ಬೆಂಗಳೂರು: ಮೇಘಮೈತ್ರಿ ಕನ್ನಡ ಸಾಹಿತ್ಯ ಸಂಘ ಬೆಂಗಳೂರು-ಕಮತಗಿ ಸಹಯೋಗದಲ್ಲಿ ಯಾಜಿ ಪ್ರಕಾಶನದ, ನ್ಯಾಯವಾದಿ ಪ್ರಕಾಶ ಎಂ. ವಸ್ತ್ರದ ಅವರ ‘ಅಡ್ವೊಕೇಟ್ ಡೈರಿʼ ಎಂಬ ಕೃತಿ ಲೋಕಾರ್ಪಣೆ (Book Release) ಕಾರ್ಯಕ್ರಮವನ್ನು ಅ.6 ರಂದು ಭಾನುವಾರ ಸಂಜೆ 4 ಗಂಟೆಗೆ ಬೆಂಗಳೂರು ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್ತಿನ ಅಕ್ಕಮಹಾದೇವಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ಈ ಸುದ್ದಿಯನ್ನೂ ಓದಿ | Vadderse Raghurama Shetty: ‘ವಡ್ಡರ್ಸೆ ರಘುರಾಮ ಶೆಟ್ಟಿ’ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿಗೆ ನಾಮನಿರ್ದೇಶನಗಳಿಗೆ ಆಹ್ವಾನ
ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಎಚ್.ಕೆ. ಪಾಟೀಲ, ಕೃತಿ ಬಿಡುಗಡೆ ಮಾಡುವರು. ಸಾಹಿತಿ ಎಸ್.ಎನ್. ಸೇತುರಾಮ್ ಕೃತಿ ಅವಲೋಕನ ಮಾಡುವರು. ಮುಖ್ಯ ಅತಿಥಿಗಳಾಗಿ ಸಂಯುಕ್ತ ಕರ್ನಾಟಕ ಸಮೂಹ ಸಂಪಾದಕ ಹುಣಸವಾಡಿ ರಾಜನ್, ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ವಿವೇಕ ಸುಬ್ಬಾರೆಡ್ಡಿ, ಯಾಜಿ ಪ್ರಕಾಶನದ ಸವಿತಾ ಯಾಜಿ ಪಾಲ್ಗೊಳ್ಳುವರು. ಮೇಘಮೈತ್ರಿ ಕನ್ನಡ ಸಾಹಿತ್ಯ ಸಂಘ ಬೆಂಗಳೂರು-ಕಮತಗಿ ಅಧ್ಯಕ್ಷ ಎಂ. ರಮೇಶ ಕಮತಗಿ ಉಪಸ್ಥಿತರಿರುವರು. ಚಿತ್ರದುರ್ಗ ಸಂಸದ ಹಾಗೂ ಮಾಜಿ ಡಿಸಿಎಂ ಗೋವಿಂದ ಕಾರಜೋಶ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.