ಶಿವಮೊಗ್ಗ: ಯತ್ನಾಳ್ ಹೊರಗಿನವರಲ್ಲ, ನಮ್ಮವರೇ. ಯಾವುದೋ ಕಾರಣಕ್ಕೆ ಅವರು ಹಾಗೆ ಮಾತನಾಡುತ್ತಿದ್ದಾರೆ. ಎಲ್ಲವನ್ನೂ ಹೈ ಕಮಾಂಡ್ ಕೂತು ಬಗೆಹರಿಸುತ್ತದೆ ಎಂಬ ವಿಶ್ವಾಸವಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ (BS Yediyurappa) ತಿಳಿಸಿದ್ದಾರೆ.
ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬರುವ ಬೆಳಗಾವಿ ಅಧಿವೇಶನದಲ್ಲಿ ಸರ್ಕಾರದ ವೈಫಲ್ಯದ ವಿರುದ್ಧ ನಮ್ಮ ಶಾಸಕರು ಜಾಗೃತಿ ಮೂಡಿಸಲಿದ್ದಾರೆ. ಮುಡಾ ಹಗರಣದ ಬಗ್ಗೆ ಮಾಧ್ಯಮಗಳಲ್ಲಿ ಎಲ್ಲ ವಿವರಗಳು ಹೊರಗೆ ಬರುತ್ತಿವೆ. ನಿವೇಶನ ವಾಪಾಸ್ ನೀಡಿದ್ದರೂ ಅಪರಾಧ ಅಪರಾಧವೇ ಆಗಿದೆ. ಮುಡಾದಲ್ಲಿ ಸಾವಿರಾರು ನಿವೇಶನಗಳನ್ನು ಅಕ್ರಮವಾಗಿ ನೀಡಲಾಗಿದೆ ಎಂಬ ಆರೋಪವಿದೆ. ಇ.ಡಿ. ರಂಗಕ್ಕೆ ಇಳಿಯಬೇಕಾದರೆ ಸೂಕ್ತ ಸಾಕ್ಷ್ಯವಿಲ್ಲದೇ ಅವರು ಬರುವುದಿಲ್ಲ. ಸಾಕಷ್ಟು ಪುರಾವೆ ಸಿಕ್ಕಿದ್ದರಿಂದಲೇ ಇ.ಡಿ. ಪ್ರವೇಶ ಮಾಡಿದೆ ಎಂದರು.
ಬಸನಗೌಡ ಪಾಟೀಲ್ ಯತ್ನಾಳ್ ಬಂಡಾಯ ಪಕ್ಷಕ್ಕೆ ಹಾನಿಯಲ್ಲವೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಎಲ್ಲರೂ ಒಟ್ಟಾಗಿ ಪಕ್ಷವನ್ನು ಮುಂದೆ ತೆಗೆದುಕೊಂಡು ಹೋಗುತ್ತೇವೆ. ಏನೇ ಭಿನ್ನಾಭಿಪ್ರಾಯವಿದ್ದರೂ ಎದುರುಬದುರು ಕೂತು ಚರ್ಚಿಸಿ, ಒಟ್ಟಾಗಿ ಹೋಗುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಎಲ್ಲವೂ ಸರಿಯಾಗುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈ ಸುದ್ದಿಯನ್ನೂ ಓದಿ | Devendra Fadnavis: ಹ್ಯಾಟ್ರಿಕ್ ಸಿಎಂ ಫಡ್ನವೀಸ್ ಹಿನ್ನೆಲೆ ಏನು? ಅವರ ಮುಂದಿರುವ ಸವಾಲುಗಳೇನು?
BS Yediyurappa: ಬಿಎಸ್ ಯಡಿಯೂರಪ್ಪ ವಿರುದ್ಧ ತನಿಖೆಗೆ ರಾಜ್ಯಪಾಲರ ಅನುಮತಿ ಕೋರಿದ ಸರ್ಕಾರ
ಬೆಂಗಳೂರು: ಭ್ರಷ್ಟಾಚಾರ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ (BS Yediyurappa) ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಬೇಕೆಂದು ರಾಜ್ಯ ಸರ್ಕಾರ, ರಾಜ್ಯಪಾಲರಿಗೆ (Governor) ಮನವಿ ಮಾಡಿದೆ. ಈ ಹಿಂದೆ ಸಚಿವ ಸಂಪುಟದಲ್ಲಿ ತೆಗೆದುಕೊಂಡ ತೀರ್ಮಾನದಂತೆ ಬಿಡಿಎ ಹೌಸಿಂಗ್ ನಿರ್ಮಾಣ ಪ್ರಕರಣದಲ್ಲಿ ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಷನ್ಗೆ (Prosecution) ಅನುಮತಿ ಕೋರಿ ರಾಜ್ಯಪಾಲರಿಗೆ ಕಡತ ರವಾನಿಸಿದೆ.
ಬಿಡಿಎ ಹೌಸಿಂಗ್ ನಿರ್ಮಾಣ ಪ್ರಕರಣ ಸಂಬಂಧ ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿಗೆ ಅನುಮತಿ ಕೋರಿ ಮತ್ತೊಮ್ಮೆ ರಾಜ್ಯಪಾಲರಿಗೆ ಮನವಿ ಮಾಡಲು ಕಳೆದ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿತ್ತು. ಅದರಂತೆ ನಿನ್ನೆ ರಾಜ್ಯಪಾಲರಿಗೆ ಬಿಎಸ್ವೈ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ಕೋರಿ ಕಡತ ರವಾನಿಸಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಯಾವ ನಿರ್ಧಾರ ಕೈಗೊಳ್ಳಲಿದ್ದಾರೆ ಎನ್ನುವುದರ ಮೇಲೆ ಬಿಎಸ್ವೈ ಭವಿಷ್ಯ ನಿರ್ಧಾರವಾಗಲಿದೆ.
ಬಿಡಿಎ ಹೌಸಿಂಗ್ ನಿರ್ಮಾಣ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿಜೆ ಅಬ್ರಾಹಂ ದೂರಿನ ಮೇರೆಗೆ 2020ರಲ್ಲೂ ರಾಜ್ಯಪಾಲರಿಗೆ ಅನುಮತಿ ಕೋರಿ ಕಡತ ಮಂಡಿಸಲಾಗಿತ್ತು. ಆದರೆ ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಲು ರಾಜ್ಯಪಾಲರು ತಿರಸ್ಕರಿಸಿದ್ದರು. ಈಗ ಮತ್ತೊಮ್ಮೆ ಸಿದ್ದರಾಮಯ್ಯ ಸರ್ಕಾರ, ಅನುಮತಿ ಮರುಪರಿಶೀಲಿಸುವಂತೆ ಕೋರಿ ಕಡತ ಕಳುಹಿಸಿದೆ.
ಪ್ರಕರಣದ ಹಿನ್ನೆಲೆ:
ಟಿ.ಜೆ. ಅಬ್ರಹಾಂ 2020ರ ನ.19 ರಂದು ಎಸಿಬಿಗೆ ದೂರು ನೀಡಿ, ಭ್ರಷ್ಟಾಚಾರ ನಿಗ್ರಹ ಕಾಯ್ದೆ, ಅಕ್ರಮ ಹಣ ವರ್ಗಾವಣೆ ಕಾಯಿದೆ 2002ರ ಅಡಿ ಯಡಿಯೂರಪ್ಪ ಹಾಗೂ ಕುಟುಂಬ ಸದಸ್ಯರ ವಿರುದ್ದ ಕ್ರಮಕ್ಕೆ ಮನವಿ ಮಾಡಿದ್ದರು. ಆದರೆ, ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾಯಾಲಯವು, ಹಾಲಿ ಮುಖ್ಯಮಂತ್ರಿಗಳಾಗಿರುವ ಯಡಿಯೂರಪ್ಪ ವಿರುದ್ಧ ವಿಚಾರಣೆಗೆ ರಾಜ್ಯಪಾಲರ ಅನುಮತಿ ಅಗತ್ಯ ಎಂದು ಹೇಳಿತ್ತು. ಈ ಹಿನ್ನೆಲೆಯಲ್ಲಿ ಟಿ.ಜೆ. ಅಬ್ರಹಾಂ ಅವರು ರಾಜ್ಯಪಾಲರಿಗೆ ಪ್ರಾಸಿಕ್ಯೂಷನ್ಗೆ ಅನುಮತಿ ನೀಡುವಂತೆ ಮನವಿ ಸಲ್ಲಿಸಿದ್ದರು. ಆದರೆ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ತಿರಸ್ಕರಿಸಿ ದ್ದರು. ಪ್ರಸ್ತುತ ಪ್ರಕರಣ ಸುಪ್ರೀಂ ಕೋರ್ಟ್ನಲ್ಲಿದೆ. ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ಸಿಗದ ಕಾರಣ ಉಳಿದ ಆರೋಪಿಗಳ ಬಗ್ಗೆ ವಿಚಾರಣೆ ನಡೆಯುತ್ತಿದೆ.
2017ರ ಬೆಂಗಳೂರಿನ ಬಿದರಹಳ್ಳಿಯ ಕೋನದಾಸಪುರದಲ್ಲಿ 1 ಮತ್ತು 3 ಬಿಎಚ್ಕೆ ಫ್ ಲ್ಯಾಟ್ ನಿರ್ಮಾಣಕ್ಕೆ 567 ಕೋಟಿ ರು. ಅಂದಾಜು ವೆಚ್ಚದಲ್ಲಿ ಟೆಂಡರ್ ಆಹ್ವಾನಿಸಿತ್ತು. ಈ ವೇಳೆ ರಾಮಲಿಂಗಂ ಕನ್ಕ್ಷನ್ ಕಂಪೆನಿ 666.22 ಕೋಟಿ ರು.ಗೆ (ಅಂದಾಜು ವೆಚ್ಚಕ್ಕಿಂತ 99.22 ಕೋಟಿ ರು. ಹೆಚ್ಚು) ಹಾಗೂ ನಾಗಾರ್ಜುನ ಕನ್ಸ್ಟ್ರಕ್ಷನ್ ಕಂಪನಿ 691.74 ಕೋಟಿ ರು.ಗೆ (ಅಂದಾಜು ವೆಚ್ಚಕ್ಕಿಂತ 124.74 ಕೋಟಿ ರು. ಹೆಚ್ಚು) ಬಿಡ್ ಮಾಡಿದ್ದವು. ನಂತರ 2019ರ ಜು.6 ರಂದು ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕಾರ ಮಾಡಿದ್ದರು.
ಯಡಿಯೂರಪ್ಪ ಸೂಚನೆ ಮೇರೆಗೆ ಡಾ.ಜಿ.ಸಿ. ಪ್ರಕಾಶ್ ಬಿಡಿಎ ಆಯುಕ್ತರಾಗಿ ನೇಮಕಗೊಂಡರು. ‘ಈ ವೇಳೆ ಯಡಿಯೂರಪ್ಪ ಅವರ ಹೆಸರು ಹೇಳಿ ಆಯುಕ್ತರು ರಾಮಲಿಂಗಂ ಬಿಲ್ಡರ್ ಬಳಿ 12 ಕೋಟಿ ರು. ಲಂಚ ಪಡೆದಿದ್ದರು. ಕೆ. ರವಿ ಎಂಬಾತ 12 ಕೋಟಿ ರು. ಹಣವನ್ನು ಪ್ರಕಾಶ್ ಅವರಿಂದ ಪಡೆದು ಬಿ.ವೈ. ವಿಜಯೇಂದ್ರ ಅವರಿಗೆ ಮುಟ್ಟಿಸಿದ್ದ. ವಿಜಯೇಂದ್ರ ಅವರು ಲಂಚದ ಬಗ್ಗೆ ಮಾತನಾಡಿರುವ ಆಡಿಯೋ ಕೂಡ ಲಭ್ಯವಾಗಿತ್ತು’ ಎಂಬುದು ಟಿ.ಜೆ. ಅಬ್ರಹಾಂ ಆರೋಪ.