಇ-ಮೇಲ್ ಬಂದಿದೆ. ತಾಜ್ ವೆಸ್ಟೆಂಡ್ ಹೋಟೆಲ್ಗೆ ಬಂದಿರುವ ಈ ಬೆದರಿಕೆಯನ್ನು (Bomb threat) ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದು, ಶೋಧ ಕಾರ್ಯ ನಡೆಸುತ್ತಿದ್ದಾರೆ.
ಹೊಟೇಲ್ನಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಇ-ಮೇಲ್ ಬಂದಿದ್ದು, ಈ ಕುರಿತು ಕೂಡಲೇ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ದೂರು ಕೊಡಲಾಗಿದೆ. ತಕ್ಷಣ ಪೊಲೀಸರು ಶೋಧ ಕಾರ್ಯ ಕೈಗೆತ್ತಿಕೊಂಡಿದ್ದಾರೆ. ದುಷ್ಕರ್ಮಿಗಳು ಬಾಂಬ್ ಬೆದರಿಕೆ ಹಾಕಿರುವ ತಾಜ್ ವೆಸ್ಟ್ ಎಂಡ್ ನಗರದ ಲಕ್ಷುರಿ ಹೊಟೇಲ್ಗಳಲ್ಲಿ ಒಂದು. ರಾಜಕಾರಣಿಗಳು, ಕ್ರಿಕೆಟರ್ಗಳು, ಸಿನೆಮಾ ತಾರೆಯರು ಆಗಾಗ ವಾಸ್ತವ್ಯ ಹೂಡುವ ಪ್ರತಿಷ್ಠಿತ ಹೋಟೆಲ್ ಇದಾಗಿದೆ. ಮಾಹಿತಿ ಬಂದ ಕೂಡಲೇ ಘಟನಾ ಸ್ಥಳಕ್ಕೆ ಪೊಲೀಸರು, ಬಾಂಬ್ ಸ್ಕ್ವಾಡ್ ತಂಡ ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಕೆಲವು ತಿಂಗಳ ಹಿಂದೆ ಬೆಂಗಳೂರಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್ಗಳು ಬಂದಿದ್ದವು. ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಸಂಸ್ಥೆಗಳು, ಶಾಲೆಗಳು, ಆಸ್ಪತ್ರೆಗಳು ಮತ್ತು ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ ಮೇಲ್ಗಳನ್ನು ಕಳುಹಿಸುವ ಪ್ರವೃತ್ತಿ ಹೆಚ್ಚುತ್ತಿದೆ. ಈವರೆಗೆ ಬಂದಿರುವುದೆಲ್ಲ ನಕಲಿ ಎಂದು ತನಿಖೆಯಿಂದ ತಿಳಿದುಬಂದಿದೆ. ಆದರೆ ಕಳೆದ ಮಾರ್ಚ್ 1ರಂದು ನಗರದ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟದ ಬಳಿಕ ಅಧಿಕಾರಿಗಳು ಹೈ ಅಲರ್ಟ್ ಆಗಿದ್ದಾರೆ. ಕಳೆದ ಮೇ ತಿಂಗಳಿನಲ್ಲಿ ಕೂಡ ನಗರದ ಕೆಲವು ಫೈವ್ ಸ್ಟಾರ್ ಹೊಟೇಲ್ಗಳಿಗೆ ಹುಸಿ ಬಾಂಬ್ ಬೆದರಿಕೆ ಕರೆ ಬಂದಿತ್ತು.
ಇದನ್ನೂ ಓದಿ: Pratap Simha: ನಿಮ್ಮ ರಕ್ಷಣೆಗೆ ಪೆಟ್ರೋಲ್ ಬಾಂಬ್, ತಲ್ವಾರ್ ಹಿಡಿದು ಶೋಭಾಯಾತ್ರೆಯಲ್ಲಿ ಭಾಗಿಯಾಗಿ: ಪ್ರತಾಪ್ ಸಿಂಹ ಕರೆ