Sunday, 15th December 2024

ನಾಳೆ ಬಸ್ ಸಂಚಾರ ಬಂದ್ ?

ಬೆಂಗಳೂರು : ಮತ್ತೆ ಕೆಎಸ್ ಆರ್ ಟಿ ಸಿ ಹಾಗೂ ಬಿಎಂಟಿಸಿ ಸಾರಿಗೆ ಬಸ್ ನೌಕರರು ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನಾಳೆಯಿಂದ ಮುಷ್ಕರ ನಡೆಸಲಿದ್ದಾರೆ. ಮಂಗಳವಾರ ಸಂಜೆಯಿಂದಲೇ ಸಾರಿಗೆ ಬಸ್ ನೌಕರರು ಕೆಲಸಕ್ಕೆ ಹಾಜರಾಗುವುದು ಡೌಟ್ ಎನ್ನಲಾಗುತ್ತಿದೆ.

ನಾಳೆಯಿಂದ ರಾಜ್ಯದಲ್ಲಿ ಮತ್ತೆ ಬಿಎಂಟಿಸಿ, ಕೆ ಎಸ್ ಆರ್ ಟಿ ಸಿ ಬಸ್ ನೌಕರರು ಮುಷ್ಕರ ನಡೆಸಲಿದ್ದಾರೆ. ಹೀಗಾಗಿ ಸಾರಿಗೆ ಬಸ್ ಗಳು ಓಡಾಡೋದಿಲ್ಲ.

ಕಳೆದ ಡಿಸೆಂಬರ್ ನಲ್ಲಿ ವಿವಿಧ ಬೇಡಿಕೆ ಈಡೇರಿಕೆಗಾಗಿ ಸಾರಿಗೆ ನೌಕರರು ಮುಷ್ಕರ ನಡೆಸಿದ್ದರು. ಡಿಸೆಂಬರ್ 14ರಂದು ರಾಜ್ಯ ಸರ್ಕಾರ ಲಿಖಿತ ರೂಪದಲ್ಲಿ ಬೇಡಿಕೆ ಈಡೇರಿಸುವ ಭರವಸೆ ನೀಡಿತ್ತು. 9 ಬೇಡಿಕೆಗಳಲ್ಲಿ 8 ಬೇಡಿಕೆ ಈಡೇರಿಸಿದೆ ಎಂಬುದಾಗಿ ಹೇಳುತ್ತಿದೆ. ಈ ಬೇಡಿಕೆ ಈಡೇರಿಕೆಯೇ ಸುಳ್ಳು ಎಂಬುದಾಗಿ ಆರೋಪಿಸಿ, ನಾಳೆ ಮತ್ತೆ ಸಾರಿಗೆ ನೌಕರರು ಮುಷ್ಕರ ನಡೆಸಲಿದ್ದಾರೆ.

ರಾಜ್ಯ ಸರ್ಕಾರ ಬಿಎಂಟಿಸಿ, ಕೆ ಎಸ್ ಆರ್ ಟಿ ಸಿ ಸಾರಿಗೆ ಸಿಬ್ಬಂದಿ ಮುಷ್ಕರ ಹಿನ್ನಲೆಯಲ್ಲಿ ಸರ್ಕಾರಿ ರೂಟ್ ಗಳಲ್ಲಿ ಖಾಸಗಿ ಬಸ್, ಮಿನಿಬಸ್, ಟ್ಯಾಕ್ಸಿ, ಕ್ಯಾಬ್ ಗಳನ್ನು ಓಡಿಸಲು ಅನುಮತಿ ನೀಡಿದೆ ಎನ್ನಲಾಗಿದೆ.

ಕ್ಷಣ ಕ್ಷಣದ ಸುದ್ದಿಗಳಿಗಾಗಿ ವಿಶ್ವವಾಣಿ ಫೇಸ್‌ ಬುಕ್‌ ಪೇಜ್‌ ಲೈಕ್‌ ಮಾಡಿ

https://www.facebook.com/Vishwavanidaily